ಜೂನ್‌ 11ರಂದು ಶಕ್ತಿ ಯೋಜನೆಗೆ ಚಾಲನೆ: ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ…!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಮೂರನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ. ಇದೇ ಭಾನುವಾರ ಜೂನ್‌ 11ರಂದು ಮೊದಲ ಯೋಜನೆಗೆ ವಿಧಾನಸೌಧ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ … Continued

ಬಿಪೋರ್‌ ಜಾಯ್‌ ಚಂಡಮಾರುತ ; ರಾಜ್ಯದ ಈ ಜಿಲ್ಲೆಗಳಲ್ಲಿ 3-4 ದಿನ ಭಾರಿ ಮಳೆ ಸಾಧ್ಯತೆ

ನವದೆಹಲಿ/ಬೆಂಗಳೂರು: ನವದೆಹಲಿ/ಬೆಂಗಳೂರು: ಮುಂದಿನ 36 ಗಂಟೆಗಳಲ್ಲಿ ಬಿಪೋರ್‌ ಜಾಯ್‌ ಚಂಡಮಾರುತ ತೀವ್ರಗೊಳ್ಳಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ-ವಾಯುವ್ಯದತ್ತ ಸಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಟ್ವೀಟ್‌ನಲ್ಲಿ ತಿಳಿಸಿದೆ. ಅತ್ಯಂತ ತೀವ್ರವಾದ ಚಂಡಮಾರುತವು ಜೂನ್ 8 ರಂದು ರಾತ್ರಿ 11:30 ಗಂಟೆಗೆ ಗೋವಾದ ಪಶ್ಚಿಮ-ನೈಋತ್ಯಕ್ಕೆ 840 ಕಿಲೋಮೀಟರ್ ಮತ್ತು ಮುಂಬೈನಿಂದ 870 ಕಿಮೀ ಪಶ್ಚಿಮ-ನೈಋತ್ಯದಲ್ಲಿ ಪೂರ್ವ-ಮಧ್ಯ … Continued

ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಮದುವೆ

ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಾಲ ವಾಙ್ಮಯಿ ಅವರು ಬುಧವಾರ ಬೆಂಗಳೂರಿನಲ್ಲಿ ವಿವಾಹವಾದರು. ಮಾಧ್ಯಮ ವರದಿಗಳ ಪ್ರಕಾರ, ಮದುವೆಯಲ್ಲಿ ಆಪ್ತರು ಮತ್ತು ಸಂಬಂಧಿಕರು ಭಾಗವಹಿಸಿದ್ದರು ಮತ್ತು ಯಾವುದೇ ರಾಜಕೀಯ ನಾಯಕರನ್ನು ಆಹ್ವಾನಿಸಲಾಗಿಲ್ಲ. ಪ್ರತೀಕ್ ಅವರೊಂದಿಗೆ ವಾಙ್ಮಯಿ ಅವರ ವಿವಾಹವು ಉಡುಪಿ ಅದಮಾರು ಮಠದ ವೈದಿಕ ಕ್ರಮದಲ್ಲಿ … Continued

ಕ್ರೆಡಾಯ್ ರಾಜ್ಯಾಧ್ಯಕ್ಷರಾಗಿ ಹುಬ್ಬಳ್ಳಿ ಉದ್ಯಮಿ ಪ್ರದೀಪ ರಾಯ್ಕರ ಆಯ್ಕೆ

ಹುಬ್ಬಳ್ಳಿ: ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (CREDAI) ರಾಜ್ಯ ಘಟಕದ ಅಧ್ಯಕ್ಷರಾಗಿ ಹುಬ್ಬಳ್ಳಿಯ ರಾಟ್ಸನ್ ಕನ್ಸ್ಟ್ರಕ್ಷನ್ ಕಂಪನಿಯ ಮಾಲಕರಾದ ಪ್ರದೀಪ ರಾಯ್ಕರ ಅವರು ಆಯ್ಕೆಯಾಗಿದ್ದಾರೆ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದವರು. ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹುಬ್ಬಳ್ಳಿಯ ಡೆನ್ನಿಸನ್ಸ್ ಹೋಟೆಲ್‌ನಲ್ಲಿ ಜೂನ್‌ 10ರಂದು ಸಂಜೆ 6ಗಂಟೆಗೆ ನಡೆಯಲಿದೆ, ಮೊಟ್ಟ … Continued

ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ : ಕೋಪದಲ್ಲಿ ಕ್ರೇನಿಗೆ ಗುದ್ದಿ ದಂತ ಮುರಿದುಕೊಂಡ ಆನೆ..!

ರಾಮನಗರ: ಐದು ದಿನಗಳ ಅಂತರದಲ್ಲಿ ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ ಸಿಕ್ಕಿದೆ. ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸಿಕ್ಕಿಬಿದ್ದ 40 ವರ್ಷದ ಗಂಡಾನೆಯನ್ನು ಲಾರಿಗೆ ಹತ್ತಿಸುವ ವೇಳೆ ಅದರ ದಂತ ಮುರಿದು ಹೋಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ … Continued

ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಹೇಳಿದ್ದಾರೆ. ಈ ವರ್ಷ ಪಠ್ಯಪುಸ್ತಕಗಳಲ್ಲಿ ಏನಿರಬೇಕು ಮತ್ತು ಏನಿರಬಾರದು ಎಂಬುದನ್ನು ಪರಿಶೀಲಿಸಿದ ಬಳಿಕ ತಜ್ಞರು ಪಠ್ಯಪುಸ್ತಕಗಳನ್ನು ಪರಿಷ್ಕರಿಸುತ್ತಾರೆ. ಸಚಿವ ಸಂಪುಟದಲ್ಲೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಪಠ್ಯಪುಸ್ತಕದಲ್ಲಿ ಏನಿರಬೇಕು, ಯಾವುದನ್ನು … Continued

ಪೊಲೀಸರು ಹಣೆಗೆ ಕುಂಕುಮ, ತಿಲಕ ಇಡಬಾರದೆಂದು ಹೇಳಿಲ್ಲ: ಗೃಹ ಸಚಿವ ಡಾ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು : ಪೊಲೀಸರು ಕುಂಕುಮ, ತಿಲಕ ಇಡಬಾರದು ಎಂದು ನಾನು ಯಾವ ಸಭೆಯಲ್ಲೂ ಸೂಚನೆ ಕೊಟ್ಟಿಲ್ಲ. ಆದರೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸುಳ್ಳು ವದಂತಿ ಹರಡುವುದು ಸರಿಯಲ್ಲ, ಕುಂಕುಮ ಬೊಟ್ಟು, ವಿಭೂತಿ, ತಿಲಕ ಏನು ಬೇಕಾದರೂ ಇಟ್ಟುಕೊಳ್ಳಬಹುದು. … Continued

ಸರ್ಕಾರದ ಅಚ್ಚರಿಯ ನಿರ್ಧಾರ : ಬಿಡಿಎ-ಇತರ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ​ ಐಎಎಸ್‌ ಅಧಿಕಾರಿ ನೇಮಕ…!

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ ) ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಿಂದ ತೀವ್ರ ಪೈಪೋಟಿ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್​​ನ ಕೆಲ ಶಾಸಕರಿಗೆ … Continued

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡಗಡೆ ಮಾಡಿದೆ. ಭೌತಿಕ ಅರ್ಜಿ ಸಲ್ಲಿಕೆ ಮಾಡುವುದರ ಬಗ್ಗೆ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ … Continued

ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು

ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued