ಅಂಕೋಲಾ : ಬ್ಯಾಂಕ್‌ ದರೋಡೆಗೆ ಯತ್ನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆಸಲಾಗಿದೆ. ಬ್ಯಾಂಕಿನ ಹಿಂಬದಿಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗುವ ಪ್ರಯತ್ನ ಮಾಡಲಾಗಿದೆ. ಬ್ಯಾಂಕಿನ ಸ್ಟ್ರಾಂಗ್ ರೂಮ್ ಗೋಡೆಯನ್ನು ಸಹ ಒಡೆಯುವ ಪ್ರಯತ್ನ ನಡೆದಿದೆ. ಬ್ಯಾಂಕ್ ಆಫ್ ಬರೋಡಾದ ಸುಂಕಸಾಳ ಶಾಖೆ ರಾಷ್ಟ್ರೀಯ ಹೆದ್ದಾರಿ 63 … Continued

ಬೇಡ್ತಿ ಅಘನಾಶಿನಿ ನದಿ ತಿರುವು ಯೋಜನೆಗೆ ಉತ್ತರ ಕನ್ನಡ ಜಿಲ್ಲೆ ಜನಪ್ರತಿನಿಧಿಗಳ ಒಕ್ಕೊರಲ ವಿರೋಧ

 ಶಿರಸಿ: “ಉತ್ತರ ಕನ್ನಡ ಜಿಲ್ಲೆಗೆ ಬೇಡವಾದ ಹಾಗೂ ಪರಿಸರಕ್ಕೆ ಮಾರಕವಾಗುವ ಯಾವುದೇ ಯೋಜನೆಗೂ ನಮ್ಮ ಸಂಪೂರ್ಣ ವಿರೋಧವಿದೆ.ಜಿಲ್ಲೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಯೋಜನೆಗಳನ್ನು ಒಗ್ಗಟ್ಟಿನಿಂದ ವಿರೋಧಿಸಬೇಕು. ಈ ಯೋಜನೆಗಳನ್ನು ಕೈಬಿಡಬೇಕು ಎಂಬುದು ನಮ್ಮ ಆಗ್ರಹ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ನಗರದ ಎಂ.ಇ.ಎಸ್. ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು : ಸ್ವರ್ಣವಲ್ಲೀ ಶ್ರೀಗಳು

ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದಲ್ಲಿ ಹರಿಯುವ ಬೇಡ್ತಿ ಮತ್ತು ಅಘನಾಶಿನಿ ನದಿಗಳ ತಿರುವು ಯೋಜನೆ ಸಂಪೂರ್ಣ ಅವೈಜ್ಞಾನಿಕ ಮತ್ತು ಅತಾರ್ಕಿಕವಾಗಿದೆ. ಪಶ್ಚಿಮ ಘಟ್ಟಕ್ಕೆ ಹಾಗೂ ಇಲ್ಲಿನ ಜನಜೀವನಕ್ಕೆ ಶಾಶ್ವತ ಹಾನಿ ಮಾಡುವ ಇಂತಹ ಯೋಜನೆಗಳನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಯೋಜನೆ ಸಂಪೂರ್ಣವಿನಾಶಕಾರಿಯಾಗಿದ್ದರಿಂದ ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು ಎಂದು ಸೋಂದಾ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ : ಶಿರಸಿ ಸಮಾವೇಶದ 10 ನಿರ್ಣಯಗಳು…

ಶಿರಸಿ: ಪಶ್ಚಿಮ ಘಟ್ಟದ ಜೀವನಾಡಿಗಳಾದ ಬೇಡ್ತಿ, ಅಘನಾಶಿನಿ ಮತ್ತು ಶರಾವತಿ ಕಣಿವೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿಹತ್ತು ಪ್ರಮುಖ ನಿರ್ಣಯಗಳನ್ನು ಒಮ್ಮತದಿಂದ ಅಂಗೀಕರಿಸಿದೆ. * ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಹಾಗೂ ಶರಾವತಿ ಪಂಪ್ ಸ್ಟೋರೇಜ್ ಸೇರಿದಂತೆ ಯಾವುದೇ ಬೃಹತ್ ಜಲವಿದ್ಯುತ್ ಯೋಜನೆಗಳನ್ನು ಜಾರಿಗೊಳಿಸಬಾರದು. ಈ ಸಂದರ್ಭದಲ್ಲಿ ಎತ್ತಿನಹೊಳೆ ನದಿ ತಿರುವು ಯೋಜನೆಯ ವಿಫಲತೆಯನ್ನು … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಜನರು ಚುನಾವಣೆ ಬಹಿಷ್ಕರಿಸುವ ಕಾಲವೂ ಬರಬಹುದು- ಸರ್ಕಾರಕ್ಕೆ ಸ್ವರ್ಣವಲ್ಲೀ ಶ್ರೀಗಳ ಎಚ್ಚರಿಕೆ

ಶಿರಸಿ: ನದಿಗಳ ರಕ್ಷಣೆಯ ಈ ಹೋರಾಟದಲ್ಲಿ ಉತ್ತರ ಜಿಲ್ಲೆಯ ಜನರಲ್ಲಿ ಒಗ್ಗಟ್ಟು ಅನಿವಾರ್ಯ. ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸದಿದ್ದರೆ, ಅವೈಜ್ಞಾನಿಕವಾಗಿ ಜಾರಿಗೆ ತರಲು ಉದ್ದೇಶಿಸಿರುವ ಅಘನಾಶಿನಿ ಮತ್ತು ಬೇಡ್ತಿ ನದಿ ತಿರುವು ಯೋಜನೆಯನ್ನು ಕೈಬಿಡದಿದ್ದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ. ಒಂದು ವೇಳೆ ರಾಜಕಾರಣಿಗಳು ಪಕ್ಷಾತೀತವಾಗಿ ಸಂಘಟಿತರಾಗದಿದ್ದರೆ, ಮುಂಬರುವ ದಿನಗಳಲ್ಲಿ ಸಾಮೂಹಿಕವಾಗಿ ಚುನಾವಣೆಗಳನ್ನು ಬಹಿಷ್ಕರಿಸುವ ಕಾಲ ಬರಬಹುದು ಎಂದು … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜೋರಾದ ಚಳಿ ; ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಶೀತಗಾಳಿ (Cold Wave) ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನ ಹಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 6 ಡಿಗ್ರಿ ಸೆಲ್ಸಿಯಸ್‌ವರೆಗೆ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ ವಿಜಯಪುರ … Continued

‘ಡ್ಯಾಡಿ ಈಸ್ ಬ್ಯಾಕ್’: ಸಿದ್ದರಾಮಯ್ಯ, ಡಿಕೆಶಿ, ಎಚ್.ಡಿ. ಕುಮಾರಸ್ವಾಮಿಯ ಎಐ ವೀಡಿಯೊ ವೈರಲ್…!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕೃತಕ ಬುದ್ಧಿಮತ್ತೆ (AI) ಸೃಜಿತ ವೀಡಿಯೊವೊಂದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಎಐ ಅವತಾರಗಳನ್ನು ಒಳಗೊಂಡ ಈ ವೀಡಿಯೊ ಸದ್ಯ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಟ್ವಿಟರ್‌ನಲ್ಲಿ (X) ಫ್ಯಾನ್‌ … Continued

ನದಿಗಳು ನಮ್ಮ ಜೀವ ವಿಮೆ : ನದಿ ಜೋಡಣೆ ಹೆಸರಿನಲ್ಲಿ ಇವನ್ನು ಒತ್ತೆ ಇಡಲು ಬಿಡೆವು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಥಳೀಯ ಜನರ ವಿರುದ್ಧ ನಡೆಯಲು ಸಂವಿಧಾನದಲ್ಲಿ ಅವಕಾಶವಿಲ್ಲದಿದ್ದರೂ ಶತಾಯಗತಾಯ ಬೇಡ್ತಿ–ವರದಾ ನದಿಜೋಡಣೆ ಹಾಗೂ ಅಘನಾಶಿನೀ–ವೇದಾವತೀ ನದಿ ಜೋಡಣೆಗೆ ಕಂಕಣ ತೊಟ್ಟವರಂತೆಯೇ ಮುನ್ನುಗ್ಗುತ್ತಿರುವುದನ್ನು ತಡೆಯುವ ಹೋರಾಟಕ್ಕೆ ಸರ್ವ ಪ್ರಯತ್ನವನ್ನೂ ಮಾಡುವುದು ಅತ್ಯವಶ್ಯಕವಾದ ಕಾರ್ಯವಾಗಬೇಕಾಗಿದೆ. ಅದರ ತೀರ್ಮಾನ ಜನವರಿ 11ರಂದು ನಡೆಯಲಿರುವ ಬೃಹತ್ ಸಮಾವೇಶ.   ನದಿಯ ಹರಿವು ಮೇಲ್ನೋಟಕ್ಕೆ ಕಾಣುವುದೆಷ್ಟೋ ಅದರ … Continued

ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಕೆಲವೇ ದಿನಗಳಲ್ಲಿ ಪ್ರಕರಣದ … Continued

ಬೇಡ್ತಿ-ಅಘನಾಶಿನಿ ನದಿ ಜೋಡಣೆ ಯೋಜನೆಗೆ ವಿರೋಧ ; ಸ್ವರ್ಣವಲ್ಲೀ ಶ್ರೀಗಳ ನೇತೃತ್ವದ ಹೋರಾಟಕ್ಕೆ ಸಂಪೂರ್ಣ ಬೆಂಬಲ ; ಶಾಸಕ ಭೀಮಣ್ಣ ನಾಯ್ಕ

ಶಿರಸಿ : ಬೇಡ್ತಿ ಹಾಗೂ ಅಘನಾಶಿನಿ ನದಿ ಜೋಡಣೆ ಯೋಜನೆಯನ್ನು ಸಾರ್ವಜನಿಕರೊಂದಿಗೆ ನಾವು ಒಕ್ಕೊರಲಿನಿಂದ ವಿರೋಧಿಸುತ್ತಿದ್ದೇವೆ. ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿನ‌ ಸಮಾವೇಶವನ್ನು ನಾವು ಬೆಂಬಲಿಸುತ್ತೇನೆ. ಸರ್ಕಾರ ಈ ಯೋಜನೆ ಕೈಬಿಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಒತ್ತಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಮಾತನಾಡಿದ ಅವರು, ಬೇಡ್ತಿ – ವರದಾ ಹಾಗೂ ಅಘನಾಶಿನಿ – … Continued