ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ಕನ್ನಡಿಗರನ್ನು ಕರೆತರಲು ಸತತ ಪ್ರಯತ್ನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ಇನ್ನೂರಕ್ಕೂ ಹೆಚ್ಚು ಜನರು ಬಂಕರ್‌ಗಳಲ್ಲಿ ಆಶ್ರಯ ಪಡಿದಿದ್ದು, ಅವರನ್ನು ಸುರಕ್ಷಿತವಾಗಿ ಮರಳಿ ಕರೆತರುವ ಕಾರ್ಯ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಉಕ್ರೇನ್‌ನಿಂದ ಮರಳಿ ತಾಯ್ನಾಡಿಗೆ ಆಗಮಿಸಿದ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿಯನ್ನು ಸ್ವಾಗತಿಸಿದ ನಂತರ ಮಾಧ್ಯಮದವರೊಂದಿಗೆ … Continued

ಶಿವಮೊಗ್ಗ: ಹರ್ಷ ಮನೆಗೆ ಯಡಿಯೂರಪ್ಪ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಸರ್ಕಾರದಿಂದ 25 ಲಕ್ಷ ರೂ. ಚೆಕ್‌ ವಿತರಣೆ

ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ, ರಾಜ್ಯ ಸರ್ಕಾರದ ಪರವಾಗಿ ಹರ್ಷ ಕುಟುಂಬಕ್ಕೆ ಪರಿಹಾರ ಚೆಕ್ ನೀಡಿದರು. ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸ ಇಂದು, ಭಾನುವಾರ ಭೇಟಿ ನೀಡಿದ ಯಡಿಯೂರಪ್ಪನವರು ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಸರ್ಕಾರದಿಂದ 25 … Continued

ಬಸವಣ್ಣನ ಮೂರ್ತಿ ಹಾಲು ಕುಡಿದ ವದಂತಿ: ದೇಗುಲಕ್ಕೆ ರಾತ್ರಿಯೇ ತಂಡೋಪತಂಡವಾಗಿ ಆಗಮಿಸಿದ ಜನ..!

ಬಾಗಲಕೋಟೆ: ಬಸವಣ್ಣನ ಮೂರ್ತಿ ಹಾಲು ಕುಡಿಯುತ್ತಿದೆ ಎಂಬ ವದಂತಿ ರಾತ್ರೋರಾತ್ರಿ ಹರಡಿ, ತಂಡೋಪ ತಂಡವಾಗಿ ಜನರು ದೇವಸ್ಥಾನದ ಕಡೆ ಆಗಮಿಸಿದ ಘಟನೆ ಜಿಲ್ಲೆಯ ಗುಳೇದಗುಡ್ಡ ಪಟಣ್ಣದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಿನ್ನೆ ರಾತ್ರಿ ಜನರು ಬಸಪ್ಪನ ಪವಾಡ ನೋಡಬೇಕು ಎಂದು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.ಗುಳೇದಗುಡ್ಡದ ಅರಳಿಕಟ್ಟಿ ಬಸವಣ್ಣನ ದೇಗುಲದಲ್ಲಿ ಈ ಘಟನೆ ನಡೆದಿದೆ. ಪಟ್ಟಣದ ಅರಳಿಕಟ್ಟೆ … Continued

ಉಕ್ರೇನ್‌ನಿಂದ ಕರ್ನಾಟಕದ 372 ವಿದ್ಯಾರ್ಥಿಗಳು ವಾಪಸ್‌

ಬೆಂಗಳೂರು : ಉಕ್ರೇನ್‌ನಿಂದ ಈವರೆಗೆ ಕರ್ನಾಟಕಕ್ಕೆ ಈವರೆಗೆ 372 ವಿದ್ಯಾರ್ಥಿಗಳು ಹಿಂತಿರುಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್‌ ರಾಜನ್‌ ತಿಳಿಸಿದ್ದಾರೆ. ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, 300ಕ್ಕೂ ಹೆಚ್ಚು ಜನರು ಆಗಮಿಸುವುದು ಬಾಕಿ ಇದೆ. ಶನಿವಾರ 84 ವಿದ್ಯಾರ್ಥಿಗಳು ಆಗಮಿಸಿದ್ದಾರೆ. ವಾಪಸ್‌ ಬಂದವರಿಗೆ ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ … Continued

ರಾಜ್ಯದ ಸಚಿವರು, ಶಾಸಕರ ವೇತನ-ಭತ್ಯೆ ಹೆಚ್ಚಿಸುವ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಮುಖ್ಯಮಂತ್ರಿ, ಸಚಿವರು, ವಿಧಾನ ಸಭಾಧ್ಯಕ್ಷರು, ವಿಧಾನ ಪರಿಷತ್ ಸಭಾಪತಿ, ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ಸಂಬಳ ಮತ್ತು ಭತ್ಯೆ ಹೆಚ್ಚಿಸುವ ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕಳೆದ ತಿಂಗಳು ನಡೆದ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಸಚಿವರು, ಶಾಸಕರ ಸಂಬಳ ಮತ್ತು ಭತ್ಯೆ, ನಿವೃತ್ತಿ ವೇತನವನ್ನು ಶೇ. ೫೦ ರಷ್ಟು ಹೆಚ್ಚಳ ಮಾಡುವ … Continued

ಮಾರ್ಚ್‌ 10ರಂದು ವಿಟಿಯು 21ನೇ ಘಟಿಕೋತ್ಸವ: 16 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಬುಷ್ರಾ ಮತೀನ್‌, ಮೂವರಿಗೆ ಗೌರವ ಡಾಕ್ಟರೇಟ್‌ ಪ್ರದಾನ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21 ನೇ ಘಟಿಕೋತ್ಸವವನ್ನು ಗುರುವಾರ, ಮಾರ್ಚ್‌ 10ರಂದು ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ. ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ ಮಾಡಲಾಗುವುದು ಮತ್ತು ವಿವಿಧ ಜಿಲ್ಲೆಗಳ ಒಟ್ಟು 334 ವಿದ್ಯಾರ್ಥಿಗಳು ರ್ಯಾಂಕ ಪಡೆದಿದ್ದು, ಅದರಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಚಿನ್ನದ ಪದಕ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು, ಸಕ್ರಿಯ ಪ್ರಕರಣಗಳು ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ … Continued

ಉಕ್ರೇನ್‌ನಲ್ಲಿ ಸಾವಿಗೀಡಾದ ನವೀನ್ ಮನೆಗೆ ಸಿಎಂ ಭೇಟಿ, ಸಾಂತ್ವನ: ಪರಿಹಾರ ಚೆಕ್‌ ವಿತರಣೆ

ಹಾವೇರಿ: ಯುದ್ಧಪೀಡಿತ ಉಕ್ರೇನ್​ನಲ್ಲಿ ರಷ್ಯಾ ಪಡೆ ನಡೆಸಿದ ಶೆಲ್​ ದಾಳಿಯಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನವೀನಗೆ ಸಲ್ಲಿಸಿದ ಬೊಮ್ಮಾಯಿ, ಮೃತನ ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮೀ ಹಾಗೂ ಸಹೋದರನಿಗೆ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ … Continued

ಮೇಕೆದಾಟು ಯೋಜನೆ: ಕರ್ನಾಟಕ-ತಮಿಳುನಾಡು ಮಾತುಕತೆಗೆ ಆಸಕ್ತಿ ತೋರಿದರೆ ಮಧ್ಯಸ್ಥಿಕೆಗೆ ಕೇಂದ್ರ ಸಿದ್ಧ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ಮಾತುಕತೆಗೆ ಆಸಕ್ತಿ ವ್ಯಕ್ತಪಡಿಸಿದರೆ ಕೇಂದ್ರ ಮಧ್ಯಪ್ರವೇಶಕ್ಕೆ ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿ ಈ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ … Continued

ಅಂತಾರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ : ಸಿಎಂ ಬೊಮ್ಮಾಯಿ ಪ್ರತಿಪಾದನೆ

ಬೆಂಗಳೂರು: ರಾಜ್ಯಗಳ ಜಲ ವಿವಾದಗಳಿಗೆ ಅಂತ್ಯ ಹಾಡಲು ಅಂತಾರಾಜ್ಯ ಜಲವಿವಾದ ಕಾಯ್ದೆಗೆ ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜಲ ವಿವಾದಗಳಿಗೆ … Continued