ಮಹಿಳೆ ವಿವಸ್ತ್ರ ಪ್ರಕರಣ : ಸರ್ಕಾರವೇ ಬೆಳಗಾವಿಯಲ್ಲಿದ್ರೂ ಸಿಎಂ, ಡಿಜಿಪಿ ಸಂತ್ರಸ್ತೆಯನ್ನು ಯಾಕೆ ಭೇಟಿಯಾಗಿಲ್ಲ-ಬಿಜೆಪಿ ಸತ್ಯಶೋಧನಾ ಸಮಿತಿ ಆಕ್ಷೇಪ

ಬೆಳಗಾವಿ: ಸಂಪೂರ್ಣ ಆಡಳಿತವೇ ಬೆಳಗಾವಿಯಲ್ಲಿದ್ದರೂ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಯಾಕೆ ಭೇಟಿ ನೀಡಿಲ್ಲ? ಸಂತ್ರಸ್ತೆಯನ್ನು ಯಾಕೆ ಭೇಟಿಯಾಗಿಲ್ಲ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಂಸದರಾದ ಅಪರಾಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ … Continued

ಸಚಿವ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್: ತೆಲಂಗಾಣದ ಬಿಆರ್‌ ಎಸ್ ಮುಖಂಡನ ಬಂಧನ

ಬೆಂಗಳೂರು : ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿದ ಮೇರೆಗೆ ಸೈಬರ್ ಕ್ರೈಂ ಪೊಲೀಸರು ತೆಲಂಗಾಣದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ಕರೀಂನಗರದ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದಾನೆ. ಈತ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ … Continued

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ), ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿದ್ದನ್ನು ಪ್ರಶ್ನಿಸಿದ ಯತ್ನಾಳ ಅರ್ಜಿ ವಿಚಾರಣೆ ಜನವರಿ 5ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಜನವರಿ 5ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ. ಅರ್ಜಿ … Continued

ʼಕೆಎಸ್‌ಆರ್‌ಟಿಸಿʼ ಹೆಸರು ಬಳಕೆ : ಕೇರಳದ ತಕರಾರು ಅರ್ಜಿ ತಿರಸ್ಕರಿಸಿದ ಮದ್ರಾಸ್‌ ಹೈಕೋರ್ಟ್‌, ಕರ್ನಾಟಕಕ್ಕೆ ಗೆಲುವು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಸಂಕ್ಷೇಪಣಾ ಗುರುತು ಬಳಸಬಾರದು ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಲ್ಲಿಸಿದ ಮನವಿಯನ್ನು ಮದ್ರಾಸ್‌ ಹೈಕೋರ್ಟ್‌ ವಜಾಗೊಳಿಸಿದೆ. ಹಾಗೂ ಕೆಎಸ್ಆಆರ್​ಟಿಸಿ ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ‘ಕೆಎಸ್ಆರ್ ಟಿ ಸಿ’ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ, ಕೇರಳಕ್ಕೆ ಹಿನ್ನಡೆಯಾಗಿದೆ. … Continued

ರೈತರಿಗೆ ಸಿಹಿ ಸುದ್ದಿ…| ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ : ರಾಜ್ಯದಲ್ಲಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿದ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲದ ಅಸಲು ಹಣ ಪಾವತಿಸಿದರೆ ಸಂಪೂರ್ಣವಾಗಿ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ … Continued

ಸ್ಯಾಟಲೈಟ್ ಫೋನ್ ಮೂಲಕ ಯಾದಗಿರಿಯಿಂದ ಪಾಕಿಸ್ತಾನಕ್ಕೆ ಕರೆ ಮಾಡಿರುವ ಶಂಕೆ

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟ್‌ ಲೈಟ್‌ ಫೋನ್‌ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 17ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್ ನಿಂದ ಕರೆ ಹೋಗಿದೆ ಎನ್ನಲಾಗಿದೆ. ಅನಾಮಧೇಯ ಸ್ಥಳಕ್ಕೆ ನಿಷೇಧಿತ ‘ತುರಾಯಾ’ ಸ್ಯಾಟಲೈಟ್ ಫೋನ್ ಉಪಕರಣ … Continued

ಧಾರವಾಡ-ಕಿತ್ತೂರು-ಬೆಳಗಾವಿ ರೈಲು ಯೋಜನೆ ಟೆಂಡರ್‌ ರದ್ದು : ಕಾಂಗ್ರೆಸ್‌ ಆಕ್ರೋಶ

 ಹುಬ್ಬಳ್ಳಿ: ಧಾರವಾಡ-ಕಿತ್ತೂರು, ಬೆಳಗಾವಿ ರೈಲು ಮಾರ್ಗದ ಕ್ಯಾರಕೊಪ್ಪ-ಮಮ್ಮಿಗಟ್ಟಿ ರೈಲು ಮಾರ್ಗ ಅಭಿವೃದ್ಧಿಪಡಿಸಲು ಮಂಜೂರಾದ ಟೆಂಡರ್‌ ಅನ್ನು ಕೇಂದ್ರ ಸರ್ಕಾರ ಯಾವುದೇ ಕಾರಣ ನೀಡದೆ ಏಕಾಏಕಿ ರದ್ದುಪಡಿಸಿದ್ದು ಇದು ಈ ಭಾಗಕ್ಕೆ ಭಾರೀ ಹಿನ್ನಡೆಯಾಗಿದೆ. ಆದರೆ ಈ ಭಾಗದ ಬಿಜೆಪಿ ನಾಯಕರು ಹಾಗೂ ಸಂಸದರು ನಿಷ್ಕ್ರಿಯರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ … Continued

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಜನವರಿ 1ರಿಂದ ಆರಂಭ

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂ.ಗಳು ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳ ಭತ್ಯೆ ನೀಡುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಾರಂಭವಾಗಲಿದೆ ಹಾಗೂ ಯೋಜನೆ ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರಕಟಿಸಿದ್ದಾರೆ. ಈ … Continued

ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಿ: ರೂಪಾ ಮೌದ್ಗಿಲಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಪೋಸ್ಟ್‌ಗಳನ್ನು ಡಿಲೀಟ್‌ ಮಾಡುವಂತೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕ್ರಿಮಿನಲ್‌ ಕೇಸ್‌ ಗಳನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಅಭಯ ಎಸ್. ಓಕಾ ಮತ್ತು ಪಂಕಜಮಿಥಾಲ್ … Continued