ಕರ್ನಾಟಕದಲ್ಲಿ ೧ರಿಂದ ೯ನೇ ತರಗತಿ ವರೆಗೆ ಪರೀಕ್ಷೆಯಿಲ್ಲದೆ ತೇರ್ಗಡೆ, ನಾಳೆ ನಿರ್ಧಾರ?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ 1 ರಿಂದ ೯ನೇ ತರಗತಿ ವರೆಗಿನ  ಪರೀಕ್ಷೆ ರದ್ದುಗೊಳಿಸಿ ಹಾಗೆಯೇ ತೇರ್ಗಡೆ ಮಾಡುವ ಚಿಂತನೆ ನಡೆಸಿದೆಯೇ?  ಈ ಬಗ್ಗೆ ಮಾ.೨೯ರಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಖಾತೆ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಡಾ.ಸುಧಾಕರ … Continued

2ನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಕೊರೊನಾ…!!

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಆರಂಭವಾಗಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ ಅವರೇ ಹೇಳಿದ್ದು, ಸರ್ಕಾರ ಸೋಂಕು ಹರಡುವಿಕೆ ತಡೆಯಲು ಹಲವು ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕದಲ್ಲಿ ಶನಿವಾರ 2,886 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21,252. ಬೆಂಗಳೂರು ನಗರದಲ್ಲಿ 1820 ಹೊಸ ಪ್ರಕರಣ ದಾಖಲಾಗಿದೆ. ಆದರೆ ಎರಡನೇ ಅಲೆಯಲ್ಲಿ ಮಕ್ಕಳಲ್ಲಿ ಕೊರೊನಾ … Continued

ತಂದೆ-ಸಹೋದರ ಡಿಕೆಶಿ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸುತ್ತಿರುವ ಸಿಡಿ ಪ್ರಕರಣ ಶನಿವಾರ ಸಾಕಷ್ಟು ತಿರುವು ಕಂಡಿದ್ದು, ಈಗ ಸಿಡಿ ಯುವತಿಯು ೫ನೇ ವಿಡಿಯೋ ಬಿಡುಗಡೆ ಮಾಡಿರುವುದು ಮತ್ತೊಂದು ಟ್ವಿಸ್ಟ್‌ಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ರಮೇಶ್ ಜಾರಕಿಹೊಳಿ ಹಾಗೂ ಸಿಡಿಯಲ್ಲಿ ಇದ್ದಾಳೆ ಎನ್ನಲಾಗುತ್ತಿರುವ ಯುವತಿಯ ಪೋಷಕರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಸಿಡಿ ಯುವತಿಯ ಮತ್ತೊಂದು … Continued

ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಹತಾಶೆ ಮಾತಿಗೆ ಉತ್ತರಿಸುವುದಿಲ್ಲ; ಡಿಕೆಶಿ

ಹೊಸೂರು:’ನನಗೂ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖೆ ಮಾಡಲಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಂತ್ರಸ್ತ ಯುವತಿ ಪೋಷಕರ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಪಾಪ, ಅವರು ಹತಾಶರಾಗಿದ್ದಾರೆ, … Continued

ಕರ್ನಾಟಕದಲ್ಲಿ 2800 ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..!!

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2886 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. 8 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 9,83,930ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,492ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1179 … Continued

ಕೋಲಾರ ಸಂಸದರಿಗೆ ಕೊರೊನಾ ಸೋಂಕು ದೃಢ

ಕೋಲಾರ: ಸಂಸದ ಎಸ್‌.ಮುನಿಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಸಂಸದರು ಬೆಂಗಳೂರಿನ ತಮ್ಮ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದಾರೆ. ಶುಕ್ರವಾರ ಅನಾರೋಗ್ಯದಿಂದ ಬಳಲಿದ ಅವರು, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್‌ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದ ಸಂಸದರು ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದ … Continued

ಸರಕು-ಸೇವಾ ತೆರಿಗೆ ಪರಿಹಾರ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಭಾರೀ ಅನ್ಯಾಯ: ಲದವಾ

ಹುಬ್ಬಳ್ಳಿ: ಜಿಎಸ್‌ಟಿ ಜಾರಿಯಿಂದ ರಾಜ್ಯಗಳಿಗೆ ಆಗಬಹುದಾದ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರಕಾರ ಜಿಎಸ್ಟಿ (ರಾಜ್ಯಗಳ ಪರಿಹಾರ ಸೆಸ್) ಕಾಯ್ದೆ ೨೦೧೭ ಜಾರಿಗೆ ತಂದಿತು. ಹಣಕಾಸು ಆಯೋಗದ ವರದಿ ಆಧಾರ ಪ್ರಕಾರ ರಾಜ್ಯಕ್ಕೆ ಆಗಬಹುದಾದ ೧೪% ಶೇಕಡಾ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರಕಾರ ವಿಶೇಷ ಕಾನೂನು ರಚಿಸಿ ಕೆಲ ವಿಶೇಷ ವಸ್ತುಗಳ ಮೇಲೆ ಸೆಸ್ … Continued

ಡಿಕೆಶಿ ರಾಜಕಾರಣಕ್ಕೆ ನಾಲಾಯಕ್‌, ಆತನ ವಿರುದ್ಧ ದೂರು ದಾಖಲಿಸ್ತೇನೆ, ಅವನಂಥ ನೀಚ ರಾಜಕಾರಣಿ ನೋಡ್ಲಿಲ್ಲ ಎಂದು ಗುಡುಗಿದ ರಮೇಶ ಜಾರಕಿಹೊಳಿ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ. ಮಹಾನಾಯಕ ಯಾರು ಎನ್ನುವುದು ಬಯಲಾಗಿದೆ. ಮಹಾನಾಯಕನ ಹೆಸರನ್ನು ನಾನು ಹೇಳಿಲ್ಲ. ಯುವತಿಯ ಪೋಷಕರು ಹೇಳಿದ್ದಾರೆ. ಆ ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್ ಎಂದು ಅವನು ಗಂಡಸಲ್ಲ ಎಂದು ರಮೇಶ್ ಜಾರಕಿಹೊಳಿ ಟೀಕಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನಿರಪರಾಧಿ … Continued

ನಮ್ಮ ಅಕ್ಕನನ್ನು ಒತ್ತೆಯಾಳಾಗಿಟ್ಟುಕೊಂಡು ಡಿ.ಕೆ. ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ; ಸಿಡಿ ಯುವತಿ ಸಹೋದರನ ನೇರ ಆರೋಪ

ಬೆಂಗಳೂರು; ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಕುಟುಂಬದವರು, ನನ್ನ ಅಕ್ಕನ ಜೊತೆ ಮೊಬೈಲ್ ನಲ್ಲಿ ಚರ್ಚೆ ಮಾಡಿದ ಆಡಿಯೋ ವೈರಲ್ ಆಗಿದೆ. ನಮ್ಮ ಕುಟುಂಬಕ್ಕೆ ಏನೇ ತೊಂದರೆಯಾದರೂ ಡಿ.ಕೆ. … Continued

ಸಿಡಿ ಪ್ರಕರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ:ಎಚ್‌ಡಿಕೆ

ಬೆಂಗಳೂರು: ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದು, ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ … Continued