ಜೂನ್‌ ಒಳಗೆ ಜಿಪಂ, ತಾಪಂ, ಗ್ರಾಪಂ ಚುನಾವಣೆ ; ಸಿಎಂ ಸಿದ್ದರಾಮಯ್ಯ

ಅಂಕೋಲಾ : ಜೂನ್‌ ಒಳಗೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಗಂಗಾವಳಿ ನದಿಗೆ ಕಟ್ಟಲಾದ ಗಂಗಾವಳಿ-ಮಂಜುಗುಣಿ ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ಗೋಕರ್ಣವನ್ನು ಮೇಲ್ದರ್ಜಗೇರಿಸಿ ಪಟ್ಟಣ ಪಂಚಾಯತ ಒತ್ತಾಯ ಇದ್ದಾಗ್ಯೂ ಜೂನ್‌ ಒಳಗೆ … Continued

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ವ್ಯಸನವನ್ನು  ಗಮನದಲ್ಲಿಟ್ಟುಕೊಂಡು ಈ ಕ್ರಮಕ್ಕೆ ಮುಂದಾಗಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, … Continued

ಕರ್ನಾಟಕದ ಐದಾರು ಜಿಲ್ಲೆಗಳಲ್ಲಿ 3-4 ದಿನಗಳ ಕಾಲ ಮಳೆಯ ಮುನ್ಸೂಚನೆ

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದರಿಂದ ದಕ್ಷಿಣ ಭಾರತದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿಲಾಗಿದೆ. ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಹಾಸನ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ … Continued

ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿಯ ಬಿಜೆಪಿ ಶಾಸಕ

ಗದಗ: ಕಾಮಗಾರಿ ಗುತ್ತಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದ್ದು, … Continued

ಮಾನನಷ್ಟ ಮೊಕದ್ದಮೆ ರದ್ದು ಕೋರಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ (D Roopa) ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಹಿನ್ನಡೆಯಾಗಿದೆ. ರೂಪಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ರದ್ದು ಮಾಡುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್‌ ಅಧಿಕಾರಿ ರೂಪಾ ಅವರು ತನ್ನ … Continued

ಸುಳ್ಳು ಮಾಹಿತಿ ಹಂಚಿಕೊಂಡು ಅಪಪ್ರಚಾರ ಆರೋಪ ; ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ಮುಡಾ ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂಬಡ್ತಿ ಪಡೆಯಲು ಡಿ.ಬಿ.ನಟೇಶ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ … Continued

ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ತಡೆದ ಶಿಕ್ಷಕರ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆದ ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಲ್ಲೆ ನಡೆದ ಘಟನೆ ಕಲಬುರ್ಗಿ ನಗರದ ಡಾ. ಮಾಲಕರೆಡ್ಡಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ಈಚೆಗೆ ನಡೆದಿದೆ ಎಂದು ವರದಿಯಾಗಿದೆ. ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಆಂತರಿಕ ಪರೀಕ್ಷೆಯ ಸಮಯದಲ್ಲಿ ಶಹಬಾಜ್ ಎಂಬ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸಿ ನಕಲು ಮಾಡಲು ಪ್ರಯತ್ನಿಸಿದ್ದ ಎಂದು … Continued

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ

ಬಾಗಲಕೋಟೆ : ಶಿವಾಜಿ ಜಯಂತಿ (shivaji jayanthi) ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ (Stone pelting) ನಡೆಸಿರುವ ಘಟನೆ ಬಾಗಲಕೋಟೆಯ (bagalakote ) ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್​​ ಸಿಬ್ಬಂದಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ. ಘಟನೆ ನಡೆದ ಮರು … Continued

ಬೆಂಗಳೂರು: ನಿವೃತ್ತ ಇಸ್ರೋ ನೌಕರನಿಂದ ಪತ್ನಿಯ ಹತ್ಯೆ

ಬೆಂಗಳೂರು: ಮಹಾನಗರದ ಕೆ.ಆರ್. ಪುರ ಸಮೀಪದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಘೋರ ಘಟನೆಯೊಂದು ನಡೆದಿದೆ. ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಟವೆಲ್‌ನಿಂದ ಬಿಗಿದು ಕೊಲೆ ಮಾಡಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು 65 ವರ್ಷದ ನಾಗೇಶ್ವರ ರಾವ್ ಎಂದು ಗುರುತಿಸಲಾಗಿದೆ. ಬುಧವಾರ … Continued

ರಾಯಬಾಗ | ಲಾರಿ-ಬೈಕ್ ಡಿಕ್ಕಿ : ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಹಾಗೂ ಪುತ್ರಿ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಜೈಸಿಂಗ್‌ಪುರದ ಗಿರೇಪ್ಪ ಕುಂದ್ರಾಳಿ (38), ಅವರ ಪತ್ನಿ ಮಂಜುಳಾ (28) ಮತ್ತು … Continued