ಬೆಂಗಳೂರು : ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣ ; ಕಾಲೇಜಿನ ಮೂವರು ಅಮಾನತು

ಬೆಂಗಳೂರು: ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪತ್ರ ಬರೆದಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದರೂ ಈ ಘಟನೆ … Continued

ಒಳ ಮೀಸಲಾತಿ ಹಂಚಿಕೆ : ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾವ ಸಮುದಾಯಗಳಿಗೆ ಎಷ್ಟು?

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವಿಶೇಷ ಸಚಿವ ಸಂಪುಟ ಸಭೆ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಎಡಗೈ ಸಮುದಾಯಕ್ಕೆ 5.25, ಬಲಗೈ ಸಮುದಾಯಕ್ಕೆ 5.25 ಹಾಗೂ ಇತರೆ ಸಮುದಾಯಕ್ಕೆ 4.5ರಷ್ಟು ಒಳ ಮೀಸಲಾತಿ (internal reservation) ಕಲ್ಪಿಸಲು ನಿರ್ಧರಿಸಲಾಗಿದ್ದು, … Continued

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ ; ಆರೋಪ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂಬ ಆರೋಪಿತ ಪ್ರಕರಣದ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ … Continued

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು. ಶೇ..94.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದಾವಣಗೆರೆಯ ಭರತ, ರಾಯಚೂರಿನ ಸುಖದೇವ, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿಯ ಪ್ರೀತಂ, ವಿಜಯಪುರದ ಸೌಜನ್ಯ, ಬೆಂಗಳೂರು ಉತ್ತರದ ಧನುಷ್‌ … Continued

ಕುಮಟಾ : ಏಪ್ರಿಲ್‌ 26ರಂದು ಸಾಧನಾ ಸೌರಭ ಕಾರ್ಯಕ್ರಮ

ಕುಮಟಾ: ಸೌರಭ ಸಂಸ್ಥೆ ವತಿಯಿಂದ ʼಸಾಧನಾ ಸೌರಭ; ಸಾಂಸ್ಕೃತಿಕ ಅನುಸಂಧಾನ ಮತ್ತು ರಾಷ್ಟ್ರೀಯ ಸೌರಭ ಸಮ್ಮಾನ ಪ್ರಶಸ್ತಿ ಪ್ರದಾನ ಸಮಾರಂಭʼ (Sadhana Sourabha)ವನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾಭವನದಲ್ಲಿ ಏಪ್ರಿಲ್‌ 26ರಂದು ಭಾನುವಾರ ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿನವಿಡೀ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್‌ 26ರಂದು ಬೆಳಿಗ್ಗೆ 9:55ಕ್ಕೆ ವೇದಿಕೆ ಕಾರ್ಯಕ್ರಮವನ್ನು ಖ್ಯಾತ … Continued

ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2026) ಗುರುವಾರ (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್‌ ಆ್ಯಪ್‌ (KarnatakaOne Mobile App) ಮೂಲಕ ನೋಡಬಹುದಾಗಿದೆ. ಹಾಗೂ ವಿದ್ಯಾರ್ಥಿಗಳ ನೊಂದಾಯಿತ … Continued

ಕಬಡ್ಡಿ ಪಂದ್ಯಾವಳಿಯಲ್ಲಿ ಬೆಟ್ಟಿಂಗ್: ಗೃಹ ಸಚಿವ ಪರಮೇಶ್ವರ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ಬೆಂಗಳೂರು : ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ವಿರುದ್ಧ ಎಫ್ಐ‌ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿ‌ನಿಧಿಗಳ ವಿಶೇಷ‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಎಚ್ ಆರ್ ನಾಗಭೂಷಣ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ … Continued

ಬೆಂಗಳೂರು : ‘ಫಾರಿನ್‌ ಸ್ಟೈಲ್‌ ಪ್ರಪೋಸಲ್’ ನೆಪದಲ್ಲಿ ಪ್ರಿಯಕರನ ಕೈಕಾಲು ಕಟ್ಟಿ ಹಾಕಿ ಜೀವಂತ ಸುಟ್ಟು ಕೊಂದ ಯುವತಿ !

ಬೆಂಗಳೂರು: ಪ್ರೀತಿಯಲ್ಲಿ ಉಂಟಾದ ವೈಮನಸ್ಸು ಮತ್ತು ನಿರ್ಲಕ್ಷ್ಯದ ಸೇಡು ನಗರದಲ್ಲಿ ಘೋರ ಹತ್ಯೆಯೊಂದಕ್ಕೆ ಸಾಕ್ಷಿಯಾಗಿದೆ. ತನ್ನನ್ನು ನಿರ್ಲಕ್ಷಿಸುತ್ತಿದ್ದಾನೆ ಎಂಬ ಕೋಪದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಹೊಸ ಮಾದರಿಯ ‘ಪ್ರಪೋಸ್’ ಮಾಡುವ ಆಮಿಷವೊಡ್ಡಿ, ಆತನನ್ನು ಕುರ್ಚಿಗೆ ಕಟ್ಟಿ ಹಾಕಿ ಜೀವಂತವಾಗಿ ಸುಟ್ಟು ಕೊಂದಿರುವ ಅಮಾನವೀಯ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಕಿರಣ (27) … Continued

ಎಸ್‌ಎಸ್‌ಎಲ್‌ಸಿ | ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಆದೇಶ ಮರುಪರಿಶೀಲಿಸಲು ನಿರಾಕರಿಸಿದೆ. ಹೈಕೋರ್ಟ್‌ ಆದೇಶದ ಮರುಪರಿಶೀಲನೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಸಂಬಂಧ ಕೆಲವು ಮಾರ್ಪಾಡು … Continued

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಿನಲ್ಲಿ ಚೀನಾದ ‘ಕ್ಷಿಪಣಿ ತಯಾರಿಕೆ ರಾಸಾಯನಿಕ’? ನಿಕ್ಕಿ ಹ್ಯಾಲೆ ಸ್ಫೋಟಕ ಆರೋಪ

ವಾಷಿಂಗ್ಟನ್: ಇರಾನ್ ಮೇಲಿನ ನೌಕಾ ದಿಗ್ಬಂಧನದ ನಡುವೆ ಇತ್ತೀಚೆಗೆ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್‌ಗೆ ಕ್ಷಿಪಣಿ ತಯಾರಿಕೆಗೆ ಬೇಕಾದ ರಾಸಾಯನಿಕಗಳನ್ನು ಸಾಗಿಸುತ್ತಿತ್ತು ಎಂದು ಅಮೆರಿಕದ ರಿಪಬ್ಲಿಕನ್ ಪಕ್ಷದ ನಾಯಕಿ ನಿಕ್ಕಿ ಹ್ಯಾಲೆ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್‌ಗೆ … Continued