ಮಾ.೮ರಿಂದ ರಾಜ್ಯದ ೩ ಸಾವಿರ ಕೇಂದ್ರಗಳಲ್ಲಿ ಲಸಿಕೆ ಡೋಸ್‌

ಬೆಂಗಳೂರು: ರಾಜ್ಯದ ಸುಮಾರು 3 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಪ್ರತಿ ದಿನ ಒಂದರಿಂದ ಒಂದೂವರೆ ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 8 ರಿಂದ 3 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಿದ್ದು, … Continued

ಶಸ್ತ್ರ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಸಂಸದ ಹೆಗಡೆ

ಕಾರವಾರ: ಉತ್ತರ ಕನ್ನಡ ಕ್ಷೇತ್ರದ ಸಂಸದ, ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅನಂತಕುಮಾರ್ ಹೆಗಡೆ ಆರೋಗ್ಯದ ಬಗ್ಗೆ ಆಪ್ತ ಸಹಾಯಕರು ಪ್ರಕಟಣೆ ಬಿಡುಗಡೆ ಮಾಡಿದ್ದು, ಕೆಲವು ತಿಂಗಳುಗಳಿಂದ ಬೆನ್ನು ನೋವು ಮತ್ತು ಕಾಲು ನೋವು … Continued

ಸಿಡಿ ಹಗರಣದಲ್ಲಿ ಅನವಶ್ಯಕ ನನ್ನನ್ನು ಎಳೆದು ತರಬೇಡಿ

ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಈ ಪ್ರಕರಣದಲ್ಲಿ ತನ್ನ ಹೆಸರನ್ನು ಅನಗತ್ಯವಾಗಿ ತರಲಾಗುತ್ತಿದೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನ ಹೆಸರು ವಿನಾಕಾರಣ ಎಳೆದು ತರಲಾಗುತ್ತಿದೆ.ತಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ. … Continued

ರಾಜ್ಯದ ೪ ಕಡೆ ಕಿದ್ವಾಯಿ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರ

ಚಿಕ್ಕಬಳ್ಳಾಪುರ: ರಾಜ್ಯದ ನಾಲ್ಕು ಭಾಗಗಳಲ್ಲಿ ಕಿದ್ವಾಯಿ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ರೆಡ್ ಕ್ರಾಸ್ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ಚಿಕ್ಕಬಳ್ಳಾಪುರದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಿದ್ವಾಯಿ ಸಂಸ್ಥೆಯಲ್ಲಿ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. … Continued

ಸಚಿವರ ಮಂಪರು ಪರೀಕ್ಷೆಗೆ ಒಳಪಡಿಸಲು ಕೋರಿ ಶೀಘ್ರವೇ ಅರ್ಜಿ

ಬೆಂಗಳೂರು: ಸಿಡಿ ವಿಚಾರವಾಗಿ ಸಚಿವರುಗಳಿಗೆ ಮಂಪರು ಪರೀಕ್ಷೆ ಮಾಡಬೇಕು ಮತ್ತು ಅವರು ಸಲ್ಲಿಸಿರುವ ನಿರೀಕ್ಷಣಾ ನಿರ್ಬಂಧ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ರಮೇಶ್ ಜಾರಕಿಹೊಳಿ ಮಿತ್ರಮಂಡಳಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಸಚಿವರಾದ ಡಾ.ಕೆ.ಸುಧಾಕರ್, ನಾರಾಯಣಗೌಡ, … Continued

ಬಿಎಸ್‌ವೈ, ಈಶ್ವರಪ್ಪ ಹಗರಣ ಬಯಲಿಗೆಳೆಯುವೆ: ಶಾಸಕ ಸಂಗಮೇಶ ಎಚ್ಚರಿಕೆ

ಬೆಂಗಳೂರು: ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ ಸದನದಿಂದ ಅಮಾನತಾಗಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಾವರು,ಮುಖ್ಯಮಂತ್ರಿ ಯಡಿಯೂರಪ್ಪ, ಅವರು ಪುತ್ರ ರಾಘವೇಂದ್ರ, ಈಶ್ವರಪ್ಪ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಹಾಗೂ … Continued

ಮಾ.30ರ ವರೆಗೆ ‘6 ಸಚಿವರ ವಿರುದ್ಧ ಮಾನಹಾನಿ ವರದಿ ಪ್ರಸಾರಕ್ಕೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ತಮ್ಮ ವಿರುದ್ಧ ಮಾನಹಾನಿಯಾಗುವಂತಹ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮಾರ್ಚ್ 30ರ ವರೆಗೆ ಮಾನಹಾರಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯ ನಂತರ ಹ … Continued

ಖ್ಯಾತ ಕವಿ ಎನ್‌.ಎಸ್‌.ಲಕ್ಷ್ಮೀನಾರಾಯಣ ಭಟ್‌ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ಕವಿ, ಲೇಖಕ ’ಎನ್‌ಎಸ್‌ಎಲ್’ ಎಂದೇ ಹೆಸರುವಾಸಿಯಾದ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ (೮೪) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಶನಿವಾರ ಮುಂಜಾನೆ ೪.೪೫ ಗಂಟೆ ವೇಳೆಗೆ ಬೆಂಗಳೂರಿನ ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಆಧುನಿಕ ಕನ್ನಡ ಕಾವ್ಯ ಪರಂಪರೆಗೆ … Continued

ಮಾ.8ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ರಾಜ್ಯ ಬಜೆಟ್ ಕುರಿತು ಚರ್ಚಿಸುವುದು ಹಾಗೂ ಪ್ರಸ್ತುತ ರಾಜಕೀಯ ವಿಷಯಗಳ ಬಗ್ಗೆ ಸಮಾಲೋಚಿಸಲು ಮಾ.8ರಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. .ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿದ್ದು, ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕಲು ರಣತಂತ್ರ ರೂಪಿಸಲಾಗುತ್ತಿದೆ. ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ ಅವರ ಕುಟುಂಬದ ಮೇಲೆ ದಾಖಲಾಗಿರುವ ಕ್ರಿಮಿನಲ್ … Continued

ಸಂಪುಟದ ರಕ್ಷಣೆಗೆ ನೀವು ತಡೆಯಾಜ್ಞೆ ತರುವುದಿಲ್ಲವೇ: ಬಿಎಸ್‌ವೈಗೆ ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಣ್ಣಿನಲ್ಲಿ ನೋಡಲಾಗದ ಸಿಡಿ ಎಂದು ಹೇಳಿದ್ದಾರೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಂಗ್ರೆಸ್‌ ಲೇವಡಿ ಮಾಡಿದೆ. ಟ್ವಿಟರ್‌ನಲ್ಲಿ ಕಾಂಗ್ರೆಸ್ ಈ ವಿಷಯದಲ್ಲಿ ಬಿಜೆಪಿಯ ವಿರುದ್ಧ ವಾಗದಾಳಿ ನಡೆಸಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ … Continued