ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್ 8ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು : ನವೆಂಬರ್‌ 4ರಿಂದ 8ರವರೆಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್‌ 4ರಿಂದ 8ರವರೆಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, … Continued

ಅಫಜಲಪುರ : ಭೀಕರ ರಸ್ತೆ ಅಪಘಾತ, ನೇಪಾಳ ಮೂಲದ ಒಂದೇ ಕುಟುಂಬದ ಐವರು ಸಾವು

ಕಲಬುರಗಿ: ಜಿಲ್ಲೆಯ ಅಫಜಲಪುರ ಪಟ್ಟಣದ ಹೊರವಲಯದ ಬಳೂರ್ಗಿ ಕ್ರಾಸ್ ಬಳಿಯ ಅಂತಾರಾಜ್ಯ ರಸ್ತೆಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಅಫಜಲಪುರ ಪಟ್ಟಣದಲ್ಲಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿ ಬೈಕಿನಲ್ಲಿ ಪತ್ನಿ ಹಾಗೂ ಮೂವರು ಮಕ್ಕಳ ಸಮೇತ ದುಧನಿಯಿಂದ ಅಫಜಲಪುರಕ್ಕೆ ಆಗಮಿಸುತ್ತಿದ್ದಾಗ ಈ ದುರ್ಘಟನೆ … Continued

ಐದು ವರ್ಷವೂ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಹೊಸಪೇಟೆ : ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ಕಾಂಗ್ರೆಸ್‌ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡುತ್ತಾರೆ ಎಂದು … Continued

ವೀಡಿಯೊ | ಅಂಕೋಲಾದಲ್ಲಿ ಬೃಹತ್‌ ಕಾಳಿಂಗ ಸರ್ಪ ಸೆರೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೃಷ್ಣಾಪುರದಲ್ಲಿ ಬೃಹತ್‌ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಗಿದೆ. ಅಂಕೋಲಾದ ಕೃಷ್ಣಾಪುರದಲ್ಲಿ ಪ್ರಶಾಂತ ನಾಯಕ ಎಂಬವರ ಮನೆಯ ಸಮೀಪ ಬೃಹತ್ ಕಾಳಿಂಗ ಸರ್ಪ (King Cobra) ಕಾಣಿಸಿಕೊಂಡಿತ್ತು. ಮನೆಯವರು ಕೂಡಲೇ ಸ್ಥಳೀಯ ಉರಗ ತಜ್ಞ ಮಹೇಶ ನಾಯ್ಕ ಎಂಬವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಮಹೇಶ ನಾಯ್ಕ ಅವರು ಗಿಡಗಂಟಿಗಳ … Continued

ವಿಶ್ವಕಪ್ 2023: ಗ್ಲೆನ್ ಮ್ಯಾಕ್ಸ್‌ವೆಲ್ ಬಳಿಕ ಆಸೀಸ್‌ಗೆ ಮತ್ತೊಂದು ಆಘಾತ; ಸ್ಟಾರ್ ಆಲ್‌ರೌಂಡರ್ ಆಸ್ಟ್ರೇಲಿಯಾಕ್ಕೆ ವಾಪಸ್…

ನವದೆಹಲಿ: ಶನಿವಾರ (ನವೆಂಬರ್ 4) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಸೆಣಸಲಿದೆ. ಈ ಮಹತ್ವದ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದ ಕಾರಣ ಆಡುವುದಿಲ್ಲ, ಆದರೆ ಈಘ ಆಸ್ಟ್ರೇಲಿಯಾಕ್ಕೆ ಮತ್ತೊಂದು ಆಗಾತ … Continued

ಚಿಕ್ಕಬಳ್ಳಾಪುರದಲ್ಲಿ ಮಾರಕ ಝೀಕಾ ವೈರಸ್ ಪತ್ತೆ

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿನ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರದಲ್ಲಿ ಮಾರಕ ಝೀಕಾ ವೈರಸ್‌ ಪತ್ತೆಯಾಗಿದೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಝೀಕಾ ವೈರಸ್‌ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿನ ಸೊಳ್ಳೆಗಳಲ್ಲಿ ಮಾರಣಾಂತಿಕ ವೈರಸ್‌ … Continued

ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ದಿಢೀರ್‌ ಬುಲಾವ್

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ಮೂವರು ನಾಯಕರಿಗೆ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ ಎಂದು ವರದಿಯಾಗಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ಪಿ.ಸಿ. ಮೋಹನ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಇಂದು ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಮೂವರೂ ನಾಯಕರಿಗೆ … Continued

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತನಾಡಿದ್ರೆ ಪಕ್ಷದ ಯಾರೇ ಆದ್ರೂ ಶಿಸ್ತು ಕ್ರಮ : ಸುರ್ಜೇವಾಲ ಎಚ್ಚರಿಕೆ

ಬೆಂಗಳೂರು: ಪಕ್ಷದ ಸಂಘಟನೆ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡಬಾರದು. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ … Continued

ಬೆಂಗಳೂರು: ಸೆರೆ ಹಿಡಿಯುವಾಗ ಗುಂಡೇಟಿನಿಂದ ಗಾಯಗೊಂಡಿದ್ದ ಚಿರತೆ ಸಾವು

ಬೆಂಗಳೂರು: ಬೊಮ್ಮಸಂದ್ರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಎರಡು ದಿನಗಳ ತೀವ್ರ ಪ್ರಯತ್ನದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದು ತಕ್ಷಣವೇ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಗಿಸಲಾಯಿತು. ದುರದೃಷ್ಟವಶಾತ್, ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಹಾರಿಸಿದ ಗುಂಡಿನಿಂದ ಉಂಟಾದ ಗಾಯಗಳಿಂದಾಗಿ ನಂತರ ಅದು ಮೃತಪಟ್ಟಿದೆ ಎಂದು ವರದಿಯಾಗಿದೆ. ಚಿರತೆ ಸೆರೆಗೆ ಅರಣ್ಯ … Continued

ಬೆಂಗಳೂರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ ; ಜನರು ನಿರಾಳ

ಬೆಂಗಳೂರು: ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಬುಧವಾರ ಕೊನೆಗೂ ಸೆರೆ ಸಿಕ್ಕಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಂದಿನಿಂದ ಚಿರತೆ … Continued