ಜಾಗತಿಕ ಭೂಪಟದಲ್ಲಿ ಉತ್ತರ ಕನ್ನಡಕ್ಕೆ ಹೆಮ್ಮೆ: ಯಾಣದ ಶಿಲೆಗಳು ‘ರಾಷ್ಟ್ರೀಯ ಭೂಪಾರಂಪರಿಕ ತಾಣ’ ಎಂದು ಘೋಷಣೆ

ಬೆಂಗಳೂರು: ಪಶ್ಚಿಮ ಘಟ್ಟಗಳ ದಟ್ಟ ಕಾಡಿನ ಮಧ್ಯೆ ನಿಂತಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ‘ಯಾಣ’ದ ಬೃಹತ್ ಶಿಲೆಗಳಿಗೆ ಈಗ ಅತ್ಯುನ್ನತ ರಾಷ್ಟ್ರೀಯ ಮಾನ್ಯತೆ ಲಭಿಸಿದೆ. ಸುಮಾರು 120 ಮೀಟರ್ ಎತ್ತರದ ಭೈರವೇಶ್ವರ ಶಿಖರ ಮತ್ತು 90 ಮೀಟರ್ ಎತ್ತರದ ಮೋಹಿನಿ ಶಿಖರಗಳನ್ನು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) “ರಾಷ್ಟ್ರೀಯ ಪ್ರಾಮುಖ್ಯತೆಯ ಭೂಪಾರಂಪರಿಕ ತಾಣ” … Continued

ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ 1993ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ. 2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು … Continued

ಗಲಾಟೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಹಿಂದಿಕ್ಕುವ ವಿಚಾರಕ್ಕೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಪುತ್ರ ಅಶುತೋಷ ಹೆಗಡೆ  ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಗುರುವಾರ ಹೈಕೋರ್ಟ್‌ ತಡೆ ನೀಡಿದೆ. ಎಫ್‌ಐಆರ್‌ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ … Continued

ಅಂಕೋಲಾ: ಬೆಂಕಿ ಹೊತ್ತಿ ಉರಿದ ಟ್ಯಾಂಕರ್‌

ಅಂಕೋಲಾ: ಇಥೆನಾಲ್ ರಾಸಾಯನಿಕ ತುಂಬಿದ ಟ್ಯಾಂಕರ್ ಲಾರಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರುಕಲಾದ ಘಟನೆ ತಾಲೂಕಿನ ಕಂಚಿನಬಾಗಿಲ ಬಳಿ ರಾಷ್ಟ್ರೀಯ ಹೆದ್ದಾರಿಯ 52 ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪಾರಾದ ಲಾರಿ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ … Continued

ಮುಟ್ಟಿನ ರಜೆ ನೀತಿಯನ್ನು ಎಲ್ಲಾ ವಲಯಗಳಲ್ಲೂ ಜಾರಿಗೊಳಿಸಿ ; ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ ನೀತಿಯನ್ನು ಕಟ್ಟುನಿಟ್ಟಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಬುಧವಾರ ನಿರ್ದೇಶನ ನೀಡಿದೆ. ಕರ್ನಾಟಕ ಗೆಜೆಟ್‌ನಲ್ಲಿ ಪ್ರಕಟಗೊಂಡಿರುವ ಹೊರತಾಗಿಯೂ ಋತುಚಕ್ರದ ರಜೆ ನೀತಿಯನ್ನು ಹೋಟೆಲ್‌ಗಳು ಮತ್ತಿತರ ಸಂಸ್ಥೆಗಳಲ್ಲಿ … Continued

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಕೊಂದ ಮಗ !

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಇಎಂಎಲ್ (BEML) ಲೇಔಟ್‌ನಲ್ಲಿ ಭಾನುವಾರ ಮಧ್ಯಾಹ್ನ ಈ ಭೀಕರ ಘಟನೆ ಸಂಭವಿಸಿದೆ. 72 ವರ್ಷದ ಸಾವಿತ್ರಮ್ಮ ಎಂಬುವವರೇ ಮಗನಿಂದಲೇ ಕೊಲೆಯಾದವರು ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ ಅವರ ಮಗ ವೆಂಕಟೇಶ (42) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಮೃತ ಸಾವಿತ್ರಮ್ಮ ಅವರು ಕಳೆದ 4-5 ವರ್ಷಗಳಿಂದ ಪಾರ್ಶ್ವವಾಯು (Paralysis) ಪೀಡಿತರಾಗಿ ಸಂಪೂರ್ಣವಾಗಿ … Continued

ಅಕ್ಷರ ಲೋಕದ ಅಪರೂಪದ ಶಿಲ್ಪಿ: ಪ್ರೊ. ಎಂ.ಆರ್. ಕುಂಬಾರ ಶತಮಾನದ ಸ್ಮರಣೆ

(೧೬-೦೪-೨೦೨೬ ರಂದು ಕರ್ನಾಟಕ ವಿಶ್ವವಿದ್ಯಾಲಯದ ಗೊಲ್ಡನ್ ಜುಬಲಿ ಹಾಲ್‌ನಲ್ಲಿ ಪ್ರೊ. ಎಂ.ಆರ್. ಕುಂಬಾರ ಅವರ ಜನ್ಮ ಶತಮಾನೋತ್ಸವ ಸವಿನೆನಪಿಗಾಗಿ ೨ ದಿನಗಳ ರಾಷ್ಟ್ರಮಟ್ಟದ ಸಮ್ಮೇಳನ ನಡೆಯುತ್ತಿದ್ದು, ಆ ನಿಮಿತ್ತ ಲೇಖನ) ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಎಂದಾಕ್ಷಣ ತಟ್ಟನೆ ಸ್ಮರಣೆಗೆ ಬರುವವರೆಂದರೆ ಪ್ರೊ. ಎಂ.ಆರ್. ಕುಂಬಾರ, ಪ್ರೊ.ಕೆ.ಎಸ್. ದೇಶಪಾಂಡೆ ಮತ್ತು ಡಾ.ಎಸ್.ಆರ್. … Continued

ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದ ವಿಶೇಷ ನ್ಯಾಯಾಲಯ

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಬುಧವಾರ ಪ್ರಕಟಿಸಿದ್ದು ಶಾಸಕ ವಿನಯ ಕುಲಕರ್ಣಿ ಸೇರಿದಂತೆ 16  ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. 2016ರ ಜೂನ್ 15ರಂದು ನಡೆದ ಯೋಗೇಶ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ … Continued

ಬೆಂಗಳೂರು : ಆರ್‌ಬಿಐನಲ್ಲೇ ₹2000 ನಕಲಿ ನೋಟು ಬದಲಿಸಲು ಯತ್ನ; ವ್ಯಕ್ತಿಯ ಬಂಧನ

ಬೆಂಗಳೂರು: ಭಾರತೀಯ ರಿಸರ್ವ ಬ್ಯಾಂಕ್ (RBI) ಕಚೇರಿಯಲ್ಲೇ ನಕಲಿ ನೋಟುಗಳನ್ನು ಅಸಲಿ ನೋಟುಗಳನ್ನಾಗಿ ಬದಲಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ನಾಗಶೆಟ್ಟಿಹಳ್ಳಿಯ ಎಸ್‌.ವಿ. ರಮೇಶ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಆರ್‌ಬಿಐ ಶಾಖೆಗೆ ₹2,000 ಮುಖಬೆಲೆಯ 375 ನೋಟುಗಳನ್ನು ಹಿಡಿದು ಬಂದಿದ್ದ. ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳುವ ನೆಪದಲ್ಲಿ ಈತ … Continued

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದಲೇ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್ ಅಮಾನತು

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ  ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ … Continued