ರಾಜ್ಯದ ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ, ಚುನಾವಣಾ ಆಯೋಗ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಜೂನ್ 30ರಂದು ಚುನಾವಣೆ ನಡೆಸಲಾಗುತ್ತಿದೆ. ಇಂದು, ಸೋಮವಾರ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಬಾಬುರಾವ್ ಚಿಂಚನಸೂರು, ಆರ್ ಶಂಕರ ಹಾಗೂ ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ … Continued

11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಇಂದು, ಸೋಮವಾರ ಅಧಿಸೂಚನೆ ಹೊರಡಿಸಿದೆ. 1990ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಕಪಿಲ ಮೋಹನ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಐಎಎಸ್ ಅಧಿಕಾರಿ ಉಮಾಶಂಕರ ಎಸ್.ಆರ್. ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ಮುನ್ಸೂಚನೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ (Rain) ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ … Continued

ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್ ಉಚಿತ, ವಾಣಿಜ್ಯ ಬಳಕೆಗೆ ಇಲ್ಲ : ಸಿಎಂ ಸಿದ್ಧರಾಮಯ್ಯ.

ಬೆಂಗಳೂರು: ರಾಜ್ಯಾದ್ಯಂತ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ 200 ಯುನಿಟ್​ ಒಳಗೆ ಬಳಸಿದರೆ ವಿದ್ಯುತ್‌ ಉಚಿತ. ಆದರೆ ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್​ ಬಳಸುವವರಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಪುಣ್ಯಸ್ಮರಣೆ ನಿಮಿತ್ತ ವಿಧಾನಸೌಧ ಆವರಣದಲ್ಲಿ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಮಂಗಳವಾರ … Continued

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಯಾವುದೇ ಪ್ರಸ್ತಾವ ಬಂದಿಲ್ಲ : ಕಾನೂನು ಸಚಿವ ಹೆಚ್.ಕೆ.ಪಾಟೀಲ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈವರೆಗೆ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಇಲಾಖೆಗೆ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು. ಬಜೆಟ್ ಅಧಿವೇಶನದ … Continued

ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್​ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್​

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಬಾಡಿಗೆದಾರರಿಗೂ ಉಚಿತವಾಗಿ 200 … Continued

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು … Continued

ಸರ್ಕಾರದ ‘ಉಚಿತ ವಿದ್ಯುತ್ʼ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ

ಬೆಂಗಳೂರು: ಐದು ಗ್ಯಾರಂಟಿಗಳಲ್ಲಿ ರಾಜ್ಯ ಸರ್ಕಾರ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಆದೇಶ ಹೊರಡಿಸಿದೆ. ಇಂದು ಸೋಮವಾರಾ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಸೋಮವಾರ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. 02-06-2023ರಂದು ನಡೆದ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿದೆ. ಗೃಹ … Continued

ಸಮಯಕ್ಕೆ ಸರಿಯಾಗಿ ಬಾರದ ಡಿಸಿಎಂ ಶಿವಕುಮಾರ: ಸಭೆಯಿಂದ ನಿರ್ಗಮಿಸಿದ ಐವರು ಬಿಜೆಪಿ ಶಾಸಕರು

ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಹಾಗೂ ಪ್ರವಾಹ ನಿರ್ವಹಣೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ಕರೆದಿದ್ದ ಸರ್ವ ಪಕ್ಷಗಳ ಸಭೆಯಿಂದ ಕೆಲ ಬಿಜೆಪಿ ಶಾಸಕರು ಹೊರನಡೆದಿದ್ದಾರೆ. ಸೋಮವಾರ 11 ಗಂಟೆಗೆ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಈ ಸಭೆಗೆ ಬಿಜೆಪಿ ಶಾಸಕರು ಆಗಮಿಸಿದ್ದರು, ಮಾಜಿ ಸಚಿವ ಅಶ್ವತ್ಥ ನಾರಾಯಣ, … Continued

ಜುಲೈ 7ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಬಜೆಟ್‌ ಅಧಿವೇಶನ ಬಗ್ಗೆ ಇನ್ನೂ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿಲ್ಲ. … Continued