ಕರ್ನಾಟಕದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿಗೆ ಪೂರ್ಣ ಬಹುಮತ ; ಪೀಪಲ್ಸ್ ಪಲ್ಸ್ ಸಮೀಕ್ಷೆಯಲ್ಲಿ ಬಹಿರಂಗ….

ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಪೂರ್ಣ ಬಹುಮತದೊಂದಿಗೆ ಜಯಗಳಿಸುತ್ತದೆ ಎಂದು ಹೈದರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಮತ್ತು ಕೊಡೆಮೊ ಟೆಕ್ನಾಲಜೀಸ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯೊಂದು ಹೇಳಿದೆ. 10,481 ಪ್ರತಿಸ್ಪಂದಕರನ್ನು ಒಳಗೊಂಡ ಒಂದು ತಿಂಗಳ ಅವಧಿಯ ಸಮೀಕ್ಷೆಯು, ಈಗ ಚುನಾವಣೆ ನಡೆದರೆ 224 ಸದಸ್ಯರ ವಿಧಾನಸಭೆಯಲ್ಲಿ … Continued

ಶಿರಸಿ-ಕುಮಟಾ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌

ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ … Continued

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ | ಆರೋಪಿಗಳಿಗೆ ಜಾಮೀನು; ಹಿಂಬಾಲಕರೊಂದಿಗೆ ರೋಡ್ ಶೋ…!

ಹಾವೇರಿ: 2024ರ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ್ದು, ಜೈಲಿನಿಂದ ಬಿಡುಗಡೆಗೊಂಡ ಎಲ್ಲಾ ಆರೋಪಿಗಳು ವಿಜಯೋತ್ಸವ ಆಚರಿಸಿದ್ದು, ಹಾವೇರಿಯಿಂದ ಅಕ್ಕಿ ಆಲೂರುವರೆಗೆ ರೋಡ್‌ ಶೋ ನಡೆಸಿರುವ ಘಟನೆ ನಡೆದಿರುವುದು ವರದಿಯಾಗಿದೆ. ಇದರ ನಂತರ ಜಾಮೀನಿನನ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹಾಗೂ … Continued

ಮಂಗಳೂರು ವಿವಿ ‘ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ ‘ದಶರೂಪಕಗಳ ದಶಾವತಾರ’ ಸಂಶೋಧನಾ ಪುಸ್ತಕ ಆಯ್ಕೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ​​​​ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಕೊಡಮಾಡುವ 2024ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ಹಿರಿಯ ಅರ್ಥದಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್.ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ವೇಷಧಾರಿ ಸದಾಶಿವ ಶೆಟ್ಟಿಗಾರ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, … Continued

ಅಂಕೋಲಾ | ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾ: ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock)‌ ಯುವಕನೊಬ್ಬ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಲೂಕಿನ ಅವರ್ಸಾ ದಂಡೇಬಾಗ ಬೇಟೆನಾಸ ದೇವಾಲಯದ ಸಮೀಪದ ನಿವಾಸಿ ಮಹಾಂತೇಶ ದೇವೇಂದ್ರ ಬಾನಾವಳಿಕರ(25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಅವರ್ಸಾದ … Continued

ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ … Continued

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ

ಬೆಂಗಳೂರು: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮಡೆನೂರು ಮನು (Madenuru Manu)ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಅರೆಸ್ಟ್ ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, … Continued

ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ

ಬೆಂಗಳೂರು : ರಾಜ್ಯ ಪ್ರಭಾರಿ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ)ರಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ನೇಮಕವಾಗಿದ್ದಾರೆ. ಅಲೋಕಮೋಹನ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಗೆ ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೇವಾ ಹಿರಿತನ ಆಧಾರದ ಮೇರೆಗೆ ಡಿಜಿ-ಐಜಿಪಿ ಹುದ್ದೆಗೆ ಅಗ್ನಿಶಾಮಕ ದಳದ … Continued

ಬೆಂಗಳೂರು | ಸೂಟ್‌ಕೇಸ್‌ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ

ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿರುವ ರೈಲ್ವೆ ಸೇತುವೆಯ ಬಳಿ ಬುಧವಾರ ಸೂಟ್‌ಕೇಸ್‌ನಲ್ಲಿ ಸುಮಾರು ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆನೇಕಲ್ ತಾಲ್ಲೂಕಿನ ಹೊಸೂರು ಮುಖ್ಯ ರಸ್ತೆಯ ಬಳಿಯ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಹರಿದ ನೀಲಿ ಬಣ್ಣದ ಸೂಟ್‌ಕೇಸ್ ಪತ್ತೆಯಾಗಿದ್ದು, ಅದರೊಳಗೆ ಹುಡುಗಿಯ ಶವ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶವವನ್ನು … Continued