ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ದಿಢೀರ್‌ ರಾಜೀನಾಮೆ

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕಿನ 14 ನಿರ್ದೇಶಕರು ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕವಾಗಿ ಸಭೆ ನಡೆಸಿ ರಮೇಶ ಕತ್ತಿ ವಿರುದ್ಧ ಅವಿಶ್ವಾಸಕ್ಕೆ ಮುಂದಾಗಿದ್ದ ಹಿನ್ನೆಲೆಯಲ್ಲಿ ರಮೇಶ ಕತ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ … Continued

ಆಹಾರ ಅರಸಿ ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಮೈಸೂರು: ನಾಡ ಹಬ್ಬ ದಸರಾ ಸಂದರ್ಭದಲ್ಲೇ ಕಾಡಾನೆಯೊಂದು ಕಂದಕಕ್ಕೆ ಬಿದ್ದು ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ಆನೆಗೆ ಸುಮಾರು 40-೪೫ ವರ್ಷ ಆಗಿರಬಹುದು ಎಂದು ಹೇಳಲಾಗಿದೆ. ಆಹಾರ ಅರಸುತ್ತ ಬಂದ ಕಾಡಾನೆ ಗೊತ್ತಾಗದೆ ಕಂದಕಕ್ಕೆ ಬಿದ್ದಿದ್ದು, ಪರಿಣಾಮ ದಾರುಣವಾಗಿ ಮೃತಪಟ್ಟಿದೆ. ಮಲ್ಲಹಳ್ಳಿ … Continued

ಕರ್ನಾಟಕದಲ್ಲಿ ನಾಲ್ಕೈದು ದಿನ ವ್ಯಾಪಕ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 03 ರಿಂದ ಅಕ್ಟೋಬರ್ 11 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 7 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು … Continued

ವೀಡಿಯೊ..: ಸಾವರ್ಕರ್ ದನದ ಮಾಂಸ ತಿನ್ನುತ್ತಿದ್ದರು, ಗೋಹತ್ಯೆಯ ವಿರುದ್ಧ ಇರಲಿಲ್ಲ : ಭಾರೀ ವಿವಾದಕ್ಕೆ ಕಾರಣವಾದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರುದ್ಧ ಇರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಚಿತ್ಪಾವನ ಬ್ರಾಹ್ಮಣ’ರಾದ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಗೋಮಾಂಸವನ್ನೂ ತಿನ್ನುತ್ತಿದ್ದರು ಎಂದು … Continued

ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಪರ ಬ್ಯಾಟ್‌ ಬೀಸಿದ ಜೆಡಿಎಸ್‌ ನಾಯಕ..

ಮೈಸೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್‌ ನಾಯಕ ಜಿ.ಟಿ.ದೇವೇ ಗೌಡ ಹೇಳುವ ಮೂಲಕ ಸಿದ್ದರಾಮಯ್ಯ ಅವರ ಬ್ಯಾಟ್‌ ಬೀಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ … Continued

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು : ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ವಿಜಯ ಟಾಟಾ ಅವರು ಸುಲಿಗೆ ಮತ್ತು ಜೀವ ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ದೂರಿನಲ್ಲಿ ಭದ್ರತೆಯನ್ನೂ ಕೋರಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯ ಟಾಟಾ ಅವರು … Continued

ವಿಧಾನ ಪರಿಷತ್ ಉಪಚುನಾವಣೆ :ಕಾಂಗ್ರೆಸ್ ಅ‌ಭ್ಯರ್ಥಿ ಘೋಷಣೆ

ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೊನೆಗೂ ತನ್ನ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರ ಹೆಸರನ್ನು ಬುಧವಾರದಂದು ಘೋಷಣೆ ಮಾಡಿದೆ. ಪ್ರಮುಖ ಎದುರಾಳಿಯಾಗಿರುವ ಬಿಜೆಪಿ ಈಗಾಗಲೇ ಕಿಶೋರ್ ಕುಮಾರ್ ಅವರ ಹೆಸರನ್ನು ಪ್ರಕಟಿಸಿದೆ.1994ರಲ್ಲಿ ಗ್ರಾಮ ಪಂಚಾಯತ್ … Continued

ವೀಡಿಯೊ..| ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡೇ ಸಿಎಂ ಸಿದ್ದರಾಮಯ್ಯ ಶೂ ತೆಗೆದ ಕಾಂಗ್ರೆಸ್‌ ಕಾರ್ಯಕರ್ತ ; ವ್ಯಾಪಕ ಟೀಕೆ

ಬೆಂಗಳೂರು: ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಅಂಗವಾಗಿ ಬುಧವಾರ ನಡೆದ ಕಾರ್ಯಕ್ರಮ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕರ್ತರೊಬ್ಬರ ಕೈಯಲ್ಲಿ ಬೂಟುಗಳನ್ನು ತೆಗೆಸಿಕೊಂಡಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಕಾರ್ಯಕರ್ತ ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡೇ ಶೂ ಬಿಚ್ಚಿರುವುದು ಈಗ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ … Continued

ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿದ ಇ.ಡಿ.; ಅಧಿಕಾರಿಗಳಿಗೆ ಶುರುವಾಯ್ತು ಭಯ…

ಬೆಂಗಳೂರು : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ. ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂಮಿ ಮಾರಾಟ ಮಾಡಿದ್ದ ದೇವರಾಜ ವಿರುದ್ಧ ಅಕ್ರಮ ಹಣ ವರ್ಗಾವಣೆ … Continued

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಘೋಷಣೆ

ಬೆಂಗಳೂರು: /ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರಕುಮಾರ ಬೊಟ್ಯಾಡಿ ಅವರಿಗೆ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಕಿಶೋರಕುಮಾರ ಬೊಟ್ಯಾಡಿ ಅವರಿಗೆ ಬಿಜೆಪಿ ಕೇಂದ್ರೀಯ ಚುನಾವಣಾ … Continued