ನಾಳೆ (ಏ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ಗುರುವಾರ (ಏ.9) ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆಯ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ … Continued

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ನಾಪತ್ತೆ

ಚಿಕ್ಕಮಗಳೂರು : ಕೇರಳದಿಂದ 40 ಜನರ ತಂಡದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗದ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (16) ಎಂದು ಗುರುತಿಸಲಾಗಿದ್ದು, ಕೇರಳದಿಂದ ಬಂದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ … Continued

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ; ʼಬಿʼ ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಇ.ಡಿ. ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕಾರ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು,  ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ ಎಂದು ಬಾರ್‌ … Continued

20 ಅಡಿ ಆಳದ ಬಾವಿಗೆ ಬಿದ್ದು 3 ದಿನದಿಂದ ಜೀವ ಹಿಡಿದುಕೊಂಡಿದ್ದ ವೃದ್ಧ ; ಕಾಪಾಡಿದ್ದು ಗ್ಯಾಸ್‌ ಸಿಲಿಂಡರ್‌…!

ಉಡುಪಿ : ಬಾವಿಯ ಪಂಪ್ ಸರಿಪಡಿಸಲು ಹೋಗಿ ಬಾವಿಗೆ ಬಿದ್ದ ವೃದ್ಧರೊಬ್ಬರು (senior citizen) ಸತತ ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ ಎಂದು ವರದಿಯಗಿದೆ. ಗ್ಯಾಸ್‌ ಸಿಲಿಂಡರ್ ಒಟಿಪಿಯ ಕಾರಣದಿಂದ ಬಾವಿಗೆ ಬಿದ್ದ ವೃದ್ಧರು ಪತ್ತೆಯಾಗಿದ್ದು, ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ ಎಂಬಲ್ಲಿ ಈ … Continued

ಅಂಕೋಲಾ : ವಿಭೂತಿ ಜಲಪಾತದಲ್ಲಿ ಮುಳುಗಿ ಪ್ರವಾಸಿಗ ಸಾವು

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಸಮೀಪದ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನುತೆಲಂಗಾಣ ರಾಜ್ಯದ ಅಜಯ (24) ಎಂದು ಗುರುತಿಸಲಾಗಿದೆ. ತೆಲಂಗಾಣದಿಂದ 6 ಜನರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಲಪಾತದ ನೀರಿಗಿಳಿದಿದ್ದಾರೆ. ಈ ವೇಳೆ ಕಾಲು ಜಾರಿ … Continued

ಕುಮಟಾ : ಲಾರಿ-ಬೈಕ್‌ ಡಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಕುಮಟಾ: ಬೈಕ್‌ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಸರ್ಕಲ್ ಬಳಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಬೈಕ್‌ ಸವಾರ ಸುಬ್ರಹ್ಮಣ್ಯ ಅಂಬಿಗ (35) ಎಂದು ಗುರುತಿಸಲಾಗಿದೆ. ಸಹ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 8ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮುಂದಿನ ಮೂರು ದಿನಗಳ ಅವಧಿಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ನಡುವೆ ಮೇಲ್ಮೈ ಸುಳಿಗಾಳಿ … Continued

ಅಮೃತ ಮಹೋತ್ಸವ ಸಂಭ್ರಮದಲ್ಲಿ ಶಿಕ್ಷಣ ಪ್ರೇಮಿ ಡಾ. ಅಜಿತಪ್ರಸಾದ

(ಇಂದು (೦೫-೦೪-೨೦೨೬) ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಆವರಣದಲ್ಲಿರುವ ಸನ್ನಿಧಿ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ ೦೯: ೩೦ಕ್ಕೆ ಡಾ. ಅಜಿತಪ್ರಸಾದ ಅಮೃತ ಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆಯಾಗುತ್ತಿದೆ. ಈ ನಿಮಿತ್ತ ಲೇಖನ) ಧಾರವಾಡದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜನತಾ ಶಿಕ್ಷಣ ಸಮಿತಿ(ಜೆಎಸ್‌ಎಸ್‌)ಯು ಇಂದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮನ್ನಣೆ ಗಳಿಸುವಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ … Continued

ಭಟ್ಕಳ : ಗೋವು ಕಳ್ಳತನ ವಿಫಲಗೊಳಿಸಿದ ಸಾರ್ವಜನಿಕರು ; ಕಾರು ಬಿಟ್ಟು ಪರಾರಿಯಾದ ಕಳ್ಳರು..

ಕಾರವಾರ : ಗೋವುಗಳನ್ನ ಕದಿಯಲು ಬಂದ ಕಳ್ಳರನ್ನ ತಡೆದು ವಿಚಾರಿಸುವಾಗ ಗೋವಿನ ಸಮೇತ ಕಾರನ್ನು ಬಿಟ್ಟು ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಬಳಿಯ  ತಲಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗೋವುಗಳನ್ನು ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಕದ್ದೊಯ್ಯಲು ಯತ್ನಿಸುತ್ತಿದ್ದಾಗ ಗೋವುಗಳು ಕೂಗಿದ್ದು ಕೇಳಿ ಸ್ಥಳೀಯರಿಗೆ ಅನುಮಾನ ಬಂದಿದೆ. ತಕ್ಷಣವೇ ಕಾರ್ಪ್ರವೃತ್ತರಾದ … Continued

ಬೆಂಗಳೂರು : 272 ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಅಕ್ರಮ ವಲಸಿಗರ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 272 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡೀಪಾರು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ನಗರದಾದ್ಯಂತ ವಿವಿಧ ಪ್ರದೇಶಗಳಲ್ಲಿ ನಡೆಸಿದ ತಪಾಸಣಾ ಅಭಿಯಾನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಗಡೀಪಾರು … Continued