ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ..; ವಾರಕ್ಕೆ ಒಂದು ದಿನ ರಜೆ ನೀಡಲು ಸರ್ಕಾರದ ಆದೇಶ

ಬೆಂಗಳೂರು : ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಹೀಗಾಗಿ ವಾರದ ಒಂದು ದಿನ ಸಂಪೂರ್ಣ … Continued

ಕ್ರಿಯಾಶೀಲ ವ್ಯಕ್ತಿತ್ವದ ನಿವೃತ್ತ ಗ್ರಂಥಪಾಲಕ ವೈ. ಬಿ. ಕೊರಡೂರ ʼಅಭಿನಂದನಾ ಗ್ರಂಥʼ ಲೋಕಾರ್ಪಣೆ

(೦೨.೦೬.೨೦೨೪ರಂದು ಯಲ್ಲಪ್ಪ ಬಸನಗೌಡ ಕೊರಡೂರ ಅವರ ಅಭಿನಂದನಾ ಗ್ರಂಥ ಬನಹಟ್ಟಿಯ ಜನತಾ ಶಿಕ್ಷಣ ಸಮಿತಿ ವತಿಯಿಂದ ಲೋಕರ್ಪಣೆಯಾಗುತ್ತಿದೆ. ಈ ನಿಮಿತ್ತ ಲೇಖನ) ಗ್ರಾಮೀಣ ಹಿನ್ನಲೆಯಿಂದ ಬಂದ ಗ್ರಾಮೀಣ ವಿದ್ಯಾರ್ಥಿಗಳ ಸ್ನೇಹಿತರಂತೆ ಕಾರ್ಯ ಮಾಡಿರುವ ಗ್ರಂಥಪಾಲರಾಗಿದ್ದ ಬನಹಟ್ಟಿಯ ಎಸ್.ಟಿ.ಸಿ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಗ್ರಂಥಪಾಲಕರಾದ ಯಲ್ಲಪ್ಪ ಬಸನಗೌಡ ಕೊರಡೂರ ಅವರು ಮೇ ೩೧ರಂದು ಸೇವಾ … Continued

ಹಾಸನ ಎಸ್ಪಿ ಕಚೇರಿ ಆವರಣದಲ್ಲೇ ಭೀಕರ ಕೊಲೆ : ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಇರಿದು ಕೊಂದ ಕಾನ್‌ಸ್ಟೆಬಲ್‌…!

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಪೊಲೀಸ್ ಕಾನ್‌ಸ್ಟೆಬಲ್‌ ಓರ್ವ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ನಡೆದಿದೆ ಎಂದು ವರದಿಯಾಗಿದೆ. ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಹಾಸನ ನಗರ … Continued

ಲೈಂಗಿಕ ದೌರ್ಜನ್ಯದ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಜಾಮೀನು ಮಂಜೂರು

ಬೆಂಗಳೂರು : ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಜಾಮೀನು ನೀಡಿ ಆದೇಶಿಸಿದೆ. ಸಾಕ್ಷ್ಯಗಳ ನಾಶ ಮಾಡಬಾರದು, ನ್ಯಾಯಾಲಯದ ವ್ಯಾಪ್ತಿಯಿಂದ ಹೊರ ಹೋಗಬಾರದು ಮತ್ತು ಇಬ್ಬರು ಶ್ಯೂರಿಟಿ ನೀಡಬೇಕು ಎಂಬುದಾಗಿ … Continued

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ನಿಧನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ನಿಧನರಾಗಿದ್ದಾರೆ ಎಂದು … Continued

ಜುಲೈ 2ರ ವರೆಗೆ ಕರ್ನಾಟಕದ 6 ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದ ಕರಾವಳಿಯ ಸಮುದ್ರತೀರಗಳಲ್ಲಿ ದಟ್ಟಮೋಡ ಇರುವುದರಿಂದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿಯೂ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, … Continued

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾನುವಾರ (ಜೂನ್‌ 30)ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಗಾಳಿಯ … Continued

ಕುಂದಾಪುರ: ಬಾವಿಗೆ ಬಿದ್ದ ಇಬ್ಬರು ಮಕ್ಕಳು ಸಾವು, ತಾಯಿ ಸ್ಥಿತಿ ಗಂಭೀರ

ಕುಂದಾಪುರ: ಕಂಪೌಂಡ್‌ ಇಲ್ಲದ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದು ತಾಯಿ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ಸೇರಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲ ಗ್ರಾಮದ ಹೊಟ್ನಬೈಲು ಎಂಬಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ಧೀರಜ್‌ (13) ಹಾಗೂ ಛಾಯಾ (8) ಎಂದು ಗುರುತಿಸಲಾಗಿದೆ. ತಾಯಿ ಶೀಲಾ (43) ಎಂಬುವವರನ್ನು ರಕ್ಷಣೆ … Continued

ನೇತ್ರಾವತಿ ನದಿಗೆ ಹಾರಲು ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ಸಾಕು ನಾಯಿ….!

ಮಂಗಳೂರು : ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಡಲು ಯತ್ನಿಸಿದ ಮಹಿಳೆಯೊಬ್ಬರನ್ನು ಸಾಕುನಾಯಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಉಪ್ಪಿನಂಗಡಿ ಸಮೀಪದ ಪಿಲಿಗೂಡಿನ 36 ವರ್ಷದ ಮಹಿಳೆಯೊಬ್ಬರು ಪತಿಯೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ತಡೆಗೋಡೆ ಏರಿ ನದಿಗೆ ಹಾರಲು ಮುಂದಾದಾಗ ಅವರನ್ನೇ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ : ರಾಮಪ್ಪ ಬಡಿಗೇರ ನೂತನ‌ ಮೇಯರ್, ದುರಗಮ್ಮ ಬಿಜವಾಡ ಉಪಮೇಯರ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನೂತನ ಮಹಾಪೌರರಾಗಿ ಬಿಜೆಪಿಯ ರಾಮಪ್ಪ ಬಡಿಗೇರ ಹಾಗೂ ಉಪ ಮಹಾಪೌರರಾಗಿ ದುರಗಮ್ಮ ಬಿಜವಾಡ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಮಹಾಪೌರ ಚುನಾವಣೆಗೆ ಬಿಜೆಪಿಯಿಂದ ರಾಮಪ್ಪ ಬಡಿಗೇರ, ಕಾಂಗ್ರೆಸ್ ನಿಂದ ಇಮ್ರಾನ್ ಎಲಿಗಾರ, ಎಂಐಎಎಂ ನಿಂದ ಹುಸೇನ್ ಬಿ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿಯ ರಾಮಪ್ಪ ಬಡಿಗೇರಗೆ 47 ಮತ ಪಡೆದು ಮೇಯರ್‌ … Continued