ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ…!

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ನನಗೆ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಪಕ್ಷ … Continued

ಶರಾವತಿ ಪಂಪ್ ಸ್ಟೋರೇಜ್‌ ಯೋಜನೆ ಕಾಮಗಾರಿಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಶರಾವತಿ ಸಿಂಹ ಬಾಲದ ಕೋತಿ (LTM) ಅಭಯಾರಣ್ಯ ಮತ್ತು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಉದ್ದೇಶಿತ ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಅಥವಾ ಚಟುವಟಿಕೆಗಳನ್ನು ನಡೆಸದಂತೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರನ್ನೊಳಗೊಂಡ ವಿಭಾಗೀಯ ಪೀಠವು … Continued

ವಿಧಾನ ಪರಿಷತ್‌ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಚರ್ಚಿಸಿ ಮೂರು ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಒಟ್ಟು ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ಉಳಿದ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ … Continued

ಬೆಂಗಳೂರು ಸೇರಿ ಮೆಟ್ರೋ ನಗರಗಳಲ್ಲಿ ಹೋಟೆಲ್ ಉದ್ಯಮಕ್ಕೆ ಎಲ್‌ಪಿಜಿ ಅಭಾವ

ನವದೆಹಲಿ/ ಬೆಂಗಳೂರು : ಪಶ್ಚಿಮ ಏಷ್ಯಾದಲ್ಲಿ (Middle East) ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ವಾಣಿಜ್ಯ ಅಡುಗೆ ಅನಿಲ (Commercial LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರು, ಚೆನ್ನೈ ಮತ್ತು ಮುಂಬೈ ನಗರಗಳ ಹೋಟೆಲ್ ಹಾಗೂ ರೆಸ್ಟೋರೆಂಟ್ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಪರಿಸ್ಥಿತಿಯನ್ನು ನಿಭಾಯಿಸಲು ತೈಲ ಸಂಸ್ಕರಣಾಗಾರಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. … Continued

ಶಿರಸಿ ಬಚಪನ್ ಶಾಲೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ಶಿರಸಿ: ಜಾಗೃತಿ ಫೌಂಡೇಶನ್ ಮೂಲಕ ಕಳೆದ ವರ್ಷವಷ್ಟೇ ಶಿರಸಿಯಲ್ಲಿ ಆರಂಭಗೊಂಡ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿ ಪ್ರಕಟಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಲಿಕಾ ವಿಧಾನ, ಗುಣಮಟ್ಟ ಮತ್ತು ತಾಂತ್ರಿಕ ಅಳವಡಿಕೆಯನ್ನಾಧರಿಸಿ ಕೇವಲ 3 ಶಾಲೆಗಳಿಗೆ ಕೊಡಮಾಡುವ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿಯನ್ನು ಶಿರಸಿಯ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ … Continued

ಹೊನ್ನಾವರ : ಖಾಸಗಿ ಬಸ್‌ ಪಲ್ಟಿ ; ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಉರುಳಿ ಬಿದ್ದು ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಳ್ಳಂಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭಾನುವಾರ (ಮಾರ್ಚ್ 8)ರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಹೊನ್ನಾವರದಿಂದ ಸಾಗರ ಮಾರ್ಗವಾಗಿ ಬೆಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಬಸ್, ರ ರಾತ್ರಿ … Continued

ಪರೀಕ್ಷಾ ಕೊಠಡಿ ಒಳಗೆ ಮೊಬೈಲ್‌ ಒಯ್ದಿದ್ದ 12ನೇ ತರಗತಿ ವಿದ್ಯಾರ್ಥಿಯ ಡಿಬಾರ್‌ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಪರೀಕ್ಷಾ ಕೊಠಡಿಯೊಳಗೆ ಮೊಬೈಲ್‌ ಫೋನ್‌ ಒಯ್ದಿದ್ದ ಆರೋಪದಡಿ ಸಿಬಿಎಸ್‌ಇ 12ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಎರಡು ವರ್ಷ ಡಿಬಾರ್‌ ಮಾಡಿದ್ದ ಸಿಬಿಎಸ್‌ಇ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ಎತ್ತಿಹಿಡಿದಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಬಿಎಸ್‌ಇ ಮತ್ತು ನವದೆಹಲಿಯ ಪರೀಕ್ಷಾ ನಿಯಂತ್ರಣ ಕೇಂದ್ರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು … Continued

ಬಳ್ಳಾರಿ | ಹಾಸ್ಟೇಲಿನಲ್ಲಿ ರಾಡ್‌ನಿಂದ ಹಲ್ಲೆ ಮಾಡಿದ ವಿದ್ಯಾರ್ಥಿ ; ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

ಬಳ್ಳಾರಿ : ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಶನಿವಾರ ತಡರಾತ್ರಿ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ನಂತರ ಓರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದು, ಇತರ ಏಳು ಜನ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಾಲೆಯಲ್ಲಿ ನಡೆದ ಸಣ್ಣಪುಟ್ಟ ವಿವಾದದ ನಂತರ ಹಾಸ್ಟೆಲಿನ ಬೆಡ್ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಾಸ್ಟೆಲ್ ವಾರ್ಡನ್ … Continued

ಬೆಂಗಳೂರು | ಮೂರು ದಿನದ ಹಿಂದಿನ ಸಾಂಬಾರ ಬಡಿಸಿದ್ದಕ್ಕೆ ದಂಪತಿ ಮಧ್ಯೆ ಜಗಳ ; ಮಹಿಳೆ ಆತ್ಮಹತ್ಯೆ

ಬೆಂಗಳೂರು: ಕ್ಷುಲ್ಲಕ ಕಾರಣವೊಂದು ಮಹಿಳೆಯೊಬ್ಬರ ಪ್ರಾಣಪಕ್ಷಿ ಹಾರಿಹೋಗುವಂತೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂರು ದಿನದ ಹಳೆಯ ಸಾಂಬಾರ್ ಬಡಿಸಿದ್ದಕ್ಕೆ ಗಂಡ ಆಕ್ಷೇಪಿಸಿದ ನಂತರ ನಡೆದ ಜಗಳದಿಂದ ಮನನೊಂದ 27 ವರ್ಷದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಯನ್ನು ಕಾವ್ಯ ಎಂದು ಗುರುತಿಸಲಾಗಿದೆ. ಈಕೆಗೆ ಐದು ವರ್ಷಗಳ ಹಿಂದೆ ವಿವಾಹವಾಗಿದ್ದು, … Continued

ಕರ್ನಾಟಕ ಬಜೆಟ್‌ : ಅಡಕೆ ಬೆಳೆ ಎಲೆ ಚುಕ್ಕಿ ರೋಗ ನಿಯಂತ್ರಣ ಅಧ್ಯಯನ ಚಟುವಟಿಕೆಗೆ 10 ಕೋಟಿ ರೂ. ಅನುದಾನ

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಕೆ ಮರಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಂಬಂಧ ನಡೆಸುವ ಅಧ್ಯಯನ ಚಟುವಟಿಕೆ ನಡೆಸಲು 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. … Continued