ಕೆರೆಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾದ ಘಟನೆ ಯಾದಗಿರಿ ನಗರದಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕರನ್ನು ನಕುಲ್(12) ಮತ್ತು ನಿಹಾಲ್ ಸಿಂಗ್​(12) ಎಂದು ಗುರುತಿಸಲಾಗಿದೆ. ಯಾದಗಿರಿ ನಗರದ ಅಮರ್ ಲೇಔಟ್​ನಲ್ಲಿ ನಾಲ್ವರು ಬಾಲಕರು ಕಟ್ಟೆ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಈ ವೇಳೆ ನಕುಲ್​ … Continued

ಬಸ್‌-ಕಾರಿನ​ ನಡುವೆ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸಾವು

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಹಾಸನ – ಬೇಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಆಲ್ಟೊ ಕಾರು ನಡುವೆ ಡಿಕ್ಕಿ ಸಂಭವಿಸಿ ಐವರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತಪರನ್ನು ವಿದ್ಯಾರ್ಥಿಗಳಾದ ಅಕ್ಮಲ್(18), ಜಿಲಾನಿ(19), ತೋಹಿದ್(18), ಕೈಫ್ (18) ಎಂಬವರು ಸ್ಥಳದಲ್ಲೇ ಮೃತಪಟ್ಟರೆ, ರಿಹಾನ್ (19) ಆಸ್ಪತ್ರೆಗೆ ಸಾಗಿಸುವಾಗ … Continued

ಶ್ರೀಪಾದ ಭಟ್ಟರಿಗೆ ಅಭಿನಯ ಭಾರತಿ ರಂಗ ಪ್ರಶಸ್ತಿ

ಹುಬ್ಬಳ್ಳಿ: ನಾಡಿನ ಹೆಸರಾಂತ ರಂಗಕರ್ಮಿ, ನಿರ್ದೇಶಕ ಡಾ. ಶ್ರೀಪಾದ ಭಟ್ಟ ಅವರಿಗೆ ಪ್ರಸಕ್ತ ಸಾಲಿನ  ಧಾರವಾಡದ ಅಭಿನಯ ಭಾರತಿ ರಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಧಾರವಾಡ ರಂಗಾಯಣದ ಸಹಯೋಗದೊಂದಿಗೆ ಸಂಸ್ಕೃತಿ ಸಮುಚ್ಚಯ ಭವನದಲ್ಲಿ ಮಾರ್ಚ್ 27ರಂದು ಬೆಳಿಗ್ಗೆ10:30 ಗಂಟೆಗೆ ಪ್ರದಾನ ಮಾಡಲಾಗುತ್ತದೆ. ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ಶ್ರೀಪಾದ‌ ಭಟ್ಟರು ನಂತರ ಸ್ವಯಂ ನಿವೃತ್ತಿ ಪಡೆದು ಪೂರ್ಣಾವಧಿ … Continued

ಎಸಿಬಿ ದಾಳಿ ವೇಳೆ ಬಿಡಿಎ ಮಧ್ಯವರ್ತಿ ಮನೆಯಲ್ಲಿ 4.5 ಕೆಜಿ ಚಿನ್ನ ಪತ್ತೆ..!

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಲಂಚ ಮತ್ತು ಪ್ರಭಾವ ಬೀರಿ ಸರ್ಕಾರಿ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪದ ಮೇಲೆ ಒಂಬತ್ತು ಮಂದಿ ಖಾಸಗಿ ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶೋಧ ನಡೆಸುತ್ತಿದೆ. ಮೋಹನ್ ವಿರುದ್ಧ ಭ್ರಷ್ಟಾಚಾರ, ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ಆರ್.ಟಿ.ನಗರದ ಮನೋರಾಯನಪಾಳ್ಯದಲ್ಲಿರುವ ಅವರ ಮನೆ … Continued

ಪುನೀತ ರಾಜಕುಮಾರಗೆ ಮೈಸೂರು ವಿವಿಯಿಂದ ಮರಣೋತ್ತರ ಡಾಕ್ಟರೇಟ್ ಪ್ರದಾನ

ಮೈಸೂರು ವಿ.ವಿ ಘಟಿಕೋತ್ಸವ: ಪುನೀತ್‌ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್‌ ಪ್ರದಾನ ಮೈಸೂರು: ವಿಜ್ಞಾನಿ ‌ಡಾ.ವಿ.ಕೆ.ಆತ್ರೆ, ನಟ ಪುನೀತ್‌ ರಾಜ್‌ಕುಮಾರ್‌ (ಮರಣೋತ್ತರ) ಹಾಗೂ ಜಾನಪದ ಕಲಾವಿದ ಎಂ.ಮಹಾದೇವಸ್ವಾಮಿ ಅವರಿಗೆ ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು. ಮಂಗಳವಾರ ಕ್ರಾಫರ್ಡ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಪ್ರದಾನ ಮಾಡಿದರು. ಪುನೀತ್‌ ಪರವಾಗಿ … Continued

ಮಾತು ಬಾರದ, ಕಿವಿ ಕೇಳದ ಯುವಕನ ವರಿಸಿದ ಪದವೀಧರ ಯುವತಿ

ನರಗುಂದ (ಗದಗ): ಕಂಕಣ ಬಲ ಕೂಡಿಬಂದರೆ ಯಾರೂ ತಡೆಯಲು ಸಾಧ್ಯವಿಲ್ಲ ಎಂಬಂತೆ ಪಟ್ಟಣದಲ್ಲಿ ಸೋಮವಾರ ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿಯೊಬ್ಬರು ವರಿಸಿದ್ದಾರೆ. ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್‌ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಸುಮಯ್ಯಾ ಭಾನುವಾರ … Continued

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ: ಕರಾವಳಿ, ಮಲೆನಾಡಲ್ಲಿ ಹೈ ಅಲರ್ಟ್‌..!

ಬೆಂಗಳೂರು: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್‌ 24ರ ವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ … Continued

ಬೆಂಗಳೂರಲ್ಲಿ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂಶ ನೇತೃತ್ವದಲ್ಲಿ 100ಕ್ಕೂ … Continued

ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ವಿರುದ್ಧದ ನಿರ್ಣಯ ಕಾನೂನುಬಾಹಿರ: ಸಿಎಂ ಬೊಮ್ಮಾಯಿ

ಬೆಂಗಳೂರು: ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಂಡಿರುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಕಸಿದುಕೊಳ್ಳುವ ಇದು ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯ ಕಾನೂನು ಬಾಹಿರವಾಗಿದೆ ಎಂದು ಹೇಳಿದ್ದಾರೆ. ತಮಿಳುನಾಡು … Continued

ಉಕ್ರೇನ್‌ನಿಂದ ಮರಳಿದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ ಉಚಿತ ಅವಕಾಶ: ಡಾ.ಕೆ.ಸುಧಾಕರ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಿಂದ ಕರ್ನಾಟಕಕ್ಕೆ ವಾಪಸ್ ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ಸಮಾಲೋಚನೆ ನಡೆಸಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ವಿಚಾರವಾಗಿ ಚರ್ಚೆ … Continued