ಕನ್ನಡದ ಖ್ಯಾತ ಸಾಹಿತಿ ಎಚ್‌.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕವಿ, ನಾಟಕಕಾರ, ವಿಮರ್ಶಕ, ಪ್ರಾಧ್ಯಾಪಕ, ಭಾವಗೀತ ರಚನಕಾರ, ಚಲನಚಿತ್ರ ನಿರ್ದೇಶಕ, ಕತೆಗಾರ, ಚಿತ್ರಗೀತ ರಚನೆಕಾರ ಆಗಿದ್ದ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಂದು, ಶುಕ್ರವಾರ (ಮೇ 30) ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನ ಎಚ್‌ಎಸ್‌ವಿ ಎಂದೇ ಕರೆಯಲ್ಪಡುತ್ತಿದ್ದ … Continued

ಭಾರೀ ಮಳೆ : ಮೇ 30 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಂಗನವಾಡಿಗಳು, ಶಾಲೆಗಳಿಗೆ ರಜೆ

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೇ 30 ರಂದು ಈ ಎರಡು ಜಿಲ್ಲೆಗಳ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ … Continued

ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ; ಕಾಂಗ್ರೆಸ್‌ ಹುದ್ದೆಗಳಿಗೆ ದಕ್ಷಿಣ ಕನ್ನಡ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ

ಮಂಗಳೂರು : ಅಬ್ದುಲ್ ರಹೀಂ ಅಲಿಯಾಸ್ ಇಮ್ತಿಯಾಜ್ ಹತ್ಯೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ಸಿನ  ಮುಸ್ಲಿಂ ನಾಯಕರು ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದವರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಮತ್ತು ದಕ್ಷಿಣ ಕನ್ನಡ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಶಾಹುಲ್ … Continued

ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ; ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ಸರ್ಕಾರ ಏಕಕಾಲಕ್ಕೆ ವರ್ಗಾವಣೆ ಮಾಡಿ‌ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ … Continued

ಕಲಬುರಗಿ ಜಿಲ್ಲಾಧಿಕಾರಿ ನಿಂದನೆ : ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರಗೆ​ ಹೈಕೋರ್ಟ್ ತರಾಟೆ

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ಕರೆದಿರುವ ಆರೋಪಕ್ಕೆ ಗುರಿಯಾಗಿರುವ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌ ರವಿಕುಮಾರ ನಡೆಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಆದೇಶಿಸಿದೆ. ಅಲ್ಲದೇ, ತರನ್ನುಮ್‌ ಅವರಿಗೆ ಕ್ಷಮೆ ಕೋರಿರುವ ಕುರಿತು ಅಫಿಡವಿಟ್‌ ಸಲ್ಲಿಸುವಂತೆ ಗುರುವಾರ ನಿರ್ದೇಶಿಸಿದೆ. ಕಲಬುರ್ಗಿಯ ಸ್ಟೇಷನ್‌ ಬಜಾರ್‌ … Continued

ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ : ಹುಬ್ಬಳ್ಳಿ ಗಲಭೆ ಸೇರಿ 43 ಪ್ರಕರಣ ಹಿಂಪಡೆದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಹುಬ್ಬಳ್ಳಿ ಗಲಭೆ ಪ್ರಕರಣ (Hubballi Riot) ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ರದ್ದುಗೊಳಿಸಿದೆ. ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ … Continued

ಬೆಳಗಾವಿಯಲ್ಲಿ ಕೊರೊನಾ ಸೋಂಕಿತ ವೃದ್ಧ ಸಾವು

ಬೆಳಗಾವಿ: ಕೊರೊನಾ ಸೋಂಕಿತ ವೃದ್ಧರೊಬ್ಬರು ಬೆಳಗಾವಿಯಲ್ಲಿ ಮೃತಪಟ್ಟಿದ್ದಾರೆ. ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧರು ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ತಾಲೂಕಿನ ವೃದ್ಧರೊಬ್ಬರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಲಾಗಿದೆ. ಅವರು ಮಧುಮೇಹ, ಕಿಡ್ನಿ ತೊಂದರೆ ಸೇರಿದಂತೆ ಕೆಲವು ತೊಂದರೆಯಿಂದ ಬಳಲುತ್ತಿದ್ದರು. ನಂತರ ಅವರಿಗೆ ಕೊರೊನಾ ಲಕ್ಷಣಗಳು ಸಹ … Continued

‘ನಾನು ಪ್ರೀತಿಯಿಂದ ಹೇಳಿದ್ದೇನೆ…ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ…ನಾನು ಕ್ಷಮೆ ಕೇಳಲ್ಲ’: ‘ತಮಿಳು-ಕನ್ನಡ’ ಹೇಳಿಕೆಗೆ ಕಮಲ ಹಾಸನ್

ತಿರುವನಂತಪುರಂ: ಕನ್ನಡ ಭಾಷೆಯ ಮೂಲದ ಬಗ್ಗೆ ಇತ್ತೀಚೆಗೆ ತಾವು ನೀಡಿದ್ದ ಹೇಳಿಕೆಗಳ ಸುತ್ತಲಿನ ವಿವಾದಕ್ಕೆ ಬುಧವಾರ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ. ಹಾಗೂ ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ನಾನು “ಪ್ರೀತಿಯಿಂದ” ಹಾಗೆ ಹೇಳಿದ್ದೇನೆಯೇ ಹೊರತು ಅದರಲ್ಲಿ ಬೇರೆ ಯಾವುದೇ ಅನ್ಯ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಯಾರನ್ನೂ ನೋಯಿಸುವ ಉದ್ದೇಶವನ್ನು ನಾನು … Continued

ಇಂದು (ಮೇ 29) ಕರ್ನಾಟಕದ 6 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಗುರುವಾರ (ಮೇ 29) ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೈಸೂರು, ಉಡುಪಿ, … Continued

ಭಾರಿ ಮಳೆ ಮುನ್ನೆಚ್ಚರಿಕೆ : ಮೇ 29ರಂದು ಉತ್ತರ ಕನ್ನಡ ಜಿಲ್ಲೆಯ ಅಂಗನಾಡಿಗಳಿಗೆ ರಜೆ ಘೋಷಣೆ, ಶಾಲೆಗಳಿಗೆ….

ಕಾರವಾರ: ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಇರುವ ಎಲ್ಲ ಅಂಗನವಾಡಿಗಳಿಗೆ ಮೇ 29 ರಂದು ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯಿ ಮೇ 29ರ ಬೆಳಿಗ್ಗೆ 8:30 ವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯ ಕಿರಿಯ … Continued