ಹಲ್ಲೆ ಆರೋಪ ಮಾಡಿದ್ದ ಯುವತಿ ವಿರುದ್ಧ ಜೊಮ್ಯಾಟೋ ಡೆಲಿವರಿ ಬಾಯ್ ದೂರು ದಾಖಲು

ಬೆಂಗಳೂರು: ತನ್ನ ವಿರುದ್ಧ ಹಲ್ಲೆ ಆರೋಪ ಮಾಡಿದ್ದ ಯುವತಿ ವಿರುದ್ಧ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ದೂರು ದಾಖಲಿಸಿದ್ದಾರೆ. ಆಹಾರ ಡೆಲಿವರಿ ವಿಳಂಬವನ್ನು ಪ್ರಶ್ನಿಸಿದ್ದ ಯುವತಿ ಹಿತೇಶಾ ಚಂದ್ರಾನಿ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರಾಜ್ ಸೋಮವಾರ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ರೂಪೇಶ್ ರಾಜಣ್ಣ … Continued

ಭೈರಪ್ಪ ಶ್ರೀರಾಮನ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ತಿರಿ, ಅದೇ ಭಗವಾನ್‌ ಮಾತಾಡಿದ್ರೆ ಮುಖಕ್ಕೆ ಮಸಿ ಹಚ್ತಿರಿ, ಈ ಧೋರಣೆ ಯಾಕೆ?

ಬೆಂಗಳೂರು: ರಾಮ, ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ನೀವು ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಅವರ ಮುಖಕ್ಕೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಸೋಮವಾರ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಸಾಹಿತಿ ಎಸ್.ಎಲ್ ಭೈರಪ್ಪ ಅವರು ರಾಮ ದೇವರಲ್ಲ, ಕೇವಲ … Continued

ಲಾಕ್‌ಡೌನ್‌ ಮಾಡುವುದು, ಬಿಡುವುದು ನಿಮ್ಮ ಕೈಯ್ಲಿದೆ; ಒಂದು ವಾರ ಕಾದು ನೋಡ್ತೇವೆ: ಸಿಎಂ

ಬೆಂಗಳೂರು: ರಾಜ್ಯವನ್ನು ಲಾಕ್‌ ಡೌನ್‌ ಮಾಡುವುದು, ಬಿಡುವುದು ನಿಮ್ಮ ಕೈಯಲ್ಲಿದೆ. ರಾಜ್ಯವನ್ನು ಮತ್ತೊಮ್ಮೆ ಲಾಕ್‌ ಡೌನ್‌ ಮಾಡಬಾರದು ಎಂಬ ಮನಸ್ಸು ನಿಮ್ಮಲ್ಲಿದ್ದರೆ, ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೊನಾ ಮಟ್ಟ ಹಾಕಲು ಇರುವುದು ಇದೊಂದೇ ಮಾರ್ಗ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ರೋಗದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ … Continued

ʼವಲಸೆ ತಡೆಯಲು ದುಡಿಯೋಣ ಬಾʼ ವಿನೋತನ ಯೋಜನೆ ಇಂದಿನಿಂದ ಆರಂಭ

ಬೇಸಿಗೆ ಅವಧಿಯಲ್ಲಿ ನಿರಂತರ ಕೆಲಸ, ಯೋಜನೆಯಿಂದ ಹೊರಗುಳಿದ ಕುಟುಂಬಗಳ ಕ್ರಿಯಾಶೀಲ ಒಳಗೊಳ್ಳುವುದು, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಸ್ವಾವಲಂಬಿಗಳನ್ನಾಗಿಸುವುದು, ಇದಕ್ಕೆ ಪೂರಕವಾಗಿ ಕೆಲಸ, ಕಾಮಗಾರಿ ಬೇಡಿಕೆ ಸಲ್ಲಿಸುವ ವಿಧಾನ ಸರಳಗೊಳಿಸುವುದು ‘ದುಡಿಯೋಣ ಬಾ’ ಅಭಿಯಾನದ ವಿಶೇಷತೆಯಾಗಿದೆ. ಯಾದಗಿರಿ : ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗ್ರಾಮೀ ಜನ ಉದ್ಯೋಗಾವಕಾಶ ಇಲ್ಲದ ಕಾರಣ ಹೊಟ್ಟೆಪಾಡಿಗಾಗಿ ದೊಡ್ಡ ದೊಡ್ಡ ಪಟ್ಟಣಗಳಿಗೆ … Continued

ಸದನದಲ್ಲಿ ಸಿಎಂ ಭರವಸೆ: ಪಂಚಮಸಾಲಿ ಮೀಸಲು ಹೋರಾಟ ತಾತ್ಕಾಲಿಕ ಕೈಬಿಟ್ಟ ಸ್ವಾಮೀಜಿ

ಬೆಂಗಳೂರು: ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ಕೂಡಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಇದನ್ನು ಖಚಿತ ಪಡಿಸಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸರ್ಕಾರ ಈ ನಿಟ್ಟಿನಲ್ಲಿ ಪ್ರಯತ್ನಿಸುವ ಸ್ಪಷ್ಟ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಪಂಚಮಸಾಲಿ ಮೀಸಲಾತಿ ಹೋರಾಟವನ್ನ ತಾತ್ಕಾಲಿಕವಾಗಿ ಕೈಬಿಡುತ್ತಿದ್ದೇವೆ ಎಂದರು. ವಿಜಯಪುರ … Continued

ಕುಮಾರಸ್ವಾಮಿಯವರೇ ಶಕುನಿ, ಮಂಥರೆಯಂಥವರ ಮಾತನ್ನು ದಯವಿಟ್ಟು ಕೇಳಬೇಡಿ: ಮಾರ್ಮಿಕವಾಗಿ ಹೇಳಿದ ಜಿಟಿಡಿ

ಮೈಸೂರು: ಎಚ್‌.ಡಿ.ಕುಮಾರಸ್ವಾಮಿಯವರೇ ನೀವು ಶಕುನಿ, ಮಂಥರೆಯಂಥವರ ಮಾತನ್ನು ದಯವಿಟ್ಟು ಕೇಳಬೇಡಿ ಎಂದು ಚಾಮುಂಡೇಶ್ವರಿ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಶಾಸಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ. ಮೈಸೂರಿನಲ್ಲಿ ಆತನಾಡಿದ ಅವರು, ಶಕುನಿ ಕೌರವನ ಜೊತೆ ಸೇರಿ ಕೌರವ ವಂಶವನ್ನೇ ನಾಶ ಮಾಡಿದ ಉದಾಹರಣೆಯಿದೆ. ಮಂಥರೆ ರಾಮನ ಪಟ್ಟಾಭಿಷೇಕ ತಪ್ಪಿಸಿ … Continued

ತಂದೆ ಶವಸಂಸ್ಕಾರಕ್ಕೆ ಹೂವು ತರಲು ಹೋದ ಮಗನನ್ನೂ ಬಿಡದ ವಿಧಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ತಂದೆಯ ಶವ ಸಂಸ್ಕಾರಕ್ಕೆ ಹೂವು ತರಲೆಂದು ಹೋಗಿದ್ದ ಮಗನೂ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದ್ದು ಈ ಘಟನೆಗೆ ಸ್ಥಳೀಯ ಜನ ಮಮ್ಮಲಮರುಗಿದ್ದಾರೆ. ಶಿರಸಿ ನಗರದ ಎಸ್‌ಬಿಐ ವೃತ್ತದ ಬಳಿ ಈ ದುರ್ಘಟನೆ ನಡೆದಿದ್ದು, ಸಾರಿಗೆ ಸಂಸ್ಥೆಯ ಬಸ್ ಹಾಗೂ ದ್ವಿಚಕ್ರ … Continued

ಐಸಿಸ್ ಸಂಪರ್ಕ: ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ಎನ್‌ಐಎ ದಾಳಿ..!

ನವ ದೆಹಲಿ: ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್‍ಐಎ … Continued

ಕೊರೊನಾ ಸೋಂಕಿತರು: ಬೆಂಗಳೂರು ನಗರ ಜಿಲ್ಲೆ ದೇಶದಲ್ಲಿ ೫ನೇ ನಂಬರ್‌..!

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಅತಿ ಹೆಚ್ಚು ಕೊವಿಡ್‌-೧೯ ಸೋಂಕಿತರಿರುವ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಜಿಲ್ಲೆ ೫ನೇ ಸ್ಥಾನ ಪಡೆದಿರುವುದು ಎಚ್ಚರಿಕೆ ವಹಿಸಬೇಕು ಎಂಬುದರ ಮುನೂಚನೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 6,107 ಸಕ್ರಿಯ ಸೋಂಕಿತರಿದ್ದಾರೆ. 18,474 ಸಕ್ರಿಯ ಸೋಂಕಿತರಿರುವ ಪುಣೆ ಮೊದಲ ಸ್ಥಾನದಲ್ಲಿದೆ. 12,724 ಸಕ್ರಿಯ ಸೋಂಕಿತರಿರುವ ನಾಗಪುರ ಎರಡನೇ ಸ್ಥಾನ, … Continued

ಸಿಡಿ ಪ್ರಕರಣ: ಧ್ವನಿ ಬಗ್ಗೆ ಎಸ್‌ಐಟಿಗೆ ಅನುಮಾನ, ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡವು ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ ಅನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿದೆ. ಸಿಡಿಯಲ್ಲಿದ್ದ 10 ನಿಮಿಷದ ವಿಡಿಯೋದಲ್ಲಿರುವುದು ಚಿಕ್ಕಮಗಳೂರಿನ ವ್ಯಕ್ತಿಯ ಧ್ವನಿ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕಾರಣಕ್ಕೆ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು, ಅದನ್ನು ಎಫ್ ಎಸ್‌ಎಲ್ ಗೆ ಕಳುಸಲಾಗಿದೆ. … Continued