ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಅಧಿಕಾರಿಗೂ ಬಡ್ತಿ…! ರಾಜ್ಯ ಸರ್ಕಾರದ ಎಡವಟ್ಟು ಬಹಿರಂಗಗೊಳಿಸಿದ ಆರ್‌. ಅಶೋಕ

ಬೆಂಗಳೂರು: ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಕೆಎಎಸ್‌ ಅಧಿಕಾರಿಗೂ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ವಿಪಕ್ಷದ ನಾಯಕ ಆರ್‌ ಅಶೋಕ ದಾಖಲೆ ಬಹಿರಂಗ ಪಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಶೋಕ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ … Continued

ಅಮೆರಿಕದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ : ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿ

ಸ್ಯಾನ್ ಫ್ರಾನ್ಸಿಸ್ಕೋ/ ನವದೆಹಲಿ : ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ (UC Berkeley) ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಈ ಕುರಿತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಯ ಪತ್ತೆಗಾಗಿ ಸ್ಥಳೀಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು 22 ವರ್ಷದ ಸಾಕೇತ್ ಶ್ರೀನಿವಾಸಯ್ಯ … Continued

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್‌ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಜೋ ಸೈಮನ್‌ ಅಪಾರ ಕೊಡುಗೆ … Continued

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎಂ. ಸತ್ಯವಾರ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೊಸಕೋಟೆ-ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೊದಲು ಕಾರು ಮುಂದೆ … Continued

ಮಾಟ-ಮಂತ್ರದ ಶಂಕೆ: ಜ್ಯೋತಿಷಿಯ ಮಾತು ನಂಬಿ ಹೆತ್ತ ತಾಯಿಯನ್ನೇ ಕೊಂದ ಮಗಳು…!

ತುಮಕೂರು: ಜ್ಯೋತಿಷಿಯೊಬ್ಬರ ಮಾತನ್ನು ನಂಬಿ, ತನ್ನ ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಭಾವಿಸಿದ ಮಗಳೊಬ್ಬಳು ಹೆತ್ತ ತಾಯಿಯನ್ನೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಘೋರ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಲ್ಲದೆ, ಮೃತ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ ಹಣ ಇತ್ತು. … Continued

ವೀಡಿಯೊಗಳು | ಭದ್ರಾ ಅಭಯಾರಣ್ಯದ ಅಪರೂಪದ ದೃಶ್ಯ: ಅಕ್ಕಪಕ್ಕವೇ ಕುಳಿತು ನೀರು ಕುಡಿದ ಕಪ್ಪು ಚಿರತೆ-ಸಾಮಾನ್ಯ ಚಿರತೆ !

ಕರ್ನಾಟಕದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bhadra Tiger Reserve) ವನ್ಯಜೀವಿ ಪ್ರೇಮಿಗಳ ಕಣ್ಮನ ಸೆಳೆಯುವ ಅತ್ಯಂತ ಅಪರೂಪದ ದೃಶ್ಯವೊಂದು ಕಂಡುಬಂದಿದೆ. ಏಕಾಂತವಾಗಿ ಇರಲು ಬಯಸುವ ಕಾಡಿನ ಕ್ರೂರ ಮೃಗಗಳಾದ ಕಪ್ಪು ಚಿರತೆ (Black Panther) ಮತ್ತು ಸಾಮಾನ್ಯ ಮಚ್ಚೆಯುಳ್ಳ ಚಿರತೆಯು ಯಾವುದೇ ಸಂಘರ್ಷವಿಲ್ಲದೆ, ಅಕ್ಕಪಕ್ಕದಲ್ಲೇ ಕುಳಿತು ನೀರು ಕುಡಿಯುತ್ತಿರುವ ಅದ್ಭುತ ಕ್ಷಣ ಕ್ಯಾಮರಾದಲ್ಲಿ ಸೆರೆಯಾಗಿದೆ. … Continued

ಬಾಂಗ್ಲಾದೇಶ ಚುನಾವಣೆ ಫಲಿತಾಂಶ : ಭರ್ಜರಿ ಜಯದತ್ತ ಬಿಎನ್‌ಪಿ ; ಪ್ರಧಾನಿ ಹಾದಿಯಲ್ಲಿ ತಾರಿಕ್ ರಹಮಾನ್

ಢಾಕಾ : ಬಾಂಗ್ಲಾದೇಶದಲ್ಲಿ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಐತಿಹಾಸಿಕ ಗೆಲುವಿನತ್ತ ಮುನ್ನಡೆದಿದೆ. 2024 ರ ಮಾರಕ ದಂಗೆಯ ನಂತರ ನಡೆದ ಮೊದಲ ಚುನಾವಣೆಯಲ್ಲಿ ಪಕ್ಷವು ಭರ್ಜರಿ ಗೆಲುವಿನ ಹಾದಿಯಲ್ಲಿದೆ, ಆ ಪಕ್ಷದ ನಾಯಕ ತಾರಿಕ್ ರೆಹಮಾನ್ ಪ್ರಧಾನಿಯಾಗಲಿದ್ದಾರೆ. ಬಾಂಗ್ಲಾದೇಶದ 13ನೇ ರಾಷ್ಟ್ರೀಯ ಸಂಸತ್ ಚುನಾವಣೆಯ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗವು ಇಂದು, ಶುಕ್ರವಾರ (ಫೆಬ್ರವರಿ 13) … Continued

ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ ಪೊಲೀಸರ ವಶಕ್ಕೆ

ಬೆಂಗಳೂರು : ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಿಜೆಪಿ ಶಾಸಕ ಬೈರತಿ ಬಸವರಾj ಅವರನ್ನು ಅಹಮದಾಬಾದ್‌ನಿಂದ ಆಗಮಿಸಿದ ಬೆನ್ನಲ್ಲೇ, ಗುರುವಾರ ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಟರ್ಮಿನಲ್-1ರಲ್ಲಿ ಅವರ ಆಗಮನಕ್ಕಾಗಿ ಕಾಯುತ್ತಿದ್ದ ಪೊಲೀಸ್ ತಂಡವು ಅವರನ್ನು ವಶಕ್ಕೆ ತೆಗೆದುಕೊಂಡಿದೆ. ಕೆ.ಆರ್. ಪುರಂ ಶಾಸಕರನ್ನು ಸಂಜೆ 7 ಗಂಟೆ ಸುಮಾರಿಗೆ ಕ್ರಿಮಿನಲ್ … Continued

ಕುಮಟಾ : ಪೆಟ್ರೋಲ್ ಬಂಕ್ ಕಳ್ಳತನ ; ಇಬ್ಬರನ್ನು ಬಂಧಿಸಿದ ಪೊಲೀಸರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕುಮಟಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಫೆಬ್ರವರಿ 1ರ ರಾತ್ರಿ ಪೆಟ್ರೋಲ್ ಬಂಕ್ ಕಚೇರಿಯ ಹಿಂಭಾಗದ ಕಿಟಕಿಯ ಸರಳುಗಳನ್ನು ಕತ್ತರಿಸಿ ಒಳನುಗ್ಗಿದ್ದ ಕಳ್ಳರು, ಲಾಕರ್ ಮೀಟಿ ತೆಗೆದು ಅದರಲ್ಲಿದ್ದ 25,000 ರೂ. ನಗದು ಹಣವನ್ನು … Continued

ವೀಡಿಯೊ..| ಬೆಂಗಳೂರು : ರಸ್ತೆ ಜಗಳ ; ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಎಸ್‌ಯುವಿ ಚಾಲಕ…!

ಬೆಂಗಳೂರು: ರಾಜಧಾನಿಯ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road) ಬೆಚ್ಚಿಬೀಳಿಸುವಂತಹ ‘ರೋಡ್ ರೇಜ್’ (Road Rage) ಘಟನೆಯೊಂದು ನಡೆದಿದೆ. ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಇದ್ದಾಗಲೇ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋಗಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಳೆ ವಿಮಾನ ನಿಲ್ದಾಣ … Continued