ಮುಡಾ ಹಗರಣ ​: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಇ.ಡಿ.ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದ ಬೆನ್ನಲ್ಲೇ RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ(ED) ದೂರು ಸಲ್ಲಿಸಿದ್ದಾರೆ. ಒಂದು ವೇಳೆ ಈ ಪ್ರಕರಣ ದಾಖಲಾದಲ್ಲಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಬಹುದಾಗಿದೆ. ಬೆಂಗಳೂರು ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರಿಗೆ ಇ ಮೇಲ್ ನಲ್ಲಿ … Continued

ವೀಡಿಯೊಗಳು..| ಕುಮಟಾ : ಹಣ್ಣೇಮಠದಲ್ಲಿ ಮನೆಗೇ ಬಂದ ಬೃಹತ್‌ ಹೆಬ್ಬಾವು…!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಣ್ಣೇಮಠದ ಸಂಕನ ಕೇರಿಯ ಗೋಪಾಲ ಪಟಗಾರ ಎನ್ನುವವರ ಮನೆಗೆ ಭಾನುವಾರ ಮುಂಜಾನೆ ಬಂದಿದ್ದ ಹೆಬ್ಬಾವನ್ನು ಸ್ಥಳೀಯ ಉರಗ ತಜ್ಞ ಪವನ ನಾಯ್ಕ ಅವರು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಹೆಬ್ಬಾವು ಸುಮಾರು 12-13 ಅಡಿ ಉದ್ದ ಇದೆ. ಭಾನುವಾರ ಮುಂಜಾನೆ ಈ ಹಾವು ಹಣ್ಣೇಮಠದ ಸಂಕನ … Continued

ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಶನಿವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಇದನ್ನು ಗಮನಿಸಿದ ನಂತರ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ತಕ್ಷಣವೇ ಸ್ನಿಫರ್ ಡಾಗ್ಸ್ ಮತ್ತು ಬಾಂಬ್ ಸ್ಕ್ವಾಡ್ ಸಮೇತ ಸ್ಥಳಕ್ಕೆ ಆಗಮಿಸಿದರು. “ತಾಜ್ ವೆಸ್ಟ್ ಎಂಡ್ ಹೋಟೆಲ್ ಸಿಬ್ಬಂದಿಗೆ ಬಾಂಬ್ ಬೆದರಿಕೆ ಇ-ಮೇಲ್ … Continued

ನಾಗಮಂಗಲ ಗಲಭೆಯ 55 ಆರೋಪಿಗಳಿಗೆ ಜಾಮೀನು

ಮಂಡ್ಯ:  ಜಿಲ್ಲೆಯ ನಾಗಮಂಗಲದಲ್ಲಿ (Mandya violence) ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣದಲ್ಲಿ ಬಂಧಿತರಾದ ಎಲ್ಲ 55 ಆರೋಪಿಗಳಿಗೆ ನ್ಯಾಯಾಲಯ ಜಾಮೀನು (Bail) ನೀಡಿದೆ. ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲಭೆಯಲ್ಲಿ ಬಂಧನವಾಗಿದ್ದ ಎಲ್ಲ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆರೋಪಿಗಳಿಗೆ ತಲಾ … Continued

ಶಾಸಕ ಮುನಿರತ್ನ ಮನೆ ಮೇಲೆ ಎಸ್ ಐಟಿ ದಾಳಿ

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡ(SIT)ದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಅವರ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು … Continued

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ

ಬೆಂಗಳೂರು: ಈಗ ರದ್ದಾದ ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರು ನ್ಯಾಯಾಲಯ ಆದೇಶಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ನಡೆಸಲಾಗಿದೆ ಎಂದು ಆರೋಪಿಸಿ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಸಂಘಟನೆಯ ಆದರ್ಶ ಅಯ್ಯರ್ ಎಂಬವರು ದೂರು … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಪಶ್ಚಿಮ ಘಟ್ಟ : ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತ ಡಾ.ಕೆ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ತನ್ನ ನಿರ್ಧಾರಕ್ಕೆ ಬದ್ಧವಾಗಿರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ … Continued

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ : ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ತನಿಖೆ ಮುಂದುವರಿಯಲಿ ಎಂದ ಹೈಕೋರ್ಟ್‌

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದ ಸಂಬಂಧ ಹಾಸನದ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರ ವಿರುದ್ಧ ತನಿಖೆ ಮುಂದುವರಿಯಬೇಕು ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸುತ್ತಿದೆ. ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ … Continued

ಕರ್ನಾಟಕದಲ್ಲಿ ಸಿಬಿಐಗೆ ನೀಡಿದ್ದ ಮುಕ್ತ ತನಿಖೆಗೆ ಅನುಮತಿ ಅಧಿಸೂಚನೆ ವಾಪಸ್‌ ; ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಲು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಗುರುವಾರ ತನ್ನ ಒಪ್ಪಿಗೆಯನ್ನು ಹಿಂಪಡೆದಿದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್‌ಪಿಇ) ಕಾಯಿದೆ, 1946 ರ ಸೆಕ್ಷನ್ 6 ರ ಪ್ರಕಾರ, ಸಿಬಿಐ ತನಿಖೆ ನಡೆಸಲು … Continued