ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ​​ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಶುಕ್ರವಾರ (ಅಕ್ಟೋಬರ್‌ ೨೦) ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ​​ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪೂರ್ಣಿಮಾ ಶ್ರೀನಿವಾಸ, ಶ್ರೀನಿವಾಸ ಹಾಗೂ ನರಸಿಂಹ ನಾಯಕ … Continued

ವಿಎಚ್‌ಪಿ ಮುಖಂಡನ ಮೇಲೆ ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮಂಗಳೂರಿನ ಮಂಗಳಾದೇವಿ ಜಾತ್ರೆಯಲ್ಲಿ ಭಗವಾಧ್ವಜ ಕಟ್ಟಿರುವ ಹಿಂದೂಗಳ ಮಳಿಗೆಗಳಲ್ಲಿ ಮಾತ್ರವೇ ಹಿಂದೂ ಗ್ರಾಹಕರು ವ್ಯಾಪಾರ ಮಾಡಬೇಕು … Continued

ಕರ್ನಾಟಕದ ಕೆಲ ಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನವದೆಹಲಿ : ಭಾರತದ ಹವಾಮಾನ ಇಲಾಖೆ (IMD) ಪ್ರಕಾರ ದಕ್ಷಿಣದ ರಾಜ್ಯಗಳಾದ ಕೇರಳ (Kerala) ಮತ್ತು ತಮಿಳುನಾಡು ಹಾಗೂ ಕರಾವಳಿ ಕರ್ನಾಟಕದಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಕರಾವಳಿ … Continued

ಸುವರ್ಣ ಕರ್ನಾಟಕ…. ಒಂದು ಚಿಂತನೆ

(ಅಕ್ಟೋಬರ್ ೨೦ ರಂದು ಸುವರ್ಣ ಕರ್ನಾಟಕ ಮಹೋತ್ಸವ ಇದ್ದು, ವರ್ಷದುದ್ದಕ್ಕೂ ಕನ್ನಡ ನಾಡು, ನುಡಿ, ಸಂಸ್ಕೃತಿ, ಅಭಿವೃದ್ಧಿ ಕುರಿತು ಕಾರ್ಯಕ್ರಮಗಳು ನಡೆಯುತ್ತವೆ) ಕನ್ನಡ ಭಾಷೆ ಮಾತನಾಡುವ ಪ್ರದೇಶಗಳ ಒಗ್ಗೂಡಿಸುವಿಕೆ ಹಾಗೂ ಏಕೀಕರಣಗೊಂಡುದುದರ ಬಗ್ಗೆ ಒಂದು ಬಹುಕಾಲಿನ ಇತಿಹಾಸ ಇರುವಂತೆಯೇ, ಕರ್ನಾಟಕವೆಂಬ ಹೆಸರಿನ ನಾಮಕರಣಕ್ಕೂ ಕೂಡ ಒಂದು ಚರಿತ್ರೆ ಇದೆ. ಪ್ರಾಚೀನ ಕಾಲದಿಂದಲೂ ಕನ್ನಡಿಗರಿಗೆ ಸಾಂಸ್ಕೃತಿಕವಾಗಿ ಲಭಿಸಿದ್ಧ … Continued

ʼಸಂಗಮ ಸಿರಿʼ ಪ್ರಶಸ್ತಿಗೆ ಬಿಜ್ಜೂರ ಆಯ್ಕೆ

ಹುಬ್ಬಳ್ಳಿ: ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ “ಸಂಗಮ ಸಿರಿ”- 23ರ ಪ್ರಶಸ್ತಿಯನ್ನು ವಚನ ರಚನೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸರೂರ್ ಗ್ರಾಮದ ಬಸನಗೌಡ ಬಿಜ್ಜೂರ ಅವರು ರಚಿಸಿದ” ಮೃದು ವಚನ” ಆಧುನಿಕ ವಚನ ಸಂಕಲನಕ್ಕೆ ನೀಡಲಾಗಿದೆ. ಪ್ರಶಸ್ತಿಯುವ10 ಸಾವಿರ ರೂ.ಹಾಗೂ ಫಲಕವನ್ನು ಒಳಗೊಂಡಿದೆ. ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ.ಗೌಡಪ್ಪಗೊಳ ಆದ್ಯಕ್ಷತೆಯಲ್ಲಿ ನಡೆದ ಆಯ್ಕೆ … Continued

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ : ಕಾಂಗ್ರೆಸ್​ ಸಚಿವರ ಹೆಸರು ಪ್ರಸ್ತಾಪ

ಕಲಬುರಗಿ: ಸಚಿವ ಶರಣಪ್ರಕಾಶ ಪಾಟೀಲ ಅವರಿಂದ ಕಿರುಕುಳಕ್ಕೊಳಗಾಗಿದ್ದೇನೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿವಕುಮಾರ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬಂಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿದ್ದ ವೇಳೆ ಕಾಂಗ್ರೆಸ್ … Continued

ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಲು ಆದೇಶ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧ, ವಿಕಾಸಸೌಧ, … Continued

ವೀಡಿಯೊ…| ಬೆಂಗಳೂರಿನ ಕಟ್ಟಡದಲ್ಲಿ ಸ್ಫೋಟ, ಬೆಂಕಿ ಅನಾಹುತ ; 4 ಮಹಡಿ ಕಟ್ಟಡದಿಂದ ಜಿಗಿದ ವ್ಯಕ್ತಿ

ಬೆಂಗಳೂರು : ಬೆಂಗಳೂರಿನ ಕೋರಮಂಗಲದಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ನಾಲ್ಕರಿಂದ ಐದು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದವರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕಟ್ಟಡದ ಮೇಲಿನ ಮಹಡಿಯಲ್ಲಿ ಕೆಫೆ ಇತ್ತು ಮತ್ತು ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ.ಸ್ವಲ್ಪ ಸಮಯದ ನಂತರ, ಒಬ್ಬ ವ್ಯಕ್ತಿ ನಾಲ್ಕು ಮಹಡಿ … Continued

ನವಂಬರ್‌ 1ರಿಂದ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌

ಶಿರಸಿ: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ನವಂಬರ್‌ 1ರಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿ-ಕುಮಟಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ 766(E)ಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ. ಬುಧವಾರ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್. ಅಧ್ಯಕ್ಷತೆಯಲ್ಲಿ ಗುತ್ತಿಗೆದಾರ ಕಂಪನಿ ಆರ್. ಎನ್. ಎಸ್ ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆಗಳು … Continued

ಭಟ್ಕಳ : ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ

ಕಾರವಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳಯ ತಾಲೂಕಿನ ಮುರುಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ನಗ ಹಾಗೂ ಮಗಳೊಂದಿಗೆ ಮೂರು ದಿನಗಳಿಂದ  ಮುರುಡೇಶ್ವರದ … Continued