ಬೆಂಗಳೂರು | ಆರ್‌ ಸಿಬಿ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ: 11 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು : ಐಪಿಎಲ್ ಪ್ರಶಸ್ತಿ ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಅಭಿನಂದಿಸುವ ಕಾರ್ಯಕ್ರಮದ ವೇಳೆ ಕನಿಷ್ಠ 11 ಜನರು ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ ಮತ್ತು ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ … Continued

ಒಂದೇ ದಿನದಲ್ಲಿ 1.06 ಕೋಟಿ ಲೀಟರ್ ಹಾಲು ಸಂಗ್ರಹ : ಕೆಎಂಎಫ್ ನಿಂದ ಹೊಸ ದಾಖಲೆ…!

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದ್ದು, ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡಲು ಕೆಎಂಎಫ್‌ಗೆ ಸಾಧ್ಯವಾಗಿದೆ ಎಂದು ಹೇಳಲಾಗಿದೆ. … Continued

ಹುಬ್ಬಳ್ಳಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಾಯ

ಹುಬ್ಬಳ್ಳಿ: ನಿರಂತರ ನೀರು ಪೂರೈಕೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದ ನಗರದ ಮಂಟೂರು ರಸ್ತೆ ಅರಳಿಕಟ್ಟಿ ಓಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಕಾರ್ಮಿಕನನ್ನು ಚೇತನ ಜಾಧವ (೩೫) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ತಾಲೂಕಿನ ಕಡಪಟ್ಟಿ ಹಳ್ಯಾಳ ಗ್ರಾಮದ ಮೌಲಾಸಾಬ್‌ ಮ್ಯಾಗಳಮನಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ … Continued

ಗೌರವ ಡಾಕ್ಟರೇಟ್ ನಿರಾಕರಿಸಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಕುರಿತು ಮೈಸೂರು ಮಾನಸ ಗಂಗೋತ್ರಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಸಚಿವರು ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ … Continued

ನೀವು ಇತಿಹಾಸಕಾರರೋ-ಭಾಷಾಶಾಸ್ತ್ರಜ್ಞರೋ..? ಕನ್ನಡ ಕುರಿತ ಹೇಳಿಕೆಗೆ ನಟ ಕಮಲ ಹಾಸನ್ ತರಾಟೆಗೆ ; ಕ್ಷಮೆ ಕೇಳಲು ಮೌಖಿಕವಾಗಿ ಹೇಳಿದ ಹೈಕೋರ್ಟ್‌

ಬೆಂಗಳೂರು :  “ಕನ್ನಡ ತಮಿಳಿನಿಂದ ಜನಿಸಿದ್ದು” ಎಂದು ನಟ ಕಮಲ್ ಹಾಸನ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದು ಮಂಗಳವಾರ ಹೇಳಿರುವ ಕರ್ನಾಟಕ ಹೈಕೋರ್ಟ್ ಕಮಲ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ.. ಈ ಹೇಳಿಕೆಗಳ ಬಗ್ಗೆ ಆಧಾರವನ್ನು ಕೇಳಿತು … Continued

ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್‌ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ

ಬೆಂಗಳೂರು : ಹಳೆ ಪಿಂಚಣಿ ಯೋಜನೆ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ (OPS) ಪ್ರಸ್ತಾವನೆ ಪರಿಶೀಲಿಸಲು ಮೂರು ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ದಿನಾಂಕ: … Continued

ವಿಜಯಪುರ | ಮನಗೂಳಿ ಕೆನರಾ ಬ್ಯಾಂಕಿನಲ್ಲಿ ಭಾರಿ ಕಳ್ಳತನ ; 59 ಕೆಜಿ ಚಿನ್ನಾಭರಣ ದೋಚಿದ ಕಳ್ಳರು…

ವಿಜಯಪುರ:   ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕಿನಿಂದ ಕಳ್ಳರು 59 ಕೆಜಿ ಚಿನ್ನವನ್ನು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬ್ಯಾಂಕಿನಿಂದ ಸಾಲ ಪಡೆದ ಜನರು ಚಿನ್ನವನ್ನು ಠೇವಣಿ ಇಟ್ಟಿದ್ದರು ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. 59 ಕೆಜಿ ಚಿನ್ನ ಕಳುವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ತೀರ್ಮಾನಕ್ಕೆ … Continued

ವೀಡಿಯೊ | ಬೆಂಗಳೂರು : ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಬಿಹಾರದ ಮಹಿಳೆ ಬಂಧನ ; ಪ್ರಕರಣ ದಾಖಲಾದ ನಂತ್ರ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚನೆ..!

ಬೆಂಗಳೂರು: ಬೆಂಗಳೂರಿನಲ್ಲಿ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಭಾನುವಾರ ಬಂಧಿಸಲಾಗಿದೆ. ಚಾಲಕ ಲೋಕೇಶ ಎಂಬವರಿಗೆ ಚಪ್ಪಲಿಯಿಂದ ಹೊಡೆಯುವವೀಡಿಯೊ ವೈರಲ್ ಆದ ನಂತರ ಪಂಖುರಿ ಮಿಶ್ರಾ (28) ಎಂಬ ಮಹಿಳೆಯನ್ನು ಬಂಧಿಸಲಾಯಿತು. ಈಗ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬೆಳ್ಳಂದೂರು ನಿವಾಸಿ ಪಂಖುರಿ ತನ್ನ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಶನಿವಾರ … Continued

ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್

ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್‌ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, … Continued

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆ‌ರ್.ಎಸ್.ಎಸ್. ಪ್ರಮುಖ ಡಾ.‌ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ … Continued