ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued

ಕರ್ನಾಟಕದಲ್ಲಿ ಶನಿವಾರ 58 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ; ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆ ಮುಂದುವರೆದಿದ್ದು ಶನಿವಾರ (ಮೇ ೩೧) ಹೊಸದಾಗಿ 58 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ವೇಳೆ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ … Continued

ಕಸಾಪ ಅಧ್ಯಕ್ಷ ಮಹೇಶ ಜೋಶಿಗೆ ನೀಡಿದ್ದ ಸಚಿವ ದರ್ಜೆ ಸ್ಥಾನಮಾನ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Mahesh joshi) ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-2 … Continued

ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, … Continued

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಬೆಂಗಳೂರು : ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅಮಾಹುತಕ್ಕೆ ಕಾರಣವಾಗುದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ (red alert) ಘೋಷಣೆ ಮಾಡಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳೀಗೂ ರಜೆ ಘೋಷಿಲಾಗಿದೆ. ಉಡುಪಿ, ದಕ್ಷಿಣ ಕನ್ನಡ, … Continued

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ (Guest Lecturers) ಸೇವೆ ಸಲ್ಲಿಸಿ 60 ವರ್ಷ ಪೂರೈಸಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಸೌಲಭ್ಯಗಳು 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ … Continued

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ; ವಿಟಿಯು ಹೊಸ ದಾಖಲೆ…!

ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸಿ ಹೊಸ ದಾಖಲೆ ಸ್ಥಾಪಿಸಿದೆ…! ಪರೀಕ್ಷೆ ಶುಕ್ರವಾರ (ಮೇ 30) ಸಂಜೆ 5:30ಕ್ಕೆ ಮುಗಿದ್ದು, ಸಂಜೆ 6:30 ಕ್ಕೆ ಪ್ರಕಟಿಸುವ ಮೂಲಕ ಹೊಸ ದಾಖಲೆ ಸ್ಥಾಪಿಸಿದೆ. ವಿಟಿಯು ಈ ಹಿಂದೆ … Continued

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ಮೇ 31ರಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ (ಮೇ 31) ರಂದು ಎಲ್ಲ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, (ಸಿಬಿಎಸ್​ಸಿ, ಐಸಿಎಸ್ಇ ಸೇರಿದಂತೆ), ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ … Continued

ರೆಸಾರ್ಟ್‌ ರಿಸೆಪ್ಶನಿಸ್ಟ್‌ ಅಂಕಿತಾ ಭಂಡಾರಿ ಕೊಲೆ ಪ್ರಕರಣ : ಬಿಜೆಪಿಯ ನಾಯಕನ ಪುತ್ರ, ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ

ಡೆಹ್ರಾಡೂನ್: ಅಂಕಿತಾ ಭಂಡಾರಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಉತ್ತರಾಖಂಡದ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋಟ್ವಾರ್‌ನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಗಳಾದ ಪುಲ್ಕಿತ್ ಆರ್ಯ, ಸೌರಭ ಭಾಸ್ಕರ ಮತ್ತು ಅಂಕಿತ ಗುಪ್ತಾ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 201 (ಸಾಕ್ಷ್ಯ ನಾಶಪಡಿಸುವುದು), 120 ಬಿ (ಕ್ರಿಮಿನಲ್ … Continued

ಮಂಗಳೂರು | ಗುಡ್ಡ ಕುಸಿದು ಅನಾಹುತ ; ಬಾಲಕಿ ಸೇರಿ ಇಬ್ಬರು ಸಾವು, ಅವಶೇಷಗಳಡಿ ಸಿಲುಕಿರುವ ಮೂವರ ರಕ್ಷಣೆಗೆ ಪ್ರಯತ್ನ

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲvew ಅನಾಹುತಗಳು ಸಂಭವಿಸಿವೆ. ಕೆಲವೆಡೆ ಗುಡ್ಡ ಕುಸಿತ (Landslide) ಉಂಟಾಗಿದೆ. ಮಳೆ ಸಂಬಂಧಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದೇರಳಕಟ್ಟೆ ಮೊಂಟೆಪದವಿನ ಪಂಬದ ಹಿತ್ಲುವಿನಲ್ಲಿ ಗುಡ್ಡ ಕುಸಿದು ಮಣ್ಣು ಮನೆಗಳ ಮೇಲೆ ಬಿದ್ದಿದೆ. ಮನೆಗಳ ಅಡಿಯಲ್ಲಿ ಒಂದೇ ಕುಟುಂಬದ ಸಿಲುಕಿಕೊಂಡಿದ್ದಾರೆ. ಅವರಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಓರ್ವರನ್ನು … Continued