ಮಾ.೧೫, ೧೬ರಂದು ಬ್ಯಾಂಕ್‌ ಮುಷ್ಕರ

ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಬ್ಯಾಂಕ್​ ಒಕ್ಕೂಟಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿವೆ. ಹೀಗಾಗಿ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆನರಾ ಬ್ಯಾಂಕ್​ ಹೇಳಿದೆ. ರಾಷ್ಟ್ರೀಯ ಬ್ಯಾಂಕ್​ ಒಕ್ಕೂಟ ಮಾರ್ಚ್​ 15-16ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಗ್ರಾಹಕರಿಗೆ ಬ್ಯಾಂಕ್​ ಸೇವೆಗಳು ಲಭ್ಯ ಇರುವುದಿಲ್ಲ ಎಂದು … Continued

ತುಳಸಿ ಮುನಿರಾಜುಗೌಡಗೆ ಬಿ ಫಾರಂ : ೪ರಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಬುಧವಾರ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜು ಗೌಡ ಅವರಿಗೆ ಬಿ ಫಾರಂ ವಿತರಿಸಿದರು. ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಟೀಲ್ ಅವರು ಬಿ ಫಾರಂ ನೀಡಿ ಶುಭ ಕೋರಿದರು.ನಾಳೆ ತುಳಸಿ ಮುನಿರಾಜುಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.೪ರಂದು ಬೆಳಿಗ್ಗೆ … Continued

ನನ್ನ ಬಳಿ ಇನ್ನೂ ಮೂವರು ಪ್ರಭಾವಿಗಳ ಸಿಡಿ ಇದೆ: ಕಲ್ಲಹಳ್ಳಿ ಮತ್ತೊಂದು ಬಾಂಬ್‌

ಬೆಂಗಳೂರು: ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ, ರಮೇಶ್ ಜಾರಕಿಹೊಳಿ ರಾಸಲೀಲೆ ಎನ್ನಲಾದ ಸಿಡಿ ಪ್ರಕರಣದ ದೂರುದಾರ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ. ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ. … Continued

ಮೀಸಲಾತಿ‌ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ‌ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಪಂಚಮಸಾಲಿ ಸಮುದಾಯ ಪ್ರವರ್ಗ 2 ಎ ಮೀಸಲಾತಿ, ಕುರುಬ … Continued

ಬೆಳಗಾವಿ: ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ಬೆಂಬಲಿಗರಿಂದ ಬಸ್‌ಗಳಿಗೆ ಕಲ್ಲು ತೂರಾಟ

ಬೆಳಗಾವಿ: ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ಅವರು ಯಾವುದೇ ಕಾರಣಕ್ಕೂ ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ ಮಾಡಬಾರದು ಹಾಗೂ ಅವರು ರಾಜೀನಾಮೆ ಹಿಂಪಡೆಯಬೇಕೆಂದು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿದ್ದಾರೆ. ಬೆಳಗಾವಿ, ಗೋಕಾಕಿನ ಕೆಲವೆಡೆ ಮಾರ್ಕೆಟ್ ಬಂದ್ ಮಾಡಿಸುತ್ತಿದ್ದರೆ, ಇನ್ನು ಹಲವಡೆ ಬಸ್ ಗಳ ಮೇಲೆ … Continued

ಸ್ಫೋಟಕ ವಸ್ತುಗಳ ಬಳಕೆ ಪರವಾನಿಗೆ ಪಡೆಯಲು ಇನ್ನಷ್ಟು ಕಾಲಾವಕಾಶ ಕೊಡಿ

ಬೆಂಗಳೂರು; ಕಲ್ಲು ಕ್ವಾರಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಸ್ಫೋಟಕ ವಸ್ತುಗಳ ಪರವಾನಿಗೆ ಪಡೆಯಲು ಗಣಿ ಸುರಕ್ಷತಾ ಮಹಾ ನಿದೇರ್ಶಕರು( ಡಿಜಿಎಂಎಸ್) ನೀಡಿರುವ ಸಮಯಾವಕಾಶವನ್ನು  ಇನ್ನಷ್ಟು ‌ ವಿಸ್ತರಣೆ ಮಾಡುವಂತೆ ಕೋರಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಮನವಿ ಮಾಡಿದೆ. ಬುಧವಾರ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ … Continued

ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಬೆಂಗಳೂರು: ರಮೇಶ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ಸಿಡಿ ಹೊರಬಿದ್ದ ಮಾರನೇ ದಿನ ಬುಧವಾರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಗೀಕರಿಸಿದ್ದಾರೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಿಗೂ ತನಗೂ ಸಮಬಂಧವಿಲ್ಲ, ಅದು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ವಿಯದಲ್ಲಿ ನಾನು ನಿರ್ದೋಷಿಯಾಗುವ ಭರವಸೆಯಿದ್ದರೂ ನೈತಿಕ ಹೊಣೆ … Continued

ರಮೇಶ ಜಾರಕಿಹೊಳಿ ರಾಜೀನಾಮೆ: ಮೂವರು ಬೆಂಬಲಿಗರಿಂದ ಆತ್ಮಾಹುತಿಗೆ ಯತ್ನ

ಬೆಳಗಾವಿ: ರಾಸಲೀಲೆ ಸಿಡಿ ಹೊರಬಿದ್ದ ನಂತರ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಾಹುತಿಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ನಡೆದಿದೆ. ಮೂವರು ಆತ್ಮಾಹುತಿಗೆ ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ … Continued

ರಾಸಲೀಲೆ ಸಿಡಿ ವಿಚಾರ: ಸಿಎಂ, ಬಿಜೆಪಿ ನಾಯಕರ ಬಳಿಯೇ ಪ್ರತಿಕ್ರಿಯೆ ಕೇಳಿ: ಎಚ್‌ಡಿಕೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ವಿಚಾರದ ಆರೋಪ ಕುರಿತು ತಾನು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಲೀಲೆ ಸಿಡಿ ಆರೋಪದ ವಿಚಾರದ ಬಗ್ಗೆ ಚರ್ಚೆ ಮಾಡುವುದು ಶೋಭೆ ತರುವುದಿಲ್ಲ. ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ ಎಂದರು. ಆದರೆ ರಾಜಕೀಯ ವ್ಯಕ್ತಿಗಳ ಈ ರೀತಿಯ … Continued

ಕರ್ನಾಟಕವೂ ಸೇರಿದಂತೆ ೬ ರಾಜ್ಯಗಳ ಕೊರೊನಾ ಸೋಂಕು ಹೆಚ್ಚಳ: ಕೇಂದ್ರ

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಂಜಾಬ್, ಗುಜರಾತ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 14,989 ಕೊರೊನಾ ಸೋಕುಗಳ ವರದಿಯಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ, 7,863 … Continued