ಸಿಡಿ ಪ್ರಕರಣ: ವಿಚಾರಣೆಗೆ ರಮೇಶ ಜಾರಕಿಹೊಳಿ ಹಾಜರು

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‌ಐಟಿ ವಿಚಾರಣೆಗೆ ಸೋಮವಾರ ಹಾಜರಾಗಿದ್ದಾರೆ. ವಿಚಾರಣೆ ಆರಂಭವಾಗಬೇಕಿದೆ. ಈ ಸಿಡಿ ಪ್ರಕರಣ ಎಸ್‌ಐಟಿಗೆ ವರ್ಗಾವಣೆಯಾಗಬೇಕಿದ್ದು, ಕಬ್ಬನ್‌ಪಾರ್ಕ್ ಠಾಣೆಯಲ್ಲೇ ಪ್ರಕರಣವಿರುವ ಕಾರಣ, ಟೆಕ್ನಿಕಲ್ ವಿಂಗ್‌ಗೆ ಕಬ್ಬನ್ ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ವಿಚಾರಣೆ ನಡೆಸಲಿದ್ದಾರೆ. ಕೇಂದ್ರ ವಲಯ ಡಿಸಿಪಿ ಅನುಚಿತ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಅಶ್ಲೀಲ … Continued

ಸಿಡಿ ಯುವತಿಯಿಂದ ಹೈಕೋರ್ಟಿಗೆ ಬರೆದ ಪತ್ರದ ವಿಷಯ ಗಾಬರಿ ತರಿಸುವಂತಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಹಲವು ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಸಿಡಿ ಸಂತ್ರಸ್ತೆ, ಇನ್ನೂ ಒಂದೆ ಹೆಜ್ಜೆ ಮುಂದೆ ಹೋಗಿ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರವನ್ನು ಬರೆದಿದ್ದಾರೆ ಎನ್ನುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ … Continued

ಆರೋಪಿ ಬಂಧಿಸದೆ ಯುವತಿ ಹಾಜರಾಗಲು ಭಯಮುಕ್ತ ವಾತಾವರಣ ಸಾಧ್ಯವಿಲ್ಲ; ಯುವತಿ ಪರ ವಕೀಲ ಜಗದೀಶ್

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಸೋಮವಾರ ನ್ಯಾಯಾಲಯದ ಮುಂದೆ ಹಾಜರಾಗಿ ನ್ಯಾಯಾಧೀಶರ ಮುಂದೆಯೇ ಹೇಳಿಕೆಗಳನ್ನು ದಾಖಲಿಸಲಿದ್ದಾಳೆ. ಆದರೆ ಆಕೆ ಬಂದು ಹೇಳಿಕೆಗಳನ್ನು ದಾಖಲಿಸಲು ಒಳ್ಳೆಯ ವಾತಾವರಣ ಕಲ್ಪಿಸಬೇಕು ಎಂದು ಸಿಡಿ ಯುವತಿ ಪರ ವಕೀಲ ಜಗದೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಯುವತಿ ಹೇಳಿಕೆ ರೆಕಾರ್ಡ್ ಮಾಡಲು ಅನುಮತಿ ಕೇಳುತ್ತಿದ್ದೇವೆ. ಯುವತಿಗೆ ಸೂಕ್ತ … Continued

ನನಗೆ ಪ್ರತಿಭಟನೆ ಸ್ವಾಗತ ಕೋರಿದವರಿಗೆ ಅಭಿನಂದನೆಗಳು; ಡಿಕೆಶಿ

ಬೆಳಗಾವಿ: ಪ್ರತಿಭಟನೆ ಮೂಲಕ ನನಗೆ ಸ್ವಾಗತ ಮಾಡುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ಅವರ ಸ್ವಾಗತ, ಪ್ರೀತಿ ವಿಶ್ವಾಸಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಈ ಸ್ವಾಗತವೇ ನಮಗೆ ದೊಡ್ಡ ಶಕ್ತಿಯಾಗುತ್ತದೆ. ಅವರು ಎಂತೆಂಥಾ ಘನಕಾರ್ಯಕ್ಕೆ ಈ ಸ್ವಾಗತ ಮಾಡುತ್ತಿದ್ದಾರೆ ಗೊತ್ತಿದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನ … Continued

ನೀನಾಸಂ ಕೆ.ವಿ.ಸುಬ್ಬಣ್ಣ ಪತ್ನಿ ಶೈಲಜಾ ನಿಧನ

ಸಾಗರ: ಸಾಗರ ತಾಲೂಕಿನ ಹೆಗ್ಗೋಡು ನೀನಾಸಂ ಸಂಸ್ಥೆಯ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ಅವರ ಪತ್ನಿ ಶೈಲಜಾ (೮೫) ಭಾನುವಾರ ಮುಂಡಿಗೇಸರ ಗ್ರಾಮದ ನಿವಾಸದಲ್ಲಿ ನಿಧನರಾದರು. ಮೃತರು ಪುತ್ರ ಕೆ.ವಿ. ಅಕ್ಷರ ಹಾಗೂ ಕುಟುಂಬದ ಸದಸ್ಯರನ್ನು ಅಗಲಿದ್ದಾರೆ. ಕೆ.ವಿ.ಸುಬ್ಬಣ್ಣ ನೀನಾಸಂ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾಗ ಮನೆ ಹಾಗೂ ತೋಟದ ಜವಾಬ್ದಾರಿಯನ್ನು ಶೈಲಜಾ ಅವರೇ ನೋಡಿಕೊಳ್ಳುತ್ತಿದ್ದರು. ಅಲ್ಲದೇ ನೀನಾಸಂ ಸಂಸ್ಥೆಯ ಬೆಳವಣಿಗೆಯಲ್ಲಿ … Continued

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ: ಶಾಸಕ ನಾರಾಯಣಸ್ವಾಮಿ

ಕೋಲಾರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಂಗಾರಪೇಟೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ತಿಳಿಸಿದ್ದಾರೆ. ಜಿಲ್ಲೆಗೆ ಕೆ.ಸಿ.ವ್ಯಾಲಿ ಯೋಜನೆ ಕೊಡುಗೆ ನೀಡಿದ ಸಿದ್ದರಾಮಯ್ಯ ಅವರೇ ಕೋಲಾರ ಕ್ಷೇತ್ರಕ್ಕೆ ಮುಂದಿನ ಅಭ್ಯರ್ಥಿ. ಅವರು ಶಾಸಕರಾದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಲಿದೆ ಎಂದರು. ರಮೇಶಕುಮಾರ, ನಂಜೇಗೌಡ, ನಜೀರ್‌ ಅಹ್ಮದ್‌ ಸೇರಿದಂತೆ ಪಕ್ಷದ ಮುಖಂಡರು ಕೋಲಾರದಿಂದ … Continued

ಸಿಡಿ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿ ನೋಟಿಸ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಪೊಲೀಸರು ನೋಟಿಸ್‌ ನೀಡಿದ್ದು,ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕಬ್ಬನ್‌ ಪಾರ್ಕ್‌ ಪೊಲೀಸರು ರಮೇಶ ಜಾರಕಿಹೊಳಿ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು ತಿಳಿಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ … Continued

ಹಾವೇರಿ: ಹೋಳಿ ಆಡಿ ನದಿಗೆ ಇಳಿದ ಇಬ್ಬರು ಬಾಲಕರು ನೀರು ಪಾಲು

ಹಾವೇರಿ: ಹೋಳಿ ಹಬ್ಬದ ಪ್ರಯುಕ್ತ ನದಿಯಲ್ಲಿ ಸ್ನಾನ ಮಾಡಲು ಹೋದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಹಾವೇರಿ ತಾಲೂಕಿನಲ್ಲಿ ಸಂಭವಿಸಿದೆ. ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಹೇಶ್ ಮುಂಡಣ್ಣನವರ (೧೨) ಮತ್ತು ವೀರೇಶ್ ಅಕ್ಕಿವಳ್ಳಿ (೧೩) ಮೃತಪಟ್ಟಿದ್ದು, ಅವರ ಸೇಹಿತ ಯೋಗಿಶ್ ಅಕ್ಕಿವಳ್ಳಿ (೮) ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೋಳಿ … Continued

ಡಿಕೆಶಿ, ಬೆಂಬಲಿಗರ ಕಾರಿನ ಮೇಲೆ ರಮೇಶ ಜಾರಕಿಹೊಳಿ ಬೆಂಬಲಿಗರ ಕಲ್ಲು ತೂರಾಟ, ಗನ್‌ಮ್ಯಾನ್‌ ಎಳೆದಾಡಿದರು

ಬೆಳಗಾವಿ: ಬೆಳಗಾವಿ ಸಾಂಬ್ರಾ ಏರ್ಪೋರ್ಟ್ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಾಹನಗಳ ಮೇಲೆ ಹಾಗೂ ಎಸ್ಕಾರ್ಟ್‌ ವಾಹನದ ಮೇಲೆ  ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ಮಾಡಿದ್ದಾರೆ. ಡಿ.ಕೆ. ಶಿವಕುಮಾರ ಬೆಂಗಲಿಗರ ಕಾರಿನ ಗಾಜುಗಳು ಪುಡಿಯಾಗಿದೆ. ಅಲ್ಲದೆ ಡಿ.ಕೆ.ಶಿವಕುಮಾರ ಅವರ ಗನ್‌ಮ್ಯಾನ್‌ ಅವರನ್ನು  ಎಳೆದಾಡಿದ್ದಾರೆ. ನಂತರ ಗನ್‌ಮ್ಯಾನ್‌ ಬೇರೆ … Continued

ಪ್ರತಿಭಟನೆಗಳು ಎಸ್‌ಐಟಿ ತನಿಖೆ ಮೇಲೆ ಪ್ರಭಾವ ಬೀರಲ್ಲ: ಬೊಮ್ಮಾಯಿ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳು ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆಯ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಭಟನೆಗಳು ಅಲ್ಲಲ್ಲಿ‌ ನಡೆಯುತ್ತವೆ. ಅವುಗಳನ್ನು ಸ್ಥಳೀಯ … Continued