ಕರಡಿ ದಾಳಿ: ಮನೆಯ ಮುಂದೆ ಮಲಗಿದ್ದ ವ್ಯಕ್ತಿಗೆ ಗಂಭೀರ ಗಾಯ

ಮಧುಗಿರಿ: ಕರಡಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಐ ಡಿ ಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಮನೆಯ ಮುಂದೆ ಮಲಗಿದ್ದ ಮಲೇರಂಗಪ್ಪ (56) ಮೇಲೆ ಕರಡಿ ದಾಳಿ ನಡೆಸಿದೆ. ಕರಡಿ ದಾಳಿಯಿಂದ ಮಲೇರಂಗಪ್ಪ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ … Continued

ಎಮ್ಮೆ ಮೈ ತೊಳೆಸಲು ಹೋಗಿ ಕೆರೆಯಲ್ಲಿ ಮುಳುಗಿ ಸಾವು

ತುಮಕೂರು: ಎಮ್ಮೆಗಳಿಗೆ ಮೈತೊಳೆಯಲು ಹೋಗಿ ಕೆರೆಗೆ ಬಿದ್ದು ಸಹೋದರರಿಬ್ಬರು ಮೃತಪಟ್ಟ ಘಟನೆ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಎಂ.ದಾಸರಹಳ್ಳಿ ಗ್ರಾಮದ ಗಂಗರಾಜು (27) ಹಾಗೂ ಹನುಮಂತರಾಜು (21) ಮದಲೂರು ಚಿಕ್ಕ ಕೆರೆಯಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟ ಸಹೋದರರು. ಎಮ್ಮೆಗಳಿಗೆ ಮೈತೊಳೆಯಲು ಹೋದಾಗ ಹನುಮಂತರಾಜು ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. … Continued

1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ:ಫೆ.28ರಿಂದ ಪ್ರವೇಶ ಪತ್ರ ಲಭ್ಯ

ಬೆಂಗಳೂರು: ರಾಜ್ಯದಲ್ಲಿ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ … Continued

ರಾಮನಗರದಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಇಂದಿನಿಂದ ಪುನರಾರಂಭ

ರಾಮನಗರ: ಐದು ದಿನಗಳ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ ಇಂದು, ಭಾನುವಾರದಿಂದ, ರಾಮನಗರದಲ್ಲಿ ಆರಂಭಗೊಂಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲಾ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಮುಖಂಡರಾದ ಎಚ್.ಕೆ. ಪಾಟೀಲ, ಎಂ.ಬಿ … Continued

ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ: ಯಡಿಯೂರಪ್ಪ

ಬೆಂಗಳೂರು: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಸಾಮೂಹಿಕ ಪ್ರಯತ್ನದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು. ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮ ಜನ್ಮದಿನದ ಸಂಭ್ರಮಾಚರಣೆ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿಕಾರ ಇಲ್ಲದೆ ಇದ್ದರೂ ಸಹ ಸಾವಿರಾರು ಜ‌ನ ಬಂದು ಆಶೀರ್ವಾದ ಮಾಡಿದ್ದಾರೆ. … Continued

ಬಚ್ಚಲು ಮನೆಯಲ್ಲಿದ್ದ 13 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ..ವೀಕ್ಷಿಸಿ

ಮಂಗಳೂರು: ಮಂಗಳೂರಿನ ಮನೆಯೊಂದರಿಂದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ. ಮಂಗಳೂರು ಹೊರವಲಯ ಉಳಾಯಿಬೆಟ್ಟಿನಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಅವರು ತಕ್ಷಣವೇ ಸ್ನೇಕ್ ಅಶೋಕ್ ಅವರನ್ನು ಸಂಪರ್ಕಿಸಿದ್ದಾರೆ. ಸ್ನೇಕ್‌ ಸುರೇಶ ಅವರು ಕಾಳಿಂಗ ಹಾವನ್ನು ಹಿಡಿದು ಪಿಲಿಕುಲ ನಿಸರ್ಗಧಾಮಕ್ಕೆ ಒಯ್ದಿದ್ದಾರೆ. ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. … Continued

ಕರ್ನಾಟಕದಲ್ಲಿ ಹೊಸದಾಗಿ 514 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಶನಿವಾರ ಹೊಸದಾಗಿ 514 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದಾರೆ ಹಾಗೂ ರಾಜ್ಯದಲ್ಲಿ 6,940 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 345 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ … Continued

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಈ ಮೊದಲಿನಂತೆ ಎಲ್ಲ ಮಾರ್ಗಗಳ ಬಸ್‌ ಸಂಚಾರ ಆರಂಭ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಮೊದಲಿನಂತೆ ಎಲ್ಲ ಮಾರ್ಗಗಳನ್ನು ಪುನಃ ಪ್ರಾರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ವಿಜಯಪುರ ಮಾರ್ಗದಲ್ಲಿ ಪ್ರಯಾಣಿಕರ ಬಹುದಿನದ … Continued

ಯೂ ಟ್ಯೂಬ್‌ನಲ್ಲಿ ಹಿಜಾಬ್ ವಿಚಾರಣೆ ವೀಕ್ಷಿಸಿದ 33.5 ಲಕ್ಷ ಜನ: ಹೊಸ ದಾಖಲೆ ಬರೆದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಹಿಜಾಬ್‌ ಕುರಿತಾದ ಪ್ರಕರಣದ 11 ದಿನಗಳ ಕಲಾಪವನ್ನು ನ್ಯಾಯಾಲಯದ ಅಧಿಕೃತ ಯು ಟ್ಯೂಬ್ ಚಾನಲ್‍ನಲ್ಲಿ ಬರೋಬ್ಬರಿ 33.5 ಲಕ್ಷ ಮಂದಿ ವೀಕ್ಷಿಸಿದ್ದು, ಇದು ಭಾರತ ನ್ಯಾಯಾಂಗ ಇತಿಹಾಸದಲ್ಲಿ ಹೊಸ ದಾಖಲೆಯಾಗಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿದ 11 ದಿನಗಳ‌ ಕಲಾಪವನ್ನು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಶ್ವದ … Continued