ಉಡುಪಿ ; ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು

ಉಡುಪಿ: ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವೀಡಿಯೊ ಚಿತ್ರೀಕರಣದ ಘಟನೆಗೆ ಸಂಬಂಧಿಸಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ವೀಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ … Continued

ಬೆಂಗಳೂರಿನ ಹೋಟೆಲ್‌ಗಳಲ್ಲಿ ತಿನಿಸುಗಳ ಬೆಲೆ ಹೆಚ್ಚಳ

ಬೆಂಗಳೂರು : ಆಹಾರ ಧಾನ್ಯಗಳು, ತರಕಾರಿಗಳು, ಹಾಲು ಮತ್ತು ಇತರ ವಸ್ತುಗಳ ಬೆಲೆ ಏರಿಕೆಯ ನಂತರ ಹೋಟೆಲ್​ ಮಾಲೀಕರು ಆಗಸ್ಟ್ 1 ರಿಂದ ರೆಸ್ಟೋರೆಂಟ್ ಮತ್ತು ಹೊಟೇಲ್‌ಗಳ ತಿನಿಸುಗಳಲ್ಲಿನ ಬೆಲೆ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದಾರೆ. ಹೊಟೇಲ್‌ಗಳ ತಿಂಡಿ-ತಿನಿಸುಗಳ ಬೆಲೆಯನ್ನು 10%ರಷ್ಟು ಹೆಚ್ಚಿಸಲು ನಿರ್ಧರಿಸಿದ್ದಾರೆ. ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘ (ಬಿಬಿಎಚ್‌ಎ) ಸಭೆಯಲ್ಲಿ ಈ … Continued

ಕೋಮು ಗಲಭೆ ಪ್ರಕರಣಗಳಲ್ಲಿ “ಅಮಾಯಕರʼ ಮೇಲಿನ ಕೇಸ್‌ ಮರು ಪರಿಶೀಲಿಸಿ ಹಿಂಪಡೆಯುವಂತೆ ಶಿಫಾರಸು: ಬಿಜೆಪಿ ಆರೋಪ, ಗೃಹ ಸಚಿವರ ಸ್ಪಷ್ಟನೆ

ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಒಂದು’ ಕೋಮಿನ ಕಮ್ಯುನಲ್ ಅಪರಾಧಿಗಳಿಗೆ ನಮ್ಮಲ್ಲಿ ಕ್ಲೀನ್ ಚಿಟ್ ನೀಡಲಾಗುವುದು ಎಂದು ಬೋರ್ಡ್ ಹಾಕಿಕೊಂಡು ಡಾ. ಪರಮೇಶ್ವರ ಅವರು ಕಾರ್ಯನಿರ್ವಹಿಸುತ್ತಿರುವಂತಿದೆ. ಇದಕ್ಕಿಂತ ನಾಚಿಕೆಗೇಡಿನ … Continued

ವಿಪಕ್ಷ ನಾಯಕನ ಆಯ್ಕೆ ಮಾಡಲಾರದಷ್ಟು ಶೋಚನೀಯ ಸ್ಥಿತಿಗೆ ತಲುಪಿದ ಬಿಜೆಪಿ : ಜಗದೀಶ ಶೆಟ್ಟರ

ಕೊಪ್ಪಳ: ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲಾರದಷ್ಟು ಶೋಚನಿಯ ಸ್ಥಿತಿಗೆ ಬಿಜೆಪಿ ತಲುಪಿದೆ. ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗದಷ್ಟು ಅಸಮರ್ಥವಾಗಿದೆ. ನಮ್ಮಂಥ ಹಿರಿಯರನ್ನು ಹೊರಗೆ ಕಳುಹಿಸಿದ ನಂತರ ಏನಾಗಿದೆ ಎಂಬುದು ಈಗ ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಹೀಗಾಗಿ ನನ್ನನ್ನು ಕರೆದರೂ … Continued

ಕ್ಯಾಸಲ್‌ ರಾಕ್‌ ಬಳಿ ಭೂ ಕುಸಿತ : ಗೋವಾ-ಬೆಳಗಾವಿ ರೈಲು ಸಂಚಾರ ತಾತ್ಕಾಲಿಕ ರದ್ದು

ಬೆಳಗಾವಿ :ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕ್ಯಾಸಲ್ ರಾಕ್ ಬಳಿ ಗುಡ್ಡ ಕುಸಿತಗೊಂಡಿದೆ. ಇದರಿಂದಾಗಿ ಗೋವಾಕ್ಕೆ ತೆರಳುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಬೆಳಗಾವಿ ಮತ್ತು ಗೋವಾ ಮಾರ್ಗದಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ಬಳಿ ಮಂಗಳವಾರ ರಾತ್ರಿ ಗುಡ್ಡ ಕುಸಿತಗೊಂಡಿದೆ. ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಬಿದ್ದಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಮಂಗಳವಾರ ರಾತ್ರಿ … Continued

ಉತ್ತರ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿ ನೇಮಕ

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಗಂಗೂಬಾಯಿ ರಮೇಶ ಮಾನಕರ ಅವರನ್ನು ನೇಮಕ ಮಾಡಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಯಾಗಿ ವೆಂಕಟೇಶ ಎಂ.ವಿ. ಅವರನ್ನು ನೇಮಕ ಮಾಡಲಾಗಿದೆ. ಗಂಗೂಬಾಯಿ ಮಾನಕರ ಅವರು 1998 ರ ಬ್ಯಾಚ್ ನ ಕೆಎಎಸ್ ಅಧಿಕಾರಿಯಾಗಿದ್ದಾರೆ. 2012ರಲ್ಲಿ ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದಿದ್ದಾರೆ. ಅವರು ಸದ್ಯ ಕರ್ನಾಟಕ … Continued

ಭಾರೀ ಮಳೆ : ಜುಲೈ 26 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಮಂಗಳೂರು/ ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿ ಸಹಿತ ಅಬ್ಬರದ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿದೆ, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಿಸಿ … Continued

ಮಳೆ : ಬೆಳಗಾವಿ ಜಿಲ್ಲೆ ಐದು ತಾಲೂಕುಗಳ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ … Continued

ಜುಲೈ 26ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ … Continued

ರಾಜ್ಯಾದ್ಯಂತ ಮಳೆ ಜೋರು; ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದಲ್ಲದೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಭಾರೀ ಮಳೆಯುವ ಸರಿಯುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ, … Continued