ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರವೇಶ ಪತ್ರ ಪ್ರಕಟ: ಜೂನ್‌ 30 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಇದೇ ಜೂನ್ 30 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ನೋಂದಣಿ ಮಾಡಿರುವ ಅಭ್ಯರ್ಥಿಗಳು ಗುರುವಾರದಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು http://schooleducation.kar.nic.in  ನಲ್ಲಿ ಅಧಿಕೃತ … Continued

ವಾಹನಗಳಿಗೆ ಕಣ್ಣುಕುಕ್ಕುವ ಎಲ್‌ಇಡಿ ಲೈಟ್‌ ಹಾಕಿಸಿದ್ದೀರಾ : ಜುಲೈ 1ರಿಂದ ಬೀಳಲಿದೆ ದಂಡ…

ಬೆಂಗಳೂರು : ಕೇಂದ್ರ ಮೋಟಾರು ಕಾಯಿದೆಯ ಮಾನದಂಡದಂತೆ ವಾಹನಗಳಿಗೆ ಹೆಡ್‌ಲೈಟ್‌ ಅಳವಡಿಸಬೇಕು. ಈ ಕಾಯಿದೆ ಉಲ್ಲಂಘಿಸಿ ಹೆಚ್ಚು ಪ್ರಕಾಶಮಾನವಾದ ಅಥವಾ ಕಣ್ಣಿಗೆ ಕುಕ್ಕುವಂತಹ ಎಲ್‌ಇಡಿ ಹೆಡ್‌ಲೈಟ್‌ಗಳನ್ನು ಅಳವಡಿಸುವ ಹಾಗಿಲ್ಲ. ಈ ಬಗ್ಗೆ ಜುಲೈ 1ರಿಂದ ರಾಜ್ಯ ಪೊಲೀಸ್‌ ವಿಶೇಷ ಅಭಿಯಾನ ಕೈಗೊಳ್ಳಲಿದೆ. ವಾಹನಗಳಿಗೆ ಕಣ್ಣಿಗೆ ಕುಕ್ಕುವಂತಹ ಎಲ್ಇಡಿ ದೀಪ ಅಳವಡಿಸಿದ್ದರೆ ಅಂತಹ ವಾಹನ ಸವಾರರ ವಿರುದ್ಧ … Continued

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ ನಿಂದ ಬಿದ್ದು ಸಾವು ; ಆತ್ಮಹತ್ಯೆ ಶಂಕೆ

ಬೆಂಗಳೂರು: ಕ್ರಿಕೆಟಿಗ, ಟೀಂ ಇಂಡಿಯಾ (Team India) ಮಾಜಿ ಆಟಗಾರ ಕರ್ನಾಟಕದ ವೇಗಿ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್‌ನಿಂದ ಬಿದ್ದು ಸಾವಿಗೀಡಾಗಿದ್ದು, ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ … Continued

ಹಾಸನದಲ್ಲಿ ಹಾಡಹಗಲೇ ಗುಂಡಿನ ಸದ್ದು; ಇಬ್ಬರು ಸಾವು, ಒಬ್ಬನ ಹತ್ಯೆಗೈದು ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಹಾಸನ : ಹಾಸನದಲ್ಲಿ (Hassan) ಹಾಡಹಗಲೇ ಗುಂಡಿನ (Shooting) ದಾಳಿ ನಡೆದಿದ್ದು ಗುಂಡೇಟಿಗೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ಸದ್ದು ಕೇಳಿಬಂದ … Continued

ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್(HSRP) ಅಳವಡಿಕೆಗೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ವರೆಗೆ ಗಡುವು ವಿಸ್ತರಿಸಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಾಹನಗಳ ಸುರಕ್ಷತೆಗಾಗಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು … Continued

ಕರ್ನಾಟಕದಲ್ಲಿ 400 ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜೂನ್‌ 24 ಕೊನೆಯ ದಿನ

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಡಿ ಖಾಲಿ ಇರುವ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ನೇಮಕಾತಿ ಸಂಸ್ಥೆ- ಪಶುಪಾಲನೆ ಮತ್ತು ಪಶುವೈದ್ಯ … Continued

ದರ್ಶನ, ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅವಿಶ್ವಾಸಾರ್ಹ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ

ಬೆಂಗಳೂರು : ನಟ ದರ್ಶನ ಮತ್ತು ವಿಜಯಲಕ್ಷ್ಮಿ ಅವರಿಗೆ ಸಂಬಂಧಿಸಿದ ವೈಯಕ್ತಿಕ, ಕೌಟುಂಬಿಕ ಮಾಹಿತಿಯನ್ನಾಗಲಿ ಅಥವಾ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅವಿಶ್ವಾಸಾರ್ಹ ಮಾಹಿತಿ ಅಥವಾ ಅಭಿಪ್ರಾಯಗಳನ್ನಾಗಲಿ ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರಿನ ಸತ್ರ ನ್ಯಾಯಾಲಯವು ಬುಧವಾರ ಆದೇಶಿಸಿದೆ. ದರ್ಶನ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿರುವ ಮೂಲ ದಾವೆಯ ಭಾಗವಾದ ಮಧ್ಯಂತರ ಅರ್ಜಿಯ … Continued

ಜುಲೈ 15ರಿಂದ ಮುಂಬೈ- ಹುಬ್ಬಳ್ಳಿ- ಮುಂಬೈ ಇಂಡಿಗೋ ವಿಮಾನ ಸೇವೆ ಪುನಾರಂಭ

ಹುಬ್ಬಳ್ಳಿ: ಮುಂಬೈ- ಹುಬ್ಬಳ್ಳಿ- ಮುಂಬೈ ((Mumbai-Hubballi-Mumbai) ಮಧ್ಯೆ ಇಂಡಿಗೋ 6ಇ (Indigo 6e) ವಿಮಾನಯಾನ ಸೇವೆ ಜುಲೈ 15ರಿಂದ ಪುನಾರಂಭಗೊಳ್ಳಲಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಮನವಿ ಮೇರೆಗೆ ಇಂಡಿಗೋ 6 ಇ ವಿಮಾನ ಸಂಚಾರವನ್ನು ಮತ್ತೆ ಶುರು ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ. ಇಂಡಿಗೋ 6ಇ … Continued

ಜೂನ್ 21ರಿಂದ 10 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ

ಬೆಂಗಳೂರು : ಈ ಬಾರಿ ಮುಂಗಾರು ಈವರೆಗೆ ತಕ್ಕಮಟ್ಟಿಗೆ ಸಮಾಧಾನ ನೀಡಿದ್ದರೂ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗದರೆ ಕೆಲವು ಭಾಗಗಳಲ್ಲಿ ಮಳೆಯ ಕೊರತೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮಳೆ ಉತ್ತಮವಾಗಿದೆ, ಆದರೆ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದೆ. ಇದೇ ವೇಳೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ … Continued

ಒಂದೇ ದಿನದಲ್ಲಿ 600 ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನದ ಕಲಾಪದಲ್ಲಿ ಬರೋಬ್ಬರಿ 600 ಪ್ರಕರಣ ವಿಚಾರಣೆ ನಡೆಸಿದ್ದಾರೆ. ಬೆಂಗಳೂರು ಪ್ರಧಾನ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಕೋರ್ಟ್‌ಹಾಲ್‌ನ ಕಾಸ್‌ಲಿಸ್ಟ್‌ನಲ್ಲಿ (ವ್ಯಾಜ್ಯಗಳ ಪಟ್ಟಿ) 600 ಅರ್ಜಿಗಳನ್ನು ವಿಚಾರಣೆಗೆ ನಿಗದಿಪಪಡಿಸಲಾಗಿತ್ತು. ಅಷ್ಟೂ ಅರ್ಜಿಗಳ ವಿಚಾರಣೆಯನ್ನು ಸಂಜೆ 4 ಗಂಟೆಗೆ ಪೂರ್ಣಗೊಳಿಸಿದ್ದಾರೆ. ನಿಗದಿಯಾಗಿದ್ದ 600 … Continued