ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ನೇಮಕ ಆದೇಶಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದ ಎಂ.ಜಿ. ಹಿರೇಮಠ ಅವರನ್ನು ಕರ್ನಾಟಕ … Continued

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಎಸ್.ಆರ್ ಶ್ರೀನಿವಾಸ

ಬೆಂಗಳೂರು : ತುಮಕೂರು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು, ಗುರುವಾರ ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ‍್ಧರಾಮಯ್ಯ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ನನ್ನನ್ನು ಕತ್ತು ಹಿಡಿದು ಪಕ್ಷದಿಂದ ಹೊರಹಾಕಿದರು. ಸ್ವಾಭಿಮಾನಕ್ಕೆ ಧಕ್ಕೆ … Continued

ಪರೀಕ್ಷೆ ಮುನ್ನಾ ದಿನ ನದಿಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶವ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟುಶನ್‌ಗೆ ತೆರಳಿದ್ದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬನ ಶಬವ ನದಿಯಲ್ಲಿ ಪತ್ತೆಯಾದ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಗುಂಡಿಮಜಲು ಗ್ರಾಮದಲ್ಲಿ ನಡೆದ ವರದಿಯಾಗಿದೆ 10ನೇ ತರಗತಿಯ ಪರೀಕ್ಷೆಗಳು ಶುಕ್ರವಾರದಿಂದ (ಮಾರ್ಚ್ 31) ಪ್ರಾರಂಭವಾಗಲಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ, 15 ವರ್ಷದ ಅದ್ವೈತ್ ಶೆಟ್ಟಿ ಪರೀಕ್ಷೆಯ ಒತ್ತಡದಿಂದಾಗಿ … Continued

ಕರ್ನಾಟಕ, ತಮಿಳುನಾಡು ವಿರೋಧದ ನಂತರ ಎಫ್‌ಎಸ್‌ಎಸ್‌ಎಐ ಯೂಟರ್ನ್‌ : ಮೊಸರಿನ ಬದಲು ʼದಹಿʼ ಎಂದು ಪ್ರಿಂಟ್‌ ಮಾಡುವ ಆದೇಶ ಹಿಂದಕ್ಕೆ

ನವದೆಹಲಿ: ಮೊಸರು ಪ್ಯಾಕೆಟ್‌ಗಳನ್ನು ಹಿಂದಿಯಲ್ಲಿ “ದಹಿ” ಎಂದು ಪ್ರಿಂಟ್‌ ಮಾಡುವಂತೆ ಭಾರತದ ಆಹಾರ ಸುರಕ್ಷತಾ ಪ್ರಾಧಿಕಾರದ ನಿರ್ದೇಶನವನ್ನು ಗುರುವಾರ ಬದಲಾಯಿಸಲಾಗಿದೆ. ಇದು ಹಿಂದಿಯೇತರರ ಮೇಲೆ ಹಿಂದಿಯನ್ನು ಹೇರುವ ಪ್ರಯತ್ನ ಎಂದು ದಕ್ಷಿಣ ರಾಜ್ಯಗಳಲ್ಲಿ ವಿರೋಧ ವ್ಯಕತವಾದ ಬೆನ್ನಲ್ಲೇ ನಿರ್ದೇಶನವನ್ನು ಹಿಂಪಡೆಯಲಾಗಿದೆ. ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಇಂಗ್ಲಿಷ್‌ನ ಕರ್ಡ್‌ ಜೊತೆಗೆ ದಹಿ, … Continued

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವನರ್ತಕ

ಮಂಗಳೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಗುರುವಾರ ಮುಂಜಾನೆ ಕಡಬ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಎಡಮಂಗಲ ಸಮೀಪದ ಇಡ್ಯಡ್ಕ ಎಂಬಲ್ಲಿ ನಡೆದಿದೆ ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. … Continued

ಚುನಾವಣಾ ಅಕ್ರಮ: ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆಯನ್ನು ಹೈಕೋರ್ಟ್‌ ಅನೂರ್ಜಿತಗೊಳಿಸಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶ ನೀಡಬೇಕು ಎಂಬ ಗೌರಿಶಂಕರ ಅವರ ಮಧ್ಯಂತರ ಮನವಿಯನ್ನು ಇದೇ ವೇಳೆ ಪುರಸ್ಕರಿಸಿದ ಹೈಕೋರ್ಟ್‌ ಆದೇಶವನ್ನು ಒಂದು ತಿಂಗಳ ವರೆಗೆ ಅಮಾನತಿನಲ್ಲಿರಿಸಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಹಿರಿಯ ನಟ ಶರತ್ ಬಾಬು ಆಸ್ಪತ್ರೆಗೆ ದಾಖಲು

ಬಹುಭಾಷಾ ನಟ ಶರತ್ ಬಾಬು (71) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಕುರಿತು ತೆಲುಗು ನಟಿ ಕರಾಟೆ ಕಲ್ಯಾಣಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಶೇರ್​​ ಮಾಡಿಕೊಂಡಿದ್ದಾರೆ. ಸದ್ಯ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯದ ಬಗ್ಗೆ … Continued

‌ ಬಳ್ಳಾರಿ ಮೇಯರ್ ಆಗಿ ತ್ರಿವೇಣಿ ಆಯ್ಕೆ : ಇವರು ರಾಜ್ಯದ ಅತ್ಯಂತ ಕಿರಿಯ ಮೇಯರ್

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ 23 ವರ್ಷದ ವರ್ಷದ ಡಿ.ತ್ರಿವೇಣಿ ಅವರು ಆಯ್ಕೆಯಾಗಿದ್ದು ಅವರು ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉಪ ಮೇಯರ್ ಆಗಿ ಬಿ‌.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪಮೇಯರ್‌ ಆಯ್ಕೆಗೆ ಇಂದು, ಬುಧವಾರ ಚುನಾವಣೆ ನಡೆಯಿತು‌. … Continued

ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು-ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ..ಇದರ ಪ್ರಕ್ರಿಯೆ ಹೇಗೆ..?

 ಬೆಂಗಳೂರು: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆರಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ನಡೆದಾಡಲು ಆಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ … Continued

ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಭಾರತ ಚುನಾವಣಾ ಆಯೋಗವು ಇಂದು, ಬುಧವಾರ (ಮಾರ್ಚ್​ 29) ಬೆಳಿಗ್ಗೆ 11:30ಕ್ಕೆ ನವದೆಹಲಿಯ ವಿಜ್ಞಾನ ಭವನದ ಪ್ಲೆನರಿ ಹಾಲ್‌ನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಈ ಉದ್ದೇಶಕ್ಕಾಗಿ ಚುನಾವಣಾ ಸಮಿತಿಯು ನವದೆಹಲಿಯಲ್ಲಿ ಬೆಳಿಗ್ಗೆ 11:30ಕ್ಕೆ ಪತ್ರಿಕಾಗೋಷ್ಠಿಯನ್ನು ಕರೆದಿದೆ. ಕರ್ನಾಟಕವು ಬೆಂಗಳೂರು, ಮಧ್ಯ ಕರ್ನಾಟಕ, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ (ಹೈಕ), ಮುಂಬೈ-ಕರ್ನಾಟಕ ಮತ್ತು … Continued