ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ ಮೂರು ಕ್ಷೇತ್ರಗಳು ; ಸುಮಲತಾ ಮುಂದಿನ ನಡೆ ಏನು..?

ಬೆಂಗಳೂರು: ಜೆಡಿಎಸ್-ಬಿಜೆಪಿ ದೋಸ್ತಿಗಳ ಮಧ್ಯೆ ಅಸಮಾಧಾನಕ್ಕೆ ಕಾರಣವಾಗಿದ್ದ ಕೋಲಾರ ಕ್ಷೇತ್ರವನ್ನು ಬಿಜೆಪಿ ಕೊನೆಗೂ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಶನಿವಾರ ಅರಮನೆ ಮೈದಾನದ ಸಭಾಂಗಣದಲ್ಲಿ ಬಿಜೆಪಿಯ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಇದನ್ನು ತಿಳಿಸಿದ್ದಾರೆ. ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಟ್ಟಿರುವುದಾಗಿ … Continued

ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಭಾರೀ ಬದಲಾವಣೆ, ಐವರು ನೂತನ ಕಾರ್ಯಾಧ್ಯಕ್ಷರ ನೇಮಕ, ಚುನಾವಣಾ ಪ್ರಚಾರ ಸಮಿತಿಗೂ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಮೇಜರ್‌ ಸರ್ಜರಿ ಮಾಡಿದೆ. ಸಂಘಟನಾತ್ಮಕ ಬದಲಾವಣೆ ಮಾಡಿರುವ ಕಾಂಗ್ರೆಸ್‌ ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದ್ದು, ಅವರ ಬದಲಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಅಲ್ಲದೆ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ವಿನಯಕುಮಾರ ಸೊರಕೆ ಅವರನ್ನು ನೇಮಕ … Continued

ವೀಡಿಯೊ…| ಕುಮಟಾ: ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು…!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ, ಹಳಕಾರ, ಚಿತ್ರಗಿ ಮೊದಲಾದ ಪ್ರದೇಶಗಳಲ್ಲಿ ರಾತ್ರಿ ಅವಧಿಯಲ್ಲಿ ಆಗಾಗ ಜನರಿಗೆ ಕಾಣಿಸಿಕೊಂಡು ಜನರಿಗೆ ಆತಂಕ ಮೂಡಿಸಿದ್ದ ಚಿರತೆಯೊಂದು ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿದೆ. ಕುಮಟಾ ತಾಲೂಕಿನ ಚಿತ್ರಗಿಯ ಶೇಷಾದ್ರಿ ಗುಡ್ಡದಲ್ಲಿ ಅರಣ್ಯ ಇಲಾಖೆಯವರು ಇಟ್ಟಿರುವ ಬೋನಿನಲ್ಲಿ ಈ ಚಿರತೆ ಸೆರೆಯಾಗಿದೆ. ಈ ಭಾಗದ ಜನರು … Continued

ರಾಜ್ಯದ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: 5, 8ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶುಕ್ರವಾರ ಅನುಮತಿ ನೀಡಿದ್ದು, ಮಾರ್ಚ್ 25 (ಸೋಮವಾರ) ಪರೀಕ್ಷೆ ಮುಂದುವರಿಸಲು ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 25 ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್‌ … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಇಲ್ಲಿನ ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ … Continued

ವೀಡಿಯೊ…| : ಭಾರತದ 21ನೇ ಶತಮಾನದ ಪುಷ್ಪಕ ‘ವಿಮಾನ’ ಯಶಸ್ವಿಯಾಗಿ ಉಡಾವಣೆ…!

ಬೆಂಗಳೂರು : “ಸ್ವದೇಶಿ ಬಾಹ್ಯಾಕಾಶ ನೌಕೆ” ಎಂದು ಕರೆಯಲ್ಪಡುವ ಇಸ್ರೋದ ಎಸ್‌ಯುವಿ ಗಾತ್ರದ ರೆಕ್ಕೆಯ ರಾಕೆಟ್ ʼಪುಷ್ಪಕʼ ಶುಕ್ರವಾರ ಬೆಳಿಗ್ಗೆ ಚಿತ್ರದುರ್ಗ ಸಮೀಪದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ (ಎಟಿಆರ್) ತನ್ನ ಮರುಬಳಕೆ ಮಾಡಬಹುದಾದ ರಾಕೆಟ್‌ (ಆರ್‌ಎಲ್‌ವಿ)ʼಪುಷ್ಪಕʼವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆರ್‌ಎಲ್‌ವಿಯನ್ನು ಶುಕ್ರವಾರ ಬೆಳಗ್ಗೆ 7 ಗಂಟೆಗೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ ಎಂದು ಇಸ್ರೋ … Continued

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆ ಸಾವು

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆಯೊಂದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಟ್ಟಿಗೆಯ ಇಡಕೆಮನೆ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಇಡಕೆಮನೆಯ ಪರಮೇಶ್ವರ ರಾಮಾ ಕುಣಬಿ ಅವರ ತೋಟಕ್ಕೆ ಕಾಡಾನೆ ಬಂದಿತ್ತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎನ್ನಲಾಗಿದೆ. ಆಹಾರ … Continued

5, 8, 9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಸಮ್ಮತಿ

ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ. ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಿರುವ ಕರ್ನಾಟಕ … Continued

ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅರೆಸ್ಟ್

ಬೆಂಗಳೂರು: ಬಿಗ್ ಬಾಸ್‌’ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಮೇಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ … Continued

ಚುನಾವಣಾ ಆಯೋಗದ ಸೂಚನೆ : ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ಶೋಭಾ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವಂತೆ … Continued