ಯಲ್ಲಾಪುರ: ಅರಬೈಲ್ ಬಳಿ ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ, ಚಾಲಕ, ಕ್ಲೀನರ್ ಪಾರು | ವೀಕ್ಷಿಸಿ

ಯಲ್ಲಾಪುರ: ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಹುಬ್ಬಳ್ಳಿ ಕಡೆಯಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರು ಕಡೆ ಹೊರಟಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಸುದ್ದಿ ತಿಳಿದಿ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕದವರು ಧಾವಿಸಿ ಬಂದರೂ ದಹಿಸುವ … Continued

ಸಹಕಾರಿ ಧುರೀಣ, ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ

ಸಾಗರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಸಹಕಾರಿ ಧುರೀಣ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಇಂದು, ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು, ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ತಿಮ್ಮಪ್ಪ ಅವರ ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು … Continued

ಶಿವಮೊಗ್ಗ: ವಸತಿ ಶಾಲೆಯಲ್ಲಿ ಊಟ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದ ವರದಿಯಾಗಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಸೋಮವಾರ ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥಗೊಂಡರು. … Continued

ಅಮೃತ ಮಹೋತ್ಸವ ಸಂಭ್ರಮದಲ್ಲಿ ಭೂಮರೆಡ್ಡಿ ಕಾಲೇಜ್‌ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಕೆಎಲ್‌ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ

( ೧೭-೦೧-೨೦೨೩ ರಂದು ಬೆಳಿಗ್ಗೆ ೧೦ ಗಂಟೆಗೆ ಹುಬ್ಬಳ್ಳಿ ನಗರದ ಕೊಯಿನ್ ರಸ್ತೆಯ ರುವ ಕೆ.ಎಲ್.ಇ. ಹುಬ್ಬಳ್ಳಿ ಕೋ-ಆಪರೇಟಿವ್ ಆಸ್ಪತ್ರೆ.ಯಲ್ಲಿ ಬಿ.ವಿ..ಭೂಮರಡ್ಡಿ ಕಾಲೇಜ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಮತ್ತು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಬಿ. ಕೋರೆ, ಅವರ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದ್ದು,ಈ ನಿಮತ್ತ … Continued

ಕಾಂಗ್ರೆಸ್‌ ನ ‘ನಾ ನಾಯಕಿ’ ಸಮಾವೇಶಕ್ಕೆ ಬಂದವರಿಗೆ ಹಣ ನೀಡಲಾಗಿದೆ : ಬಿಜೆಪಿ ಆರೋಪ ; ವೀಡಿಯೊ ಟ್ವೀಟ್‌

ಬೆಂಗಳೂರು: ನಗರದ ಅರಮನೆ ಮೈದಾನದ ಮುಖ್ಯದ್ವಾರ ಬಳಿ ಇಂದು, ಭಾನುವಾರ ಕಾಂಗ್ರೆಸ್ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಭಾಗವಹಿಸಲು ಬಂದವರಿಗೆ ಹಣ ನೀಡಲಾಗಿತ್ತು ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಅಲ್ಲೇ ಡ್ರಾ ಅಲ್ಲೇ ಬಹುಮಾನ ಅಂದ್ರೆ ಇದೇನಾ? ‘ನಾಯಕಿ’ ಕಾರ್ಯಕ್ರಮಕ್ಕೂ 2000 ರೂ. ಕೊಟ್ಟೇ ಕರೆತರಲಾಗಿತ್ತು ! ಪ್ರಿಯಾಂಕಾ ಗಾಂಧಿ … Continued

ಪಕ್ಷ ಅಧಿಕಾರಕ್ಕೆ ಬಂದರೆ ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ 2000 ರೂ.: ʼನಾ ನಾಯಕಿʼ ಸಮಾವೇಶದಲ್ಲಿ ಕಾಂಗ್ರೆಸ್‌ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ  ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆ ಜಾರಿಗೆ ತರುವುದಾಗಿ  ಕಾಂಗ್ರೆಸ್ ಇಂದು ಸೋಮವಾರ ಘೋಷಣೆ ಮಾಡಿದೆ. ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ … Continued

ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿರುವ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ ವಿರುದ್ಧದ ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಸ್ಯಾಂಟ್ರೋ ರವಿ ವಿರುದ್ದದ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆ ಜವಾಬ್ದಾರಿಯನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು … Continued

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಶಿವನ ಪ್ರತಿಮೆ ಅನಾವರಣ

ಚಿಕ್ಕಬಳ್ಳಾಪುರ: ಯೋಗದ ಮೂಲವಾದ ಆದಿಯೋಗಿಯ 112 ಅಡಿ ಮೂರ್ತಿಯನ್ನು ಬೆಂಗಳೂರಿನ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರುಗಳ ಸಮ್ಮುಖದಲ್ಲಿ ಭಾನುವಾರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ನಾನು ಕೊಯಮತ್ತೂರಿಗೆ ಹೋಗಿದ್ದೇನೆ. ಆದಿಯೋಗಿ ಬಹಳ ಸಮಯದಿಂದ ಜನರನ್ನು ಪ್ರೇರೇಪಿಸಿದ್ದಾರೆ. ಕೆಲವು ಸೆಕೆಂಡುಗಳ ಕಾಲ ಆದಿಯೋಗಿಯನ್ನು ನೋಡಿ ನಾವು … Continued

ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ

ಪಣಜಿ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಗೋವಾ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು (ಐಎ) ಸಲ್ಲಿಸಿದೆ. ಕಳಸಾ-ಬಂಡೂರಿ ಯೋಜನೆಯ ಮೂಲಕ ಮಹದಾಯಿ ನದಿ ತಿರುವಿಗೆ ಕರ್ನಾಟಕ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ನೀಡಿರುವ ಅನುಮೋದನೆಗೆ ತಡೆ ನೀಡುವಂತೆ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಯೋಜನೆಗೆ ಡಿಪಿಆರ್ ಆಧರಿಸಿ ಯಾವುದೇ … Continued

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ಸಾವು

ಶಿವಮೊಗ್ಗ: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಹಿನ್ನಲೆಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಂಕ್ರಾಂತಿ ಹಬ್ಬದ ನಿಮಿತ್ತ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟಿದ್ದಾರೆ. ಜ.೧೪ ರಂದು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬಳಿಯ ಮಾಳೂರು ಗ್ರಾಮದಲ್ಲಿ ಹೋರಿ … Continued