ವೀಡಿಯೊ…| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್…!

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್‌ ಟೆಂಪೊವೊಂದು ತಡೆಗೋಡೆಗೆ ಡಿಕ್ಕಿಯಾದ ನಂತರ ಪೀಸ್‌ ಪೀಸ್‌ ಆದ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ಭೀಕರ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನಭಾರತಿ ಬಳಿಯ ನೈಸ್‌ ರಸ್ತೆಯ ರಾಮಸಂದ್ರ ಸೇತುವೆ ಬಳಿ … Continued

ಹುಡುಗಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿತ

 ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಯುವಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆಕ್ರೋಶಕ್ಕೆ ಕಾರಣವಾದ ಈ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ. ಜೂನ್ 30 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ … Continued

ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು :ಎಐಸಿಸಿಯ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್‌ ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ. ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದ್ದು, ನಾಲ್ಕು ಮಂದಿ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 24 ಸದಸ್ಯರಿರುವ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಅಹಿಂದ ನಾಯಕನಾಗಿ ಯಶಸ್ವಿಯಾಗಿರುವ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳನ್ನು ಸಂಘಟಿಸಿದ ಅನುಭವವಿದೆ ಎಂಬ … Continued

ತುಮಕೂರು : ಲಾಡ್ಜ್‌ನಲ್ಲಿ ದಾವಣಗೆರೆ ಪಿಎಸ್ಐ ಆತ್ಮಹತ್ಯೆ

ತುಮಕೂರು : ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್​ … Continued

ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾಸಂಸ್ಥಾನದ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರ ತನಕ ನಡೆಯಲಿದೆ ಎಂದು‌ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ‌.ಎನ್.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ. ಸೋಂದಾ‌ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಮಠದ ಕಿರಿಯ ಶ್ರೀಗಳಾದ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿ ವ್ಯಾಸ ಪೂಜೆ ನಡೆಸಿ … Continued

ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ಮಹಾಲಕ್ಷ್ಮೀ ಜಾತ್ರೆಯಲ್ಲಿ ಜನಸಂದಣಿಯ ಮಧ್ಯೆಯೇ ಶನಿವಾರ ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ, ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ದಶಕದ ಬಳಿಕ ಗೋಕಾಕದಲ್ಲಿ ಅದ್ದೂರಿ ಜಾತ್ರೆ ನಡೆಯುತ್ತಿದ್ದು, ಜಾರಕಿಹೊಳಿ ಕುಟುಂಬದವರೇ ಮುಂದಾಳತ್ವ ವಹಿಸಿದ್ದಾರೆ. ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ ಜಾರಕಿಹೊಳಿ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು. … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (actress Ranya Rao) ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ … Continued

ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ), ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ (ಜುಲೈ ೪) ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ಎಂಬಾತನನ್ನು ಎನ್‌ಐಎ ತಂಡ … Continued