ಇಂದು ಮಂತ್ರದ್ರಷ್ಟ ಅರವಿಂದ ಘೋಷ್‌ ಪುಸ್ತಕ ಬಿಡುಗಡೆ

ಹುಬ್ಬಳ್ಳಿ: ಲೋಕಹಿತ ಟ್ರಸ್ಟ್‌ ವತಿಯಿಂದ ಮಂತ್ರದ್ರಷ್ಟ ಅರವಿಂದ ಘೋಷ್‌ ಪುಸ್ತಕ ಬಿಡುಗಡೆ ಸಮಾರಂಭ ಹುಬ್ಬಳ್ಳಿಯ ಕೇಶವ ಕುಂಜದಲ್ಲಿ ಫೆಬ್ರವರಿ 12ರ ಭಾನುವಾರ ಸಂಜೆ 6:30 ಗಂಟೆಗೆ ನಡೆಯಲಿದೆ. ವಕ್ತಾರರಾಗಿ ಖ್ಯಾತ ಲೇಖಕ ಹಾಗೂ ವಿಮರ್ಶಕ ಡಾ.ಜಿ.ಬಿ.ಹರೀಶ ಆಗಮಿಸಲಿದ್ದಾರೆ. ಹುಬ್ಬಳ್ಳಿ ಲೋಕ ಹಿತ ಟ್ರಸ್ಟ್‌ ಅಧ್ಯಕ್ಷ ಅರವಿಂದರಾವ್‌ ದೇಶಪಾಂಡೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಲೇಖಕರು ಹಾಗೂ … Continued

ತುಮಕೂರು : ಭೀಕರ ಅಪಘಾತಕ್ಕೆ ನವದಂಪತಿ ದುರ್ಮರಣ

ತುಮಕೂರು: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತದಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಸಂಭವಿಸಿದೆ. ಇಂದು, ಶನಿವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ಅರಸಿಕೆರೆ ಮೂಲದ ರಘು(35) ಮತ್ತು … Continued

ಕೆಕೆಆರ್​ಟಿಸಿ ನೇಮಕಾತಿ ದೈಹಿಕ ಪರೀಕ್ಷೆಯಲ್ಲಿ ಮತ್ತೊಬ್ಬ ಅಭ್ಯರ್ಥಿಯ ಕಳ್ಳಾಟ ಪತ್ತೆ: ತೂಕ ಹೆಚ್ಚಿಸಿಕೊಳ್ಳಲು ಎರಡು ಕಾಲಿಗೂ ಹಿಟ್ಟು ಅಂಟಿಸಿಕೊಂಡು ಬಂದ ಭೂಪ…!

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್​ಟಿಸಿ) ಡ್ರೈವರ್​ ಕಂ ಕಂಡಕ್ಟರ್​ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾದ್ದರಿಂದ ಅದಕ್ಕಾಗಿ ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಸಂಗತಿ ಬಯಲಾಗುತ್ತಲೇ ಇದೆ. ನಿನ್ನೆ ಶುಕ್ರವಾರ ಇಂಥ ಪ್ರಕರಣಗಳು ಬಹಿರಂಗವಾಗಿತ್ತು. ತಮ್ಮ ತೂಕ ಹೆಚ್ಚಿಸಿಕೊಳ್ಳಲು ಅಭ್ಯರ್ಥಿಗಳು ಪ್ಯಾಂಟ್‌ ಒಳಗೆ ಕಬ್ಬಿಣದ ಪೀಸ್​ಗಳು, ಒಳ ಉಡುಪಲ್ಲಿ ತೂಕದ ಕಲ್ಲು ಇಟ್ಟುಕೊಂಡು … Continued

ಆಲ್ ಖೈದಾ ಜೊತೆ ನಂಟು ಆರೋಪ: ಬೆಂಗಳೂರಿನಲ್ಲಿ ಓರ್ವನ ಬಂಧನ

ಬೆಂಗಳೂರು : ಅಲ್​ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಬೆಂಗಳೂರಿನಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಆರೀಫ್​ ಎಂಬಾತನನ್ನು ಬಂಧಿಸಿದ್ದಾರೆ. ಶಂಕಿತ ಉಗ್ರ ಆರೀಫ್ ಅಲ್​ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬ ಶಂಕಿಸಲಾಗಿದೆ. … Continued

ಧಾರವಾಡ: ವೇತನಕ್ಕಾಗಿ ಮೊಬೈಲ್‌ ಟವರ್‌ ಏರಿದ ಜಲಮಂಡಳಿ ನೌಕರ…!

ಧಾರವಾಡ: ಎಂಟು ತಿಂಗಳುಗಳಿಂದ ವೇತನವಿಲ್ಲದ ಜಲಮಂಡಳಿ ಕಾರ್ಮಿಕರು ವೇತನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ, ಆಡಳಿತದಿಂದ ಸರಿಯಾದ ಸ್ಪಂದನೆ ಸಿಗದ ಕಾರಣ ಕಾರ್ಮಿಕನೊಬ್ಬ ಧಾರವಾಡದ ಜುಬ್ಲಿ ವೃತ್ತದಲ್ಲಿರುವ ಮೊಬೈಲ್ ಟವರ್ ಏರಿ ವಿನೂತನವಾಗಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಉಳಿದವರು ಗಾಬರಿಯಾಗುವಂತೆ ಮಾಡಿದ್ದಾನೆ. ನೀರು ಸರಬರಾಜು ನೌಕರರ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ … Continued

ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ’ ಗೀತೆ ಬಳಕೆಗೆ ನಿರ್ಬಂಧಿಸಿದ್ದ ಕೇರಳ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಕನ್ನಡ ಚಿತ್ರ ‘ಕಾಂತಾರ’ದಲ್ಲಿ ‘ವರಾಹರೂಪಂ’ ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸಡಿಲಿಸಿದೆ. ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ’ ಹಾಡು ಬಳಕೆ ನಿರ್ಬಂಧಿಸಿ ಚಿತ್ರದ ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್‌ ಕಿರಗಂದೂರ್‌ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ಕೇರಳ ಹೈಕೋರ್ಟ್‌ ವಿಧಿಸಿದ್ದ ಜಾಮೀನು … Continued

ಕಲಬುರಗಿ: ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅಂಡರ್ ವೇರ್ ನಲ್ಲಿ 5 ಕೆಜಿ ತೂಕದ ಕಲ್ಲು, ಸರಪಳಿ ಕಟ್ಟಿಕೊಂಡು ಬಂದು ಸಿಕ್ಕಿಬಿದ್ದರು …!

ಕಲಬುರಗಿ: ಪಿಎಸ್‌ಐ ನೇಮಕಾತಿ ಹಗರಣ ಬಯಲಾಗಿದ್ದು ಕಲಬುರಗಿಯಲ್ಲಿ ‌ಮತ್ತೊಂದು ಪ್ರಕರಣಗಳ ಬೆಳಕಿಗೆ ಬಂದಿದೆ. ಕಲ್ಯಾಣ ಕರ್ನಾಟಕದ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಭೌತಿಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಸಿಕ್ಕಿಬಿದ್ದಿರುವುದು ವರದಿಯಾಗಿದೆ. ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿ ಭೌತಿಕ ಪರೀಕ್ಷೆಯಲ್ಲಿ ವಾಮಮಾರ್ಗ ಕಂಡುಕೊಂಡ ಅಭ್ಯರ್ಥಿಗಳು ನೇಮಕಾತಿ ವೇಳೆ ತಮ್ಮ ತೂಕ ಹೆಚ್ಚಿಸಿಕೊಳ್ಳಲು ಕಾಲಿಗೆ ಕಬ್ಬಿಣ ವಸ್ತುಗಳನ್ನು ಕಟ್ಟಿಕೊಂಡು … Continued

ಅರಣ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು: ಕೋಲಾರದಲ್ಲಿ ಅರಣ್ಯಾಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಡಿಸಿಎಫ್ ವೆಂಕಟೇಶ ಮನೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದಲ್ಲಿ ಡಿಸಿಎಫ್ ವೆಂಕಟೇಶ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಏಕಕಾಲದಲ್ಲಿ 8 ಕಡೆ ಲೋಕಾಯುಕ್ತ ದಾಳಿಯಾಗಿದೆ. ಬೆಳ್ಳಂಬೆಳಿಗ್ಗೆ … Continued

ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ ಪದ್ಧತಿಯಲ್ಲಿ ಬದಲಾವಣೆ: ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ

ಬೆಂಗಳೂರು: ದ್ವಿತೀಯ ಪಿಯುಸಿ ಮುಖ್ಯಪರೀಕ್ಷೆಯಲ್ಲಿ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಮರುಮೌಲ್ಯಮಾಪನ ಮಾಡಿದಾಗ ವಿದ್ಯಾರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದಿರುವುದಕ್ಕಿಂತ ಒಂದು ಅಂಕ ಹೆಚ್ಚು ಬಂದರೂ ಅದನ್ನು ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. 2023ರ ಮಾರ್ಚ್‌ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಿಂದಲೇ ಈ ಹೊಸ … Continued

ಪೊಲೀಸರಿಂದ ತಲೆಮರೆಸಿಕೊಂಡಿರುವ ನಟಿ ಅಭಿನಯ ಬಂಧನಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು: ವರದಕ್ಷಿಣಿ ಕಿರುಕುಳ (Dowry Case) ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಲಾಗಿರುವ ನಟಿ ಅಭಿನಯ ಹಾಗೂ ಸಹೋದರ ಮತ್ತು ತಾಯಿ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅವರ ವಿರುದ್ಧ ಈಗ ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿದ್ದಾರೆ. ಅತ್ತಿಗೆ ಲಕ್ಷ್ಮಿದೇವಿ ಅವರು ದಾಖಲಿಸಿದ್ದ ವರದಕ್ಷಿಣೆ ಕಿರುಕುಳದ ಪ್ರಕರಣವನ್ನು ವಿಚಾರಣೆ ಮಾಡಿದ ನ್ಯಾಯಾಲಯ ನಟಿ‌ ಅಭಿನಯ, ಅವರ ತಾಯಿ ಹಾಗೂ … Continued