ವೈದ್ಯನಾಗುವ ಕನಸು ನನಸಾಗಿಸಲು 64ನೇ ವರ್ಷಕ್ಕೆ ನೀಟ್ ಪರೀಕ್ಷೆ ಪಾಸಾದ ನಿವೃತ್ತ ಎಸ್‍ ಬಿಐ ಉದ್ಯೋಗಿ..!

ಇಲ್ಲೊಬ್ಬರು ತಮ್ಮ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಬಳಿಕ ಶಿಕ್ಷಣವನ್ನು ಮುಂದುವರಿಸಿ ಯಶಸ್ಸನ್ನು ಸಾಧಿಸಿ ತಮ್ಮ ಕನಸನ್ನು ನನಸಾಗಿಸಲು ಹೊರಟಿದ್ದಾರೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI)ದ ನಿವೃತ್ತ ಉದ್ಯೋಗಿ 64 ನೇ ವಯಸ್ಸಿನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET UG) ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಒಡಿಶಾ ಮೂಲದ ಜೈ ಕಿಶೋರ ಪ್ರಧಾನ ಅವರು ಸ್ಟೇಟ್ … Continued

ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಬೆಂಗಳೂರು: ಪತಿ, ಪತ್ನಿ ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದವರು. ಮೃತರನ್ನು ಪತಿ ಅವಿನಾಶ (33), ಪತ್ನಿ ಮಮತಾ (30), ಮಕ್ಕಳಾದ ಆಧೀಯ(5) ಮತ್ತು ಅನಯಾ (3) ಎಂದು ಗುರುತಿಸಲಾಗಿದೆ. ಅವಿನಾಶ್ ಕ್ಯಾಬ್ ಡ್ರೈವರ್ … Continued

ಬೆಂಗಳೂರು ಸೇರಿ ಕರ್ನಾಟಕದ 16 ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ನಿರಂತರ ಭಾರಿ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ … Continued

ವೀಡಿಯೊ..| ಸಿದ್ದಾಪುರ : ಮುಸೆಗಾರ ಗ್ರಾಮದಲ್ಲಿ ಮನೆ ಅಂಗಳಕ್ಕೆ ಬಂದ ಕರಿ ಚಿರತೆ…! ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಸಿದ್ದಾಪುರ: ಉತ್ತರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮುಸೆಗಾರ ಎಂಬ ಗ್ರಾಮದ ಮನೆಯೊಂದರ ಅಂಗಳದಲ್ಲಿ ಕರಿ ಚಿರತೆ ಕಾಣಿಸಿಕೊಂಡಿದೆ. ಸಿದ್ದಾಪುರ ತಾಲೂಕಿನ ಮುಸೆಗಾರಎಂಬ ಗ್ರಾಮದ ಮನೆಯೊಂದರ ಅಂಗಳಲದಲ್ಲಿ ಈ ಕಪ್ಪು ಚಿರತೆ ಕಾಣಿಸಿಕೊಂಡಿದ್ದು, ಈ ಹಿಂದೆಯೂ ಎರಡು ಕಾಣಿಸಿಕೊಂಡಿತ್ತು ಹಾಗೂ ಪ್ರತಿ ಬಾರಿ ಕಾಣಿಸಿಕೊಂಡಾಗಲೂ ನಾಯಿಯನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗಿದೆ. ನಾಯಿ ರುಚಿ ಕಂಡಿರುವ ಚಿರತೆ ಸುಲಭ … Continued

ಈಗ ಕೆಎಎಡಿಬಿಗೆ 5 ಎಕರೆ ಭೂಮಿ ವಾಪಸ್‌ ನೀಡಿದ ಖರ್ಗೆ ಕುಟುಂಬದ ಟ್ರಸ್ಟ್‌

ಬೆಂಗಳೂರು :ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನೀಡಿದ್ದ ೫ ಎಕರೆ ಜಮೀನನ್ನು ವಾಪಸ್ ಮಾಡಲು ಖರ್ಗೆ ಕುಟುಂಬ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ ೧೪ ನಿವೇಶನಗಳನ್ನು ವಾಪಸ್ ಮಾಡಿದ ಬೆನ್ನಲ್ಲೇ ತಮ್ಮ … Continued

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆಯ ವಡಬಾಂಡೇಶ್ವರದ ಬಸ್‌ ನಿಲ್ದಾಣದ ಬಳಿ ಇವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ನಕಲಿ ಆಧಾರ್‌ ಕಾರ್ಡ್ ಸೃಷ್ಟಿಸಿ ಇವರು ಸುಮಾರು 3 ವರ್ಷಗಳಿಂದ ಅಕ್ರಮವಾಗಿ ಮಲ್ಪೆಯಲ್ಲಿ ನೆಲೆಸಿದ್ದರು ಎಂದು ಪೊಲೀಸರು … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : 5 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕ, ಗೋವಾ ಕರಾವಳಿಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 6 ದಿನಗಳವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಆಕ್ಟೊಬರ್ 11 ರಿಂದ 14 ರವರೆಗೆ ಸಾಧಾರಣದಿಂದ ಬಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ … Continued

ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ

ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ  ಲೋಕಾಯುಕ್ತ  ಎಡಿಜಿಪಿ ಎಂ. ಚಂದ್ರಶೇಖರ ದೂರು ದಾಖಲಿಸಿದ್ದಾರೆ ಎಂದು ವರದಿಯಾಗದೆ. ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವ ಬೆದರಿಕೆ ಹಾಗೂ ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಅವರು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ … Continued

ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ … Continued

ಬೀಳಗಿ : ಮೊಸಳೆ ದಾಳಿಯಿಂದ ಮಾಲೀಕನ ಪ್ರಾಣ ಉಳಿಸಿದ ಎತ್ತು…!

ಬಾಗಲಕೋಟೆ : ಮೊಸಳೆ ದಾಳಿಯಿಂದ ತನ್ನ ಮಾಲೀಕನನ್ನು ಎತ್ತು ಕಾಪಾಡಿದೆ. ಬಾಗಲಕೋಟೆ (Bagalkot) ‌ಜಿಲ್ಲೆ ಬೀಳಗಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಧರಿಯಪ್ಪ ಮೇಟಿ (32) ಎಂಬ ರೈತ ಎತ್ತಿನ ಮೈತೊಳೆಯಲು ಹೋದಾಗ ಈ ಘಟನೆ ನಡೆದಿದೆ. ಎತ್ತಿನ‌ ಮೈ ತೊಳೆಯಲು ಆಲಮಟ್ಟಿ ಜಲಾಶಯದ ಹಿನ್ನೀರು ಕೃಷ್ಣಾ ನದಿಗೆ ಧರಿಯಪ್ಪ … Continued