ಜಿಯೋ ಫೈಬರಿನಿಂದ ಹೊಸ ಬ್ರಾಡ್‌ಬ್ಯಾಂಡ್ ಬ್ಯಾಕ್-ಅಪ್ ಪ್ಲಾನ್ ಬಿಡುಗಡೆ

ಮುಂಬೈ : ಹೊಸ ಹೋಮ್ ಬ್ರಾಡ್‌ಬ್ಯಾಂಡ್ “ಬ್ಯಾಕ್-ಅಪ್ ಪ್ಲಾನ್” ಅನ್ನು ಜಿಯೋ ಘೋಷಿಸಿದೆ. ಈ ಬ್ಯಾಕಪ್ ಬ್ರಾಡ್‌ಬ್ಯಾಂಡ್ ಸಂಪರ್ಕವು ಲೈವ್ ಸ್ಪೋರ್ಟ್ಸ್ ಸೇರಿದಂತೆ ಇತರ ವಿಷಯಗಳ ಜೊತೆಗೆ ಮುಂಬರುವ ಟಾಟಾ ಐಪಿಎಲ್ ಪಂದ್ಯಾವಳಿಯ ತಡೆರಹಿತ ಸ್ಟ್ರೀಮಿಂಗ್ ಅನ್ನು ಸಕ್ರಿಯಗೊಳಿಸುತ್ತದೆ. ಬಳಕೆದಾರರು ಒಂದು ಬಟನ್‌ನ ಕ್ಲಿಕ್‌ನಲ್ಲಿ 1/2/7 ದಿನದ ಆಯ್ಕೆಗಳೊಂದಿಗೆ ಮತ್ತು ಅಗತ್ಯವಿರುವಾಗ ವೇಗವನ್ನು (10 MBPS … Continued

ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ವಜಾಗೊಳಿಸಿದ ನಂತರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅರ್ಜಿ ವಜಾಗೊಂಡ ವೇಳೆ ಚನ್ನಗಿರಿಯಲ್ಲಿ ಸರ್ಕಾರಿ … Continued

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ : ಸಿಎಂ ಬೊಮ್ಮಾಯಿ ಆರೋಪ

ಚಿಕ್ಕಬಳ್ಳಾಪುರ : ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆ ಮೇಲೆ ನಡೆದ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು, ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟದ … Continued

ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ ; ಮತ್ತೆ ಬಂಧನದ ಭೀತಿ

ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಕೆ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿಯ ಬಿಜೆಪಿ … Continued

ಒಳಮೀಸಲು ವಿರೋಧಿಸಿ ಪ್ರತಿಭಟನೆ: ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಲಾಠಿ ಚಾರ್ಜ್

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಇಂದು ಸೋಮವಾರ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮನೆಯ ಮುಂದೆ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಯಡಿಯೂರಪ್ಪ ಅವರ ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿ … Continued

ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ

ಬೆಂಗಳೂರು: ಭಾನುವಾರ ರಾಜ್ಯದಲ್ಲಿ ಹೊಸದಾಗಿ 209 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳು 709  ಪ್ರಕರಣಗಳಿವೆ. ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು ಭಾನುವಾರ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ ಎಂದು ತಿಳಿಸಿದೆ.ಭಾನುವಾರ ಬೆಂಗಳೂರು ನಗರದಲ್ಲಿ 120 ಜನರಿಗೆ ಕೊರೊನಾ ಸೋಂಕು … Continued

ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

ಯಾದಗಿರಿ: ವಿದ್ಯುತ್‌ ಅವಘಡದಿಂದ ಬಟ್ಟೆ ಅಂಗಡಿಯೊಂದು ಹೊತ್ತಿ ಉರಿದು ದಂಪತಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದ ವರದಿಯಾಗಿದೆ. ಇಂದು, ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ರಾಗಯ್ಯ (39) ಹಾಗೂ ಅವರ ಪತ್ನಿ ಶಿಲ್ಪ (35) ಮೃತಪಟ್ಟಿದ್ದಾರೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಎರಡು ಅಂಗಡಿಯಲ್ಲಿ ಬಟ್ಟೆ ಅಂಗಡಿಯಿತ್ತು. ಮತ್ತೊಂದರಲ್ಲಿ ದಂಪತಿ ಹಾಗೂ … Continued

ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು ಈಗ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ (JDS) ಉಚ್ಛಾಟಿತ ಶಾಸಕ ಎಸ್‌ಆರ್ ಶ್ರೀನಿವಾಸ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಇಂದು, ಸೋಮವಾರ ತುಮಕೂರಿನಲ್ಲಿ ಮಾತನಾಡಿದ ಶಾಸಕ ಎಸ್.ಆರ್ ಶ್ರೀನಿವಾಸ ಅವರು, ನಾನು ನೋವಿನಿಂದ ಜೆಡಿಎಸ್‌ಗೆ … Continued

ಅವೈಜ್ಞಾನಿಕ ಮೀಸಲಾತಿ ನಿಗದಿ, ಅಲ್ಪಸಂಖ್ಯಾತರಿಗೆ ವಂಚನೆ : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು:  ಅವೈಜ್ಞಾನಿಕವಾಗಿ  ಮೀಸಲು ನಿಗದಿ ಮಾಡಲಾಗಿದೆ ಹಾಗೂ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಿತ್ತುಕೊಂಡು  ರಾಜ್ಯ ಸರ್ಕಾರ ವಂಚನೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ನಾಯಕ ರಣದೀಪ್‍ಸಿಂಗ್ ಸುರ್ಜೇವಾಲ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಡಿ.ಕೆ.ಶಿವಕುಮಾರ್ … Continued

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ಗೆ ಶಾಕ್‌: ಜೆಡಿಎಸ್‌ ಸೇರಿದ ಸಂಭಾವ್ಯ ಕಾಂಗ್ರೆಸ್‌ ಅಭ್ಯರ್ಥಿ…!

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ದಳಪತಿಗಳು ಜೆಡಿಎಸ್‌ ಕಾಂಗ್ರೆಸ್‌ಗೆ ಶಾಕ್‌ ನೀಡಿದೆ. ಚನ್ನಪಟ್ಟಣದ ಮತಕ್ಷೇತ್ರದ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಪ್ರಸನ್ನಗೌಡ ಪಿ ಜೆಡಿಎಸ್‌ ಸೇರಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ಇವರಿಗೆ ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಆದರೆ, ಮೊದಲ ಪಟ್ಟಿಯಲ್ಲಿ ಚನ್ನಪಟ್ಟಣಕ್ಕೆ ಟಿಕೆಟ್‌ ಘೋಷಣೆ ಮಾಡಿರಲಿಲ್ಲ. ಇದರಿಂದ ಬೇಸರಗೊಂಡ ಪ್ರಸನ್ನಗೌಡ ಜೆಡಿಎಸ್‌ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈಸೂರಿನ ಚಾಮುಂಡಿ … Continued