ಬೆಳಗಾವಿಗೆ ನುಗ್ಗಲು ಯತ್ನಿಸಿದ 50ಕ್ಕೂ ಹೆಚ್ಚು ಶಿವಸೇನೆ ಕಾರ್ಯಕರ್ತರ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ 50 ಕ್ಕೂ ಹೆಚ್ಚು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸದಸ್ಯರನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಲಾಗಿದೆ. ಬುಧವಾರ ಬೆಳಗ್ಗೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಯೋಜಿಸಿದ್ದ ‘ಕಪ್ಪು ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಬರುತ್ತಿದ್ದಾಗ ಅವರನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಲಾಗಿದೆ. ಬೆಳಗಾವಿ ಮತ್ತು 840 … Continued

ಬೆಂಗಳೂರು : ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಕರ್ನಾಟಕದ ಹೈಕೋರ್ಟ್‌ ಅನುಮತಿ ನೀಡಿದೆ. ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ. ನವೆಂಬರ್ 1 ರಿಂದ 3ರ ವರೆಗೆ … Continued

ಕನ್ನಡ ಎನೆ ಕುಣಿದಾಡುವುದೆನ್ನೆದೆ…..

(ನವಂಬರ್‌ ೧ರಂದು ೬೮ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಲೇಖನ) ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷ ವಾಕ್ಯದೊಂದಿಗೆ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ರಾಜ್ಯದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಉದಯವಾಗಿ (ನವಂಬರ್ ೧) ೬೮ ವರ್ಷವಾಯಿತು. ಕರ್ನಾಟಕದ ಹೆಸರನ್ನು ಸಾಹಿತಿ ಚದುರಂಗ ಅವರು ಸೂಚಿಸಿದ್ದನ್ನು ಕನ್ನಡಿಗರು ಸದಾ ಸ್ಮರೀಸಬೇಕು. ಕನ್ನಡಿಗರ … Continued

ಶಿರಸಿ-ಕುಮಟಾ ರಸ್ತೆ ಬಂದ್‌ ಆಗುವುದಿಲ್ಲ; ಬಂದ್‌ ಆದೇಶ ವಾಪಸ್‌

ಕಾರವಾರ: ಶಿರಸಿ-ಕುಮಟಾ ಮಾರ್ಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಳು ತಿಂಗಳ ಕಾಲ ಬಂದ್ ಮಾಡುವಂತೆ ನೀಡಿದ್ದ ಆದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕ‌ರ ಅವರು ಹಿಂಪಡೆದಿದ್ದಾರೆ. ಏಳು ತಿಂಗಳವರೆಗೆ ಈ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಂದಲೂ ತೀವ್ರ ವಿರೋಧ ಬಂದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ … Continued

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಈ ಬಾರಿ 68 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ; ಇಲ್ಲಿದೆ ಪಟ್ಟಿ

ಬೆಂಗಳೂರು: ವಿವಿಧ ಕ್ಷೇತ್ರಗಳ ಆಯ್ದ 68 ಸಾಧಕರು ಮತ್ತು 10 ಸಂಸ್ಥೆಗಳಿಗೆ ಈ ಸಲದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥನ್‌ … Continued

ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ದೂರು ದಾಖಲು

 ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಮೇಶ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. … Continued

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸಿಗೆ ಬೆಂಕಿ: ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಸ್ಥಗಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಸೋಮವಾರ ಬೆಂಕಿ ಹಚ್ಚಲಾಗಿದೆ. ಅದರ ನಂತರ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಸೋಮವಾರ ಹೊರಟಿದ್ದ ಬಸ್ (ಕೆಎ-38 ಎಫ್-1201) ಅನ್ನು ಮಹಾರಾಷ್ಟ್ರದ ಉಮರ್ಗಾ … Continued

ಚುನಾವಣಾ ಅಕ್ರಮ ಆರೋಪ : ಶಾಸಕ ಎಚ್‌.ಡಿ. ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಹಿನ್ನೆಲೆಯಲ್ಲಿ ಎಚ್‌ ಡಿ ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತು ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮತ್ತೆ ಸಮನ್ಸ್‌ ಜಾರಿ ಮಾಡಿದೆ. ಪರಾಜಿತ ಅಭ್ಯರ್ಥಿ ಜಿ. ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ … Continued

ಹುಲಿ ಉಗುರಿನ ಪೆಂಡೆಂಟ್‌ ಪ್ರಕರಣ : ನಟ ಜಗ್ಗೇಶ ವಿರುದ್ಧದ ಪ್ರಕ್ರಿಯೆಗೆ ತಡೆ ; ಅಧಿಕಾರಿಗಳ ನಡೆಗೆ ಹೈಕೋರ್ಟ್‌ ಅಸಮಾಧಾನ

ಬೆಂಗಳೂರು : ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ ಅವರ ನಿವಾಸದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಶೋಧನೆಯ ನಂತರದ ಎಲ್ಲಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. ಚಿತ್ರನಟ ಜಗ್ಗೇಶ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ … Continued

ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಬಿಡಲು ಶಿಫಾರಸು

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೋಮವಾರ ಸೂಚನೆ ಶಿಫಾರಸು ಮಾಡಿದೆ. ಸೋಮವಾರ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಕರ್ನಾಟಕವು ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್​ ನೀರು ಹರಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಕಾವೇರಿ ನೀರು ನಿಯಂತ್ರಣಾ … Continued