ವೀಡಿಯೊ…| ಶಿರಸಿ : ಮನೆಯಂಗಳಕ್ಕೆ ಬಂದಿದ್ದ ಬೃಹತ್‌ ಕಾಳಿಂಗ ಸರ್ಪ ಸೆರೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆ ಶಿರಸಿ‌ ತಾಲೂಕಿನ ಮರ್ಲಮನೆ ಗ್ರಾಮದಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಸೆರೆ ಹಿಡಿಯಲಾಗಿದೆ. ಗ್ರಾಮದ ಗಣಪತಿ ಆರ್. ಹೆಗಡೆ ಎಂಬವರ ತೋಟದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಕಾಣಿಸಿಕೊಂಡಿದ್ದ ಕಾಳಿಂಗ ಸರ್ಪ ಅಲ್ಲಿಯೇ ಬೀಡುಬಿಟ್ಟಿತ್ತು. ಸುಮಾರು 10 ಅಡಿ ಉದ್ದದ ಭಾರೀ ಗಾತ್ರದ ಕಾಳಿಂಗ ಸರ್ಪ ತೋಟದಲ್ಲಿ ಓಡಾಡುತ್ತಿತ್ತು. ಎರಡು … Continued

ಹುಲಿ ಉಗುರು ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ನಟ ಜಗ್ಗೇಶ

ಬೆಂಗಳೂರು : ಹುಲಿ ಉಗುರಿನ ಪೆಂಡೆಂಟ್ ವಿವಾದದ ನಡುವೆ, ರಾಜ್ಯಸಭಾ ಸಂಸದ ಮತ್ತು ನಟ ಜಗ್ಗೇಶ ಅವರು ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ ನೋಟಿಸ್‌ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಜಗ್ಗೇಶ ನಿವಾಸದಲ್ಲಿ ನಡೆಸಿದ ಶೋಧದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಜಗ್ಗೇಶ ಅವರು ತಮ್ಮ ಅರ್ಜಿಯಲ್ಲಿ ಅರಣ್ಯಾಧಿಕಾರಿಗಳ ಕಾರ್ಯವೈಖರಿ ಪ್ರಶ್ನಿಸಿದ್ದಾರೆ. ಅಲ್ಲದೆ ತಮಗೆ … Continued

ಮಾಜಿ ಸಿಎಂ ಯಡಿಯೂರಪ್ಪಗೆ ಝಡ್ ಶ್ರೇಣಿ ಭದ್ರತೆ ನೀಡಿದ ಕೇಂದ್ರ

ನವದೆಹಲಿ: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MHA) ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ Z ಕೆಟಗರಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಭದ್ರತೆ ನೀಡಿದೆ. ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಭದ್ರತೆ ಒದಗಿಸಲಾಗುತ್ತದೆ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಶೀಘ್ರದಲ್ಲೇ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಯಡಿಯೂರಪ್ಪ ಅವರಿಗೆ ಕೇಂದ್ರ … Continued

ಇದು ರಸ್ತೆಯಲ್ಲಿ ಓಡುವ ದೇಸೀ ನಾವಿನ್ಯತೆಯ ‘ವಿಶೇಷ ರೈಲು’ | ವೀಕ್ಷಿಸಿ

ಭಾರತವು ವೈವಿಧ್ಯಮಯ ಸಂಸ್ಕೃತಿಗಳು, ಸಂಪ್ರದಾಯಗಳು, ಮೌಲ್ಯಗಳು, ಧರ್ಮಗಳು, ಜಾತಿಗಳು ಮತ್ತು ಪಂಥಗಳ ವ್ಯಾಪಕ ಶ್ರೇಣಿಯ ದೇಶವಾಗಿದ್ದು, ಅಲ್ಲಿ ಜೀವನದ ಎಲ್ಲ ಹಂತಗಳ ಜನರು ಸಹಬಾಳ್ವೆ ನಡೆಸುತ್ತಾರೆ. ವಿಭಿನ್ನ ಸಂಪ್ರದಾಯಗಳ ಸಂಯೋಜನೆಯು ಭಾರತದ ಸೌಂದರ್ಯಕ್ಕೆ ಕೊಡುಗೆ ನೀಡಿದೆ. ಅದರಲ್ಲಿಯೂ ಕೆಲವು ವಿಷಯಗಳು ಭಾರತದಲ್ಲಿ ಮಾತ್ರ ಸಂಭವಿಸಬಹುದು. ಅವುಗಳಲ್ಲಿ, ಕೆಲವು ಹಾಸ್ಯಮಯ ವಸ್ತುಗಳು ಅಂತರ್ಜಾಲದ ಗಮನವನ್ನು ಸೆಳೆದಿವೆ. ವ್ಯಕ್ತಿಯೊಬ್ಬ … Continued

ಚಿಕ್ಕಬಳ್ಳಾಪುರ : ನಿಂತಿದ್ದ ಟ್ಯಾಂಕರ್‌ಗೆ ಟಾಟಾ ಸುಮೋ ಡಿಕ್ಕಿ ; ಮಗು ಸೇರಿ 13 ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗುರುವಾರ ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ. … Continued

ಸಚಿವ ಸಂಪುಟ ಪುನಾರಚನೆ ಚರ್ಚೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು: ಆಡಳಿತ ಪಕ್ಷದ ವಲಯದಲ್ಲಿ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ವರಿಷ್ಠರು ಈ ಬಗ್ಗೆ ತೀರ್ಮಾನಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಯಾಗುವುದರಲ್ಲಿ ತಪ್ಪೇನಿಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಪಕ್ಷದ ಹೈಕಮಾಂಡ್ … Continued

ಹುಲಿ ಉಗುರು ಪ್ರಕರಣ : ನಟ ದರ್ಶನ್, ಜಗ್ಗೇಶ, ರಾಕ್ ಲೈನ್ ವೆಂಕಟೇಶ ನಿವಾಸದಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಸಂಸದ ಜಗ್ಗೇಶ, ಚಾಲೇಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ನಟ ದರ್ಶನ್​, ರಾಜ್ಯಸಭಾ ಸದಸ್ಯ ಜಗ್ಗೇಶ, ರಾಕ್​ಲೈನ್ ವೆಂಕಟೇಶ್ ಮನೆಗೆ ಭೇಟಿ ನೀಡಿ ಪರಿಶೀಲನೆ … Continued

ಹುಲಿ ಉಗುರು ಪ್ರಕರಣ; ನಟ ಜಗ್ಗೇಶ ವಿರುದ್ಧ ದೂರು ದಾಖಲು

ಬೆಂಗಳೂರು : ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ ಬಂಧನದ ಬೆನ್ನಲ್ಲೇ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರಿಗೂ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ ಅವರು ಹುಲಿ … Continued

ಆಕರ್ಷಕ ಜಂಬೂ ಸವಾರಿ, ಪಂಜಿನ ಕವಾಯತಿನೊಂದಿಗೆ ಮೈಸೂರು ದಸರಾಕ್ಕೆ ವರ್ಣರಂಜಿತ ತೆರೆ

ಮೈಸೂರು: ವಿಜಯದಶಮಿಯ ಪ್ರಮುಖ ಆಕರ್ಷಣೆಯಾದ ಮೈಸೂರಿನ ಜಂಬೂ ಸವಾರಿಯನ್ನು ಮಂಗಳವಾರ ಲಕ್ಷಾಂತರ ಜನರು ವೀಕ್ಷಿಸಿದರು. ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಅರಮನೆ ಆವರಣದಿಂದ ಬನ್ನಿಮಂಟಪ ದವರೆಗೂ ಹೊತ್ತು ಸಾಗಿತು. ಇತರ 14 ಗಜಪಡೆಗಳು ಅಭಿಮನ್ಯುವಿಗೆ ಸಾಥ್ ನೀಡಿದವು. ಈ ವೇಳೆ ಕರ್ನಾಟಕದ ಅಶ್ವದಳ ಪೊಲೀಸರ ನೇತೃತ್ವದಲ್ಲಿ … Continued

ನಟ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು : ಹುಲಿ ಉಗುರಿನ ಲಾಕೆಟ್‌ ಧರಿಸಿದ್ದ ಆರೋಪದ ಅಡಿಯಲ್ಲಿ ಬಿಗ್ ಬಾಸ್ 10ನೇ ಆವೃತ್ತಿಯ ಅಭ್ಯರ್ಥಿ ವರ್ತೂರು ಸಂತೋಷ ಅವರ ಬಂಧನದ ಬೆನ್ನಲ್ಲೇ ನಟ ದರ್ಶನ ವಿರುದ್ಧ ಕೂಡ ಹುಲಿ ಉಗುರು ಧರಿಸಿದ ಆರೋಪ ಮಾಡಿ ದೂರು ನೀಡಲಾಗಿದೆ ಎಂದು ವರದಿಯಾಗಿದೆ. ದರ್ಶನ್ ಹುಲಿ ಉಗುರು ಲಾಕೆಟ್ ಧರಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. … Continued