ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಬಾಲ ಸಾಹಿತ್ಯ ಪುರಸ್ಕಾರ ವಿಜೇತರ ಹೆಸರು ಪ್ರಕಟ; ಕನ್ನಡದಲ್ಲಿ ಶ್ರುತಿ ಬಿಆರ್ ಯುವ ಪುರಸ್ಕಾರಕ್ಕೆ, ಕೃಷ್ಣಮೂರ್ತಿ ಬಿಳಿಗೆರೆ ಬಾಲ ಪುರಸ್ಕಾರಕ್ಕೆ ಆಯ್ಕೆ

ನವದೆಹಲಿ: ನ್ಯಾಷನಲ್ ಅಕಾಡೆಮಿ ಆಫ್ ಲೆಟರ್ಸ್ 2024 ರ ಯುವ ಪುರಸ್ಕಾರ ಹಾಗೂ ಬಾಲ ಸಾಹಿತ್ಯ ಪುರಸ್ಕಾರ ವಿಜೇತರ ಹೆಸರನ್ನು ಸಹ ಪ್ರಕಟಿಸಿದ್ದು, ಕರ್ನಾಟಕದ ಶ್ರುತಿ ಬಿ.ಆರ್‌ ಯುವ ಪುರಸ್ಕಾರ ಹಾಗೂ ಕೃಷ್ಣಮೂರ್ತಿ ಬಿಳಿಗೆರೆ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಶ್ರುತಿ ಅವರ ಚೊಚ್ಚಲ ಕವನ ಸಂಕಲನ ‘ಜಿರೋ ಬ್ಯಾಲೆನ್ಸ್‌’ಗೆ ಪ್ರಶಸ್ತಿ ಲಭಿಸಿದೆ ಹಾಗೂ ಕೃಷ್ಣಮೂರ್ತಿ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ, ಪವಿತ್ರ ಗೌಡ ಸೇರಿ ಆರೋಪಿಗಳಿಗೆ ಮತ್ತೆ ಪೊಲೀಸ್‌ ಕಸ್ಟಡಿ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 10 ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶನಿವಾರ ಮತ್ತೆ ಐದು ದಿನಗಳ ಕಾಲ (ಜೂನ್‌ 20ರವರೆಗೆ) ಪೊಲೀಸ್‌ ಕಸ್ಟಡಿಗೆ ನೀಡಿದೆ. ದರ್ಶನ್‌ ಸೇರಿ ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ … Continued

ತೆರಿಗೆ ಹೆಚ್ಚಿಸಿದ ಕರ್ನಾಟಕ ಸರ್ಕಾರ ; ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್‌…!

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ(Retail Sales Tax)ಹೆಚ್ಚಳ ಮಾಡುವ ಮೂಲಕ ದರ ಏರಿಕೆ ಶಾಕ್‌ ನೀಡಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಹೆಚ್ಚಳ‌ವಾಗಲಿದೆ. ನೂತನ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ … Continued

ಜೊಯಿಡಾ : ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಿರಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮನಗರದ ಹನುಮಾನ ಗಲ್ಲಿ ನಿವಾಸಿ ಭಾಸ್ಕರ ಬೋಂಡೆಲ್ಕರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Continued

ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ, ಇ.ತುಕಾರಾಂ ರಾಜೀನಾಮೆ

ಬೆಂಗಳೂರು : ಕೇಂದ್ರದ ಎನ್​​ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜೆಡಿಎಸ್ ನಾಯಕ ಎಚ್.​ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌‍ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿ ಅಧಿಕಾರ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪೊಲೀಸರಿಗೆ ಶರಣಾದ ಮತ್ತಿಬ್ಬರು ಆರೋಪಿಗಳು..

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾದಂತಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಶರಣಾಗಿದ್ದು, ತಕ್ಷಣವೇ ಇಬ್ಬರನ್ನೂ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ ಅಲಿಯಾಸ್‌ ಅನು, ಜಗದೀಶ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ಈ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 6 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40-50 kmp ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳಿದೆ. … Continued

ದರ್ಶನ್ ಪ್ರಕರಣ : ತೀವ್ರ ಆಘಾತ-ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು ಎಂದ ಮರಣೋತ್ತರ ಪರೀಕ್ಷೆ ವರದಿ

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ ಮಾಡಿದ್ದಾರೆ ಎಂದು ಆರೋಪಿಸಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ಆಘಾತ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ವರದಿ ತಿಳಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಶವಪರೀಕ್ಷೆಯಲ್ಲಿ ರೇಣುಕಾ ಸ್ವಾಮಿ ಅವರ ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ. ರೇಣುಕಾಸ್ವಾಮಿ ಅವರನ್ನು ನಟ ದರ್ಶನ್‌ … Continued

ಜೊಯಿಡಾ : ರಾಮನಗರ ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾಸ್ಕರ್ ಬೋಂಡೆಲ್ಕರ (36) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆದರೆ … Continued

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ದೊಡ್ಡ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಅವರ ಬಂಧನಕ್ಕೆ ತಡೆ ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ … Continued