ವೀಡಿಯೊ | ಬೆಂಗಳೂರು : ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ; 4 ಕಾರುಗಳು, 5 ದ್ವಿಚಕ್ರ ವಾಹನಗಳಿಗೆ ಡಿಕ್ಕಿ…

ಬೆಂಗಳೂರು: ಬೆಂಗಳೂರಿನ ಫ್ಲೈಓವರ್ ಮೇಲೆ ನಿಯಂತ್ರಣ ತಪ್ಪಿದ ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ಸಂಸ್ಥೆಯ ಬಸ್ ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಾವಳಿ ಸೆರೆಯಾಗಿದೆ. ವಾಹನದ ನಿಯಂತ್ರಣವನ್ನು ಕಳೆದುಕೊಂಡ ನಂತರ ಚಾಲಕನು ಮುಂದೆ ಚಲಿಸುತ್ತಿದ್ದ ಅನೇಕ ಬೈಕ್‌ಗಳು ಮತ್ತು ಕಾರುಗಳಿಗೆ ಬಸ್‌ ಡಿಕ್ಕಿ ಹೊಡೆದಿರುವುದನ್ನು … Continued

ಬೆಳಗಾವಿ | ಚಚಡಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿಭೇದಿ; 41 ಜನ ಆಸ್ಪತ್ರೆಗೆ ದಾಖಲು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 41 ಜನ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತೀವ್ರ ಅಸ್ವಸ್ಥಗೊಂಡ ಮೂವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಇತರ ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವಾರದಿಂದ ಗ್ರಾಮದ ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ಇದು ಸೋಮವಾರ ಹತೋಟಿ ಮೀರಿದೆ. ಒಂದೇ … Continued

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಟಿ.ಜೆ.ಅಬ್ರಹಾಂ ಖಾಸಗಿ ದೂರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಹಾಗಾಗಿ, ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯಕ್ಕೆ ಸೋಮವಾರ … Continued

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಅವರು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಸೋಮವಾರ (ಆಗಸ್ಟ್‌ 12) ಆದೇಶ ಹೊರಡಿಸಿದ್ದಾರೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ … Continued

ಅಕ್ಟೋಬರ್‌ 3ರಂದು ಮೈಸೂರು ದಸರಾ ಉತ್ಸವಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9:15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ … Continued

ಬೆಂಗಳೂರು : ಪ್ರಸಕ್ತ ಮುಂಗಾರಿನ ಅವಧಿಯಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಮಳೆಯ ಕಾರಣಕ್ಕೆ 58 ಜನರು ಮೃತಪಟ್ಟಿದ್ದಾರೆ. ಈ ಒಟ್ಟಾರೆ 80,000 ಹೆಕ್ಟೇರ್ ಬೆಳೆ ನಾಶವಾಗಿದ್ದು, ವಾರದೊಳಗಾಗಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಮಳೆ ಪ್ರಮಾಣದ ವಿವರ, ಮಳೆಯಿಂದಾದ ಹಾನಿ ಹಾಗೂ ಇಲಾಖೆ ಕೈಗೊಂಡಿರುವ ಪರಿಹಾರ ಕಾರ್ಯಗಳ … Continued

ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ. ರಾಜ್ಯ … Continued

ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 6 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಹವಾಮಾನ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮುನ್ಸೂಚನೆ ನೀಡಿದೆ. ಐಎಂಡಿ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಗುರುವಾರದವರೆಗೆ ಲಘು ಮಳೆಯಾಗಲಿದೆ, ನಂತರ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು … Continued

ಬದಲಿ ನಿವೇಶನ ಕೋರಿ ಸಿದ್ದರಾಮಯ್ಯ ಬರೆದಿದ್ದ ‘ಪತ್ರ’ ಬಿಡುಗಡೆ ಮಾಡಿದ ಜೆಡಿಎಸ್‌…!

ಬೆಂಗಳೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿಯೂ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ. ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರು ಬದಲಿ ನಿವೇಶನಕ್ಕೆ ಕೋರಿ ಬರೆದಿದ್ದಾರೆ ಎನ್ನಲಾದ ಪತ್ರವೊಂದನ್ನು ಹಂಚಿಕೊಳ್ಳುವ ಮೂಲಕ ಟಾಂಗ್‌ ನೀಡಿದೆ. ಮಾಹಿತಿ ಹಕ್ಕು ಕಾಯ್ದೆಯಡಿ … Continued

ಮೂಡುಬಿದಿರೆ: ಶಿರ್ತಾಡಿಯಲ್ಲಿ ಭುವನಜ್ಯೋತಿ ಕಾನೂನು ಕಾಲೇಜು ಉದ್ಘಾಟನೆ

ಮೂಡುಬಿದಿರೆ : ವಕೀಲಿ ವೃತ್ತಿ ಮಾಡುವವರು ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು. ಹೀಗಾಗಿ ಓದುವ ಹವ್ಯಾಸ ನಿರಂತರವಾಗಿ ಇರಬೇಕು. ಹೊಸ ಹೊಸ ತಂತ್ರಜ್ಞಾನಗಳನ್ನೂ ಅರಿತುಕೊಳ್ಳಬೇಕು ಎಂದು ಆಂಧ್ರಪ್ರದೇಶದ ರಾಜ್ಯಪಾಲ ಹಾಗೂ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬೆಳುವಾಯಿ ಎಸ್. ಅಬ್ದುಲ್ ನಜೀರ್ ಹೇಳಿದ್ದಾರೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಶಿರ್ತಾಡಿಯ ಭುವನ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಲೀಗಲ್ … Continued