ರಸ್ತೆ ತೆರಿಗೆ ಕಟ್ಟದ ಇಬ್ಬರು ಲಾರಿ ಮಾಲಕರು ಜೈಲಿಗೆ!

ದಾವಣಗೆರೆ: ರಸ್ತೆ ತೆರಿಗೆ ಕಟ್ಟದ ಇಬ್ಬರು ಲಾರಿ ಮಾಲಿಕರನ್ನು ನಗರದ ಜೆಎಂಎಫ್‌ಸಿ ನ್ಯಾಯಾಲಯ ಕಾರಾಗೃಹಕ್ಕಟ್ಟಿದೆ. ರಸ್ತೆ ತೆರಿಗೆ ಕಟ್ಟದವರನ್ನು ಜೈಲಿಗೆ ಕಳಿಸಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ಇಲ್ಲಿನ ಬೀಡಿ ಲೇಔಟ್‌ನ ಮಹಮ್ಮದ್‌ ಸಮಿವುಲ್ಲಾ ಹಾಗೂ ಟಿಪ್ಪು ನಗರದ ಮುಬಾರಕ್‌ ಅವರನ್ನು ಜಿಲ್ಲಾ ಕಾರಾಗೃಹಕ್ಕೆ ಕಳಿಸಲಾಗಿದೆ. ತೆರಿಗೆ ಕಟ್ಟಿದ ನಂತರ ಬಿಡುಗಡೆ ಮಾಡಲಾಗುವುದು ಎಂದು ಆರ್‌ಟಿಒ … Continued

ಮೈಸೂರು ಮೇಯರ್‌ ಪಟ್ಟಕ್ಕಾಗಿ ಬಿಜೆಪಿಗೆ ಶಾಕ್‌ ಕೊಟ್ಟ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ

ಮೈಸೂರು: ಅಚ್ಚರಿಯ ಬೆಳವಣಿಗೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಒಂದಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಪಮೇಯರ್‌ ಆಗಿ  ಅನ್ವರ್‌ ಬೇಗ್‌ ಆಯ್ಕೆಯಾಗಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಹಾವು ಮುಂಗುಸಿಯಂತಾಗಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೊನೆಯ ಕ್ಷಣದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು, ಬಿಜೆಪಿಗೆ ಈ ಬೆಳವಣಿಗೆಯಿಂದ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕೆಲವು … Continued

ಅಂತಾರಾಜ್ಯ ಪ್ರಯಾಣ ನಿಷೇಧಿಸಿಲ್ಲ, ಕೊವಿಡ್‌ ನೆಗೆಟಿವ್‌ ವರದಿ ಕಡ್ಡಾಯ ಮಾಡಿದ್ದೇವೆ: ಸಚಿವ ಸುಧಾಕರ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಅಂತಾರಾಜ್ಯ ಪ್ರಯಾಣವನ್ನು ನಿಷೇಧಿಸಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಅಲ್ಲಿಂದ ಬರುವವರು 72 ಗಂಟೆಗೂ ಮುನ್ನ ಕೋವಿಡ್ ಆರ್‍ಟಿ ಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂಬುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಹೋಟೆಲ್, … Continued

ಅನಧಿಕೃತ ಸ್ಫೋಟಕಗಳ ಪತ್ತೆಗೆ ಅಧಿಕಾರಿಗಳಿಗೆ ಸಚಿವ ನಿರಾಣಿ ಕಟ್ಟುನಿಟ್ಟಿನ ಸೂಚನೆ

ಚಿಕ್ಕಬಳ್ಳಾಪುರ ( ಗುಡಿಬಂಡೆ)- ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಯಾರಾದರೂ ಸಂಗ್ರಹಿಸಿಟ್ಟಿದ್ದರೆ, ತಕ್ಷಣವೇ ಪತ್ತೆ ಹಚ್ಚಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ಈ ವೇಳೆ … Continued

ದುರಂತದಲ್ಲೂ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್‌ನವರು: ಸಚಿವ ದಿವಾಕರ ಆರೋಪ

ಬೆಂಗಳೂರು: ನಿಯಮ ಬಾಹಿರವಾಗಿ ಜಿಲಿಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ ಸಂದರ್ಭದಲ್ಲಿ ತಕ್ಷಣವೇ ಆ ಜಿಲೆಟಿನ್‌ ಬೇರೆಡೆ ಸಾಗಿಸುವಾಗ ಹಿರೇನಾಗವಲ್ಲಿ ಬಳಿ ದುರಂತ ಸಂಭವಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸಾವಿನ ಮನೆಯಲ್ಲೂ ತಮ್ಮ ರಾಜಕೀಯ ಬೇಯಿಸಿಕೊಳ್ಳಲು ಮತ್ತು ಇನ್ನೊಬ್ಬರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್‍ನವರಿಗೆ ನಾಚಿಕೆಯಾಗಬೇಕು. … Continued

ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಲಿಂಬಾವಳಿ ರಾಜೀನಾಮೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿಯ “ಒಬ್ಬ ವ್ಯಕ್ತಿ ಒಂದು ಹುದ್ದೆʼ ಸಿದ್ಧಾಂತದನ್ವಯ ಸಚಿವ ಸ್ಥಾನಕ್ಕೇರಿದ್ದರಿಂದ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ ಕಟೀಲ್‌ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ರಾಜ್ಯಕ್ಕೆ ಬಂದ ನಂತರ ಸಚಿವ ನಿರಾಣಿ ಟೀಕೆಗೆ ಸೂಕ್ತ ಉತ್ತರ ಕೊಡುವೆ: ಯತ್ನಾಳ

ನವದೆಹಲಿ: ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಸಚಿವ ಮುರಗೇಶ ನಿರಾಣಿಗೆ ಸೂಕ್ತ ಉತ್ತರ ನೀಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್‌ “ಬಿʼ ಟೀಮ್‌ ಇದ್ದಂತೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರಗೇಶ ನಿರಾಣಿ ಆರೋಪಕ್ಕೆ ಪ್ರತಿಕ್ರಿಯಿಸಿದ  ಯತ್ನಾಳ,  ರಾಜ್ಯದ ಕೆಲ ಸಚಿವರು ನನ್ನ ಹಾಗೂ ನನ್ನ … Continued

ಕೇಳಿದವರಿಗೆಲ್ಲ ಮೀಸಲಾತಿ ಭರವಸೆ ಹಾಸ್ಯಾಸ್ಪದ

ಮೈಸೂರು: ರಾಜಕಾರಣಿಗಳು ಕೇಳಿದವರಿಗೆಲ್ಲ ಮೀಸಲಾತಿಯ ಭರವಸೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಸಂಸದ ಶ್ರೀನಿವಾಸ ಪ್ರಸಾದ ಅಭಿಪ್ರಾಯಪಟ್ಟಿದ್ದಾರೆ. ಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಲಯ ಏನು ನಿರ್ಧಾರ ತೆಗೆದುಕೊಂಡಿದೆ. ಕೇಂದ್ರದ ಅಧಿಕಾರವೇನು? ರಾಜ್ಯ ಸರಕಾರ ಏನು ಮಾಡಬೇಕೆಂಬ ಬಗ್ಗೆ ಯೋಚಿಸದೇ ಮೀಸಲಾತಿ ನೀಡುವ ಭರವಸೆ ನೀಡುತ್ತಿದ್ದಾರೆ ಎಂದರು. ಕರ್ನಾಟಕದಲ್ಲಿ ಮೀಸಲು ವಿವಾದ ಭುಗಿಲೆದ್ದಿದ್ದು, ಹಾದಿ ಬೀದಿಯಲ್ಲಿ ಮೀಸಲಾತಿ ಕುರಿತು … Continued

ಮೀಸಲಾತಿಗೆ ಬಡತನವೇ ಮಾನದಂಡವಾಗಲಿ:ಹೊರಟ್ಟಿ ಸಲಹೆ

ಬೆಂಗಳೂರು: ಮೀಸಲಾತಿ ಪಡೆಯಲು ಬಡತನ, ಆರ್ಥಿಕ ಪರಿಸ್ಥಿತಿಯೇ ಮಾನದಂಡವಾಗಬೇಕು. ಬಡವರಿಗೆ ಮೀಸಲಾತಿ ಸಿಗಬೇಕು ಎಂದು ವಿಧಾನಪರಿಷತ್‌ನ ಸಭಾಪತಿ ಬಸವರಾಜಹೊರಟ್ಟಿ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಕುರಿತಾದ ಚರ್ಚೆಗಳು ನಡೆದಿವೆ.ಕರ್ನಾಟಕದಲ್ಲಷ್ಟೇ ಅಲ್ಲ, ದೇಶಾದ್ಯಂತ ನಡೆದಿದೆ. ಎಲ್ಲ ಅರ್ಹ ಬಡವರಿಗೂ ಮೀಸಲಾತಿ ಸಿಗಬೇಕು. ರಾಜ್ಯದಲ್ಲೂ ವಿವಿಧ ಜಾತಿ, ಸಮುದಾಯಗಳು ಮೀಸಲಾತಿಗೆ ಹೋರಾಟ ನಡೆಸಿವೆ. ಆರ್ಥಿಕ ಪರಿಸ್ಥಿತಿ, ಬಡತನವೇ … Continued

ಹಿರೇನಾಗವಲ್ಲಿ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ:ಸರ್ಕಾರಕ್ಕೆ ಎಚ್‌ಡಿಕೆ ತಾಕೀತು

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಸ್ಫೋಟದಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್‌ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಮತ್ತೊಂದು ದುರ್ಘಟನೆ ನಡೆದಿದ್ದು, ಇಲ್ಲಿಯೂ … Continued