ಭಟ್ಕಳ : ವೆಂಕಟಾಪುರ ಬಳಿ ಭೀಕರ ಕಾರು ಅಪಘಾತ ; ಇಬ್ಬರು ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪದ ವೆಂಕಟಾಪುರ ಬಳಿ ಶನಿವಾರ ತಡ ರಾತ್ರಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಕಾರು ಶಿರಾಲಿಯಿಂದ ಭಟ್ಕಳದ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಜೋರಾಗಿ … Continued

ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ ನಿಧನ

ಬೀದರ: ಕಲ್ಯಾಣ ಕರ್ನಾಟಕದ ಹಿರಿಯ ನಾಯಕ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.  ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಶುಕ್ರವಾರ ರಾತ್ರಿ … Continued

ಮಹಾರಾಷ್ಟ್ರದ ಪಾಲಿಕೆ ಚುನಾವಣೆ ; ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿಗೆ ಜಯ

ಜಲ್ನಾ: ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ ಅವರ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗಾರ್ಕರ್, ಮಹಾರಾಷ್ಟ್ರದ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಜಲ್ನಾ ನಗರ ಸಭೆಯ ವಾರ್ಡ್ ಸಂಖ್ಯೆ 13ರಲ್ಲಿ ಸ್ಪರ್ಧಿಸಿದ್ದ ಪಂಗಾರ್ಕರ್, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ರಾವಸಾಹೇಬ ಧೋಬ್ಲೆ ಅವರನ್ನು ಸೋಲಿಸಿದ್ದಾರೆ. ಪಂಗಾರ್ಕರ್ 2,661 … Continued

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಕಾರ್ಯಕ್ರಮದಲ್ಲಿ ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಕಪೇಟೆಯಲ್ಲಿರುವ ಬಳೇಪೇಟೆಯ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಬ್ಯಾನರ್ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ … Continued

ಕುಂದಗೋಳ ; ಅಪ್ರಾಪ್ತರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಹುಬ್ಬಳ್ಳಿ : ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. … Continued

ಬೀದರ : ಗಾಳಿಪಟದ ದಾರ ಕುತ್ತಿಗೆಗೆ ಸುತ್ತಿ ಬೈಕ್ ಸವಾರ ಸಾವು

ಬೀದರ: ಸಂಕ್ರಾಂತಿ ಸಂಭ್ರಮದ ನಡುವೆಯೇ ಗಾಳಿಪಟದ ದಾರ (ಮಾಂಜಾ) ಮತ್ತೊಂದು ಬಲಿ ಪಡೆದಿದೆ. ಕರ್ನಾಟಕದ ಬೀದರ ಜಿಲ್ಲೆಯಲ್ಲಿ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 48 ವರ್ಷದ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರು ಸಂಜುಕುಮಾರ ಹೊಸಮನಿ ಎಂದು ತಿಳಿದುಬಂದಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ, ಹುಮನಾಬಾದಿನಲ್ಲಿ ವಾಸವಾಗಿರುವ ತಮ್ಮ ಮಗಳನ್ನು ಕರೆದುಕೊಂಡು ಬರಲು ಅವರು ಬೈಕ್‌ನಲ್ಲಿ … Continued

ಕಾಂಗ್ರೆಸ್‌ ಮುಖಂಡನ ವಿರುದ್ಧ ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ ಆರೋಪ ; ಆಡಿಯೊ ವೈರಲ್‌

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಜೀವ ಗೌಡ ವಿರುದ್ಧ ನಗರಸಭೆ ಪೌರಾಯುಕ್ತೆಗೆ ಪ್ರಾಣ ಬೆದರಿಕೆ ಹಾಕಿರುವ ಕೇಳಿ ಬಂದಿದೆ. ಅವರು ಬೆದರಿಕೆ ಹಾಕಿದ್ದು ಎನ್ನಲಾದ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೊದಲ್ಲಿ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ … Continued

ಹೊನ್ನಾವರ : ಹೆಜ್ಜೇನು ದಾಳಿಗೆ ವ್ಯಕ್ತಿ ಸಾವು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಅನಿಲಗೋಡ ಶಾಲೆಯ‌ ಸಮೀಪ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹೊನ್ನಾವರ ತಾಲೂಕಿನ ಅನಿಲಗೋಡದ ನಿವಾಸಿ ಮಂಜುನಾಥ ಗಣಪ ಅಂಬಿಗ (53) ಎಂಬವರು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಲಸಕ್ಕೆಂದು ಬೇರಂಕಿಯ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಅನಿಲಗೋಡ ಜನತಾ ವಿದ್ಯಾಲಯದ ಹಿಂಭಾಗದಲ್ಲಿ … Continued

ವಾಯುಭಾರ ಕುಸಿತ : ಕೆಲವು ಜಿಲ್ಲೆಗಳಲ್ಲಿ ಚಳಿ ತೀವ್ರತೆ ಹೆಚ್ಚಳ ; ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಕೆಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ತಿಳಿಸಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ : ಕೋಡಿಮಠ ಶ್ರೀಗಳಿಂದ ಮತ್ತೆ ಭವಿಷ್ಯ

ರಾಯಚೂರು: ಮುಖ್ಯಮಂತ್ರಿ ಹುದ್ದೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವೆ ತಿಕ್ಕಾಟ ನಡೆಯುತ್ತಿರುವ ಬೆನ್ನಲ್ಲೇ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಸಂಬಂಧ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಸೋಮವಾರ ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಶ್ರೀಗಳು ಬಜೆಟ್‌ ವರೆಗೂ ಯಾವುದೇ … Continued