ಕನ್ನಡದ ಖ್ಯಾತ ಕಿರುತೆರೆ ನಟ ಶ್ರೀಧರ ನಾಯಕ ನಿಧನ

ಬೆಂಗಳೂರು: ಕನ್ನಡ ಕಿರುತೆರೆಯ (Kannada Serial) ಖ್ಯಾತ ನಟ ಶ್ರೀಧರ್ ನಾಯಕ (47) ಮೇ 26ರ ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ. ‘ವಧು’ ಸೀರಿಯಲ್‌ನಲ್ಲಿ ನಟಿಸುತ್ತಿದ್ದ ಶ್ರೀಧರ ಅವರು ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದರು. ಇನ್‌ಫೆಕ್ಷನ್‌ನಿಂದ ತೀವ್ರ … Continued

ಕೋವಿಡ್‌ ಸಭೆ | ಮಕ್ಕಳಿಗೆ ಜ್ವರ, ಶೀತ ಇದ್ರೆ ರಜೆ ಕೊಡಲು ಸಿಎಂ ಸೂಚನೆ ; ವೃದ್ಧರು-ಗರ್ಭಿಣಿಯರಿಗೆ ಮಾಸ್ಕ್‌ ಧರಿಸಲು ಸಲಹೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಮತ್ತೆ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಅವರು ಕೊರೋನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಮಸ್ಯೆ ಆಗಬಾರದು. ಕೋವಿಡ್​ ಸಹಾಯವಾಣಿ​​ ತೆರೆಯಬೇಕು … Continued

ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 27, 28 ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಮೇ 27 ಮತ್ತು28ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್‌ಇ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ … Continued

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ; ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಪುನರಾಯ್ಕೆ

ಧಾರವಾಡ: ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಚುನಾವಣೆಯಲ್ಲಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಭರ್ಜರಿ ಗೆಲುವು ಸಾಧಿಸಿದೆ. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ 135 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಒಂದೇ ಬಣದ ಎಲ್ಲ ಅಭ್ಯರ್ಥಿಗಳು … Continued

ಗೋಕಾಕ | ಗೋಡೆ ಕುಸಿದು ಮಗು ಸಾವು ; ಇನ್ನೊಂದು ಮಗುವಿಗೆ ಗಾಯ

ಬೆಳಗಾವಿ: ಜಿಲ್ಲೆಯ ಗೋಕಾಕದ ಮಹಾಲಿಂಗೇಶ್ವರ ಕಾಲೊನಿಯಲ್ಲಿ ಸೋಮವಾರ ನಸುಕಿನಲ್ಲಿ ಮನೆ ಗೋಡೆ ಕುಸಿದು ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ ಹಾಗೂ ಮತ್ತೊಂದು ಮಗುವಿಗೆ ಗಾಯವಾಗಿದೆ. ಮೃತಪಟ್ಟ ಮಗುವನ್ನು ಕೃತಿಕಾ ನಾಗೇಶ ಪೂಜಾರಿ (3.9 ವರ್ಷ) ಎಂದು ಗುರುತಿಸಲಾಗಿದೆ. ಈ ಮಗುವಿನ ಪಕ್ಕದಲ್ಲೇ ಮಲಗಿದ್ದ, ಈಕೆಯ ಐದು ವರ್ಷದ ಅಕ್ಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ … Continued

ಜೂನ್‌ 1ರಿಂದ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ; ಪ್ರವೇಶ ಶುಲ್ಕ ನಿಗದಿ

ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸಭೆಯ ಸಭಾಂಗಣದ ವೀಕ್ಷಣೆಗೆ (vidhana soudha tour) ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ವಿಧಾನಸೌಧ ಗೈಡೆಡ್ ಟೂರ್‌ಗೆ (Guided tour) ಚಾಲನೆ ನೀಡಲಾಗಿದ್ದು, ಪ್ರತಿ ಭಾನುವಾರ, 2 ಮತ್ತು 4ನೇ ಶನಿವಾರ ವಿಧಾನಸೌಧದ ಗೈಡೆಡ್ ಟೂರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಗ್ಗೆ 8ರಿಂದ … Continued

18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಭಾನುವಾರ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ … Continued

ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್‌ ಸೋಂಕಿತ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ 84 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಅವರ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಪಾಸಿಟಿವ್ ಬಂದಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮೇ 13 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರು ಮೇ 17 ರಂದು ನಿಧನರಾದರು. … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು … Continued

ಬೆಳಗಾವಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ; ಮೇಖಳಿಯ ಲೋಕೇಶ್ವರ ಸ್ವಾಮೀಜಿ ಬಂಧನ

ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದ ಮೇಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್​​ ದಾಖಲಿಸಲಾಗಿದೆ. ಅದರಂತೆ, ಮೂಡಲಗಿ ಪೊಲೀಸರು … Continued