ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಮುಂದಾಗಿದ್ದು, ಇದಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು, ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ … Continued

ಮಾಜಿ ಸಿಎಂ ಜಯಲಲಿತಾರ ಆಸ್ತಿ, ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕ ನಿಗದಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಬೆಂಗಳೂರಿನ ವಿಶೇಷ ನ್ಯಾಯಾಲಯವು ಫೆಬ್ರವರಿ 14 ಮತ್ತು 15 ರಂದು ಎರಡು ದಿನಗಳನ್ನು ನಿಗದಿಪಡಿಸಿದೆ. ಸಿಬಿಐ/ಇಡಿ ಪ್ರಕರಣಗಳ ವಿಚಾರಣೆ ನಡೆಸಲು ಸ್ಥಾಪನೆಯಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮೋಹನ ಎಚ್‌.ಎ. … Continued

ಕರ್ನಾಟಕದ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸದಾಗಿ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ; ಪಟ್ಟಿ ಬಿಡುಗಡೆ

ಬೆಂಗಳೂರು : ಕರ್ನಾಟಕದ 23 ಜಿಲ್ಲೆಗಳಿಗೆ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯ ಬಿಜೆಪಿಯು ಆಯ್ಕೆಯಾದ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಬಿಜೆಪಿಯ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದ್ದು, ಬುಧವಾರ ಆಯ್ಕೆಯಾದ ಜಿಲ್ಲಾಧ್ಯಕ್ಷರ ಹೆಸರುಗಳನ್ನು ಜಿಲ್ಲಾ … Continued

ರಾಯಚೂರು | ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಮನಬಂದಂತೆ ಥಳಿತ

ರಾಯಚೂರು: ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ರಾಯಚೂರು (Raichur) ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿಯೋರ್ವನ ಸಾವಿಗೆ ಈ ಮಹಿಳೆಯೇ ಕಾರಣ ಎಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ನಾಲ್ವರು ವ್ಯಕ್ತಿಗಳು ಗ್ರಾಮಸ್ಥರ ಮುಂದೆಯೇ ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಹೇಳಲಾಗಿದೆ. 20 ದಿನದ ಹಿಂದೆ ದುರುಗಪ್ಪ … Continued

ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆ

ಶಿರಸಿ : ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಉತ್ತರ ಕನ್ನಡ ಜಿಲ್ಲೆ ಚುನಾವಣಾಧಿಕಾರಿ ಆರ್.ಕೆ. ಸಿದ್ದರಾಮಣ್ಣ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ದೀನದಯಾಳ ಭವನದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯವನ್ನು ಪಡೆದ ನಂತರ ಸಹಮತದಿಂದಲೇ ಎನ್ ಎಸ್ ಹೆಗಡೆ ಕರ್ಕಿ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ … Continued

ಮಹಾಕುಂಭ ಮೇಳ ; ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರಿಗೆ ಗಾಯ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆ ಎಂಬವರು ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ ಇದ್ದ ಬಾಲಕಿಯರಾದ ಮೇಘಾ, ಜ್ಯೋತಿ ಅವರಿಗೂ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ … Continued

ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ

ಬೆಂಗಳೂರು: ತಜ್ಞರು, ಸಂರಕ್ಷಣಾವಾದಿಗಳು, ನಿವೃತ್ತ ಅರಣ್ಯ ಇಲಾಖೆ ಅಧಿಕಾರಿಗಳ ತೀವ್ರ ವಿರೋಧದ ಹೊರತಾಗಿಯೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೋಗ ಮೀಸಲು ಅರಣ್ಯದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಗೊಳ್ಳುವ ಇಂಧನ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶರಾವತಿ … Continued

ಅಂಕೋಲಾ | ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆ…!

ಅಂಕೊಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ (Ankola) ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ (Car) 1.15 ಕೋಟಿ ರೂ. ಪತ್ತೆಯಾಗಿದ್ದು, ಇದರ ಮೂಲ ಇನ್ನೂ ನಿಗೂಢವಾಗಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಅಂಕೋಲಾ ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆ … Continued

ಬಾಗಲಕೋಟೆ | ಸಾಲಗಾರರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಓಡಾಟ…!

ಬಾಗಲಕೋಟೆ : ಹಲವರಿಂದ ಲಕ್ಷಾಂತರ ರೂ. ಸಾಲ ಮಾಡಿ ನಂತರ ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿಯ ಬುರ್ಖಾ ಧರಿಸಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಥಳಿಸಲಾಗಿದೆ. ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 47ರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಬುರ್ಖಾ ಹಾಕಿಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಸಾಲ ನೀಡಿದವರು ಕೊನೆಗೂ ಹಿಡಿದಿದ್ದು ಮನೆಯಿಂದ ಹೊರಗಡೆ‌ ಎಳೆದು ಥಳಿಸಿದ್ದಾರೆ. ಅಹ್ಮದ್ ಜನಮಸಾಗರ್ … Continued

ತುಮಕೂರು | ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್‌ ಟ್ಯಾಂಕ್‌ ಸ್ಫೋಟ; ಇಬ್ಬರ ಸಾವು, ಮೂವರಿಗೆ ಗಾಯ

ತುಮಕೂರು: ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂತಸರನಹಳ್ಳಿಯಲ್ಲಿರುವ ಇಂಡಸ್ಟ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಟ್ಯಾಂಕ್‌ ಸ್ಪೋಟಗೊಂಡಿದೆ ಎನ್ನಲಾಗಿದೆ. ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಕಾರ್ಮಿಕರನ್ನು ಸಂತೋಷ … Continued