ಆನ್‌ಲೈನ್ ನಲ್ಲಿ ಸಾಲ : ಕಿರುಕುಳ ತಡೆಯಲಾರದೆ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಚೀನಾ ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಸಾಲ ಪಡೆದಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಸಾಲ ನೀಡಿದವರ ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದ ವರದಿಯಾಗಿದೆ. ಬೆಂಗಳೂರು ನಗರದ ಹೆಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ಈ ಘಟನೆ ನಡೆದಿದ್ದು ತೇಜಸ್ (೨೧) ಎಂಬಾತ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಯಲಹಂಕದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ … Continued

ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಮಗಳು ಸಾವು

ಚಾಮರಾಜನಗರ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷಕುಡಿಸಿದ ತಾಯಿ ತಾನೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಓರ್ವ ಮಗು ಸಾವಿಗೀಡಾಗಿದೆ. ತಾಯಿ ಹಾಗೂ ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಇವರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಒಯ್ಯಲಾಗಿದೆ. ಮಧುವನಹಳ್ಳಿ ಗ್ರಾಮದ … Continued

ಬೆಂಗಳೂರು : ಹಾಡಹಗಲೇ ಕಂಪನಿ ಮುಖ್ಯಸ್ಥರಿಬ್ಬರ ಜೋಡಿ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಕಂಪನಿಯೊಂದರ ಮುಖ್ಯಸ್ಥರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಏರೋನಿಕ್ಸ್‌ ಇಂಟರ್‌ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನುಕುಮಾರ ಅವರನ್ನು ಕಂಪನಿ ಮಾಜಿ ಉದ್ಯೋಗಿ ಸಹಚರರ ಜೊತೆ ಸೇರಿ ತಲವಾರ್‌ನಿಂದ ಹತ್ಯೆ ಮಾಡಿದ್ದ. ಶಿವಮೊಗ್ಗ … Continued

ಬೆಂಗಳೂರಿನಲ್ಲಿ ಹಾಡುಹಗಲೇ ಮಾಜಿ ಉದ್ಯೋಗಿಯಿಂದ ಕಂಪನಿ ಮುಖ್ಯಸ್ಥರಿಬ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆಗಳು ನಡೆದಿದೆ. ಹಾಡುಹಗಲೇ ಖಾಸಗಿ ಕಂಪನಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಯೊಬ್ಬ ಇಬ್ಬರನ್ನು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಮೃತರನ್ನು ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ( Aironics Media Pvt Ltd) ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ ಎಂದು ಗುರುತಿಸಲಾಗಿದೆ. ಶಂಕಿತ ಆರೋಪಿಯನ್ನು … Continued

ಬೈಕ್ ಸ್ಕಿಡ್ ಆಗಿ ಘಟಪ್ರಭಾ ನದಿಯಲ್ಲಿ ಕೊಚ್ಚಿಹೋದ ಸವಾರರು

ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಬೈಕ್ ಸ್ಕಿಡ್ ಆಗಿ ಇಬ್ಬರು ನದಿ ನೀರಿನಲ್ಲಿ ಸಿಲುಕಿದ್ದಾರೆ. ಬೈಕ್ ಸವಾರರಾದ ಅವರಾದಿ ಗ್ರಾಮದ ಚನ್ನಪ್ಪ ಹರಿಜನ ( 38), ದುರ್ಗವ್ವ ಹರಿಜನ( 35 ) ನೀರು ಪಾಲಾಗಿದ್ದಾರೆ. ಮುಳುಗಿದವರ ಹುಡುಕಾಟ ನಡೆದಿದೆ. ಇಬ್ಬರು ವೈಯಕ್ತಿಕ ಕೆಲಸ ನಿಮಿತ್ತ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. … Continued

ಟೊಮೆಟೊ ಬೆಲೆ ಗಗನಕ್ಕೆ: ಟೊಮೆಟೊ ತುಂಬಿದ್ದ ವಾಹನವನ್ನೇ ಕದ್ದೊಯ್ದ ಕಳ್ಳರು…!

ಬೆಂಗಳೂರು : ಟೊಮೆಟೊ ಬೆಲೆ ಗಗನಕ್ಕೇರಿದ್ದು, ಹೀಗಾಗಿ ಟೊಮೆಟೊ ತುಂಬಿದ್ದ ವಾಹನವನ್ನೇ ಕಳ್ಳತನ ಮಾಡಿದ ಘಟನೆ ವರದಿಯಾಗಿದೆ. ಟೊಮೆಟೊ ಪ್ರತಿ ಕೇಜಿಗೆ 110 ರೂ. ದಾಟಿದೆ. ಈ ಹಿನ್ನೆಲೆ ಜನರು ಟೊಮೆಟೊ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಟೊಮೆಟೊ ಬೆಲೆ ಶತಕ ದಾಟಿದ ನಂತರ ಟೊಮೆಟೊಗಳನ್ನು ಹೊಲದೀಂದ ಕಳ್ಳತನ ಮಾಡಿದ ಘಟನೆಗಳು ಹೀಗಾಗಿ ಟೊಮೆಟೊ ಬೆಳೆಗಾರರು ಜಮೀನುಗಳಿಗೆ … Continued

ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್​​ನಲ್ಲಿ ಚಾಕು ಪತ್ತೆ..

ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಇನ್ನೂ ಹೆಚ್ಚಿಸಲಾಗಿದೆ. ವಿಧಾನಸೌಧಕ್ಕೆ ಬರುವವರನ್ನು ತೀವ್ರ ತಪಾಸಣೆಗೊಳಪಡಿಸಿ ಒಳಗೆ ಬಿಡಲಾಗುತ್ತಿದೆ. ಹೀಗೆ ಪರೀಕ್ಷೆ ನಡೆಸುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ನಲ್ಲಿ ಚಾಕುವೊಂದು ಪತ್ತೆಯಾಗಿದ್ದು, ನಂತರ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ವಿಧಾನಸೌಧದ ಪೂರ್ವ ಬಾಗಿಲಿನ ಮೂಲಕ ಈ ಮಹಿಳೆ ಒಳಪ್ರವೇಶಿಸಿದ್ದರು. … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು … Continued

ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಇಂದು ಚಾಲನೆ

ಬೆಂಗಳೂರು: ಇಂದು ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆ ಆರಂಭಗೊಳ್ಳಲಿದ್ದು ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಲಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಬಿಪಿಎಲ್ ಪಡಿತರದಾರರಿಗೆ ‍‍10ಕೆಜಿ ಅಕ್ಕಿ ಗ್ಯಾರಂಟಿ ಕಾಂಗ್ರೆಸ್​ ಘೋಷಿಸಿತ್ತು. ಅದರಂತೆ ಕಾಂಗ್ರೆಸ್‌ ಸರ್ಕಾರ ಅದನ್ನು ಜಾರಿ ಮಾಡಿದೆ. ಸದ್ಯಕ್ಕೆ ಐದು ಕೆಜಿ ಅಕ್ಕಿ ನೀಡಲಿದ್ದು, ಉಳಿದ 5 ಕೆ.ಜಿ … Continued