ಗೋಕರ್ಣ: 10 ಲಕ್ಷ ರೂ.ಮೌಲ್ಯದ ಡ್ರಗ್ಸ್‌ ವಶ, ಮೂವರ ಬಂಧನ

ಕಾರವಾರ: ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ 10 ಲಕ್ಷ ರೂ.ಅಂದಾಜು ಬೆಲೆಯ (1648ಗ್ರಾಂ) ಚರಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂಲತಃ ನೇಪಾಳದ ಹಾಲಿ ಕುಡ್ಲೆ ಬೀಚ್ ನಿವಾಸಿ ಸಂತ ಬಹದ್ದೂರ ತಮಂಗ್ ಹಾಗೂ ಬೇಲೆಹಿತ್ತಲಿನ ತುಳಸು ಹಮ್ಮು ಗೌಡ, ಮೂಲೇಕೇರಿಯ ಶ್ರೀಧರ ಗೌಡ ಎಂಬವರನ್ನು ಬಂಧಿಸಲಾಗಿದ್ದು, ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಓಂ … Continued

5, 8ನೇ ತರಗತಿ ಬೋರ್ಡ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ಮೌಲ್ಯಾಂಕನ (ಬೋರ್ಡ್‌) ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಪರೀಕ್ಷೆ ಮಾರ್ಚ್‌ 27ರಿಂದ ಏಪ್ರಿಲ್‌ 1ರ ವರೆಗೆ ಪರೀಕ್ಷೆ ನಡೆಯಲಿದೆ. 5ನೇ ತರಗತಿ ಮಕ್ಕಳಿಗೆ ಮಾರ್ಚ್‌ 27ರಿಂದ 30ರ ವರೆಗೆ ನಡೆಯಲಿದೆ ಹಾಗೂ 8ನೇ ತರಗತಿಗೆ ಮಾರ್ಚ್‌ 27ರಿಂದ … Continued

ಮೂಡಿಗೆರೆ: ಶಾಸಕ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿ ಯಡಿಯೂರಪ್ಪಗೆ ಘೇರಾವ್‌, ಬಿಎಸ್‌ವೈ ರೋಡ್‌ ಶೋ ರದ್ದು

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ವಿಧಾನಸಭೆ ಟಿಕೆಟ್‌ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಿ ಘೇರಾವ್ ಹಾಕಿದ ನಂತರ ಬಿಜೆಪಿಯೊಳಗಿನ ಭಿನ್ನಾಭಿಪ್ರಾಯ ಬಹಿರಂಗಕ್ಕೆ ಬಂದಂತಾಗಿದೆ. ಗುರುವಾರ ಮಧ್ಯಾಹ್ನ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ನೇತೃತ್ವ ವಹಿಸಲು ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಮೂಡಿಗೆರೆ ಕ್ಷೇತ್ರದಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು. … Continued

ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಕಾರು ಅಪಘಾತ

ವಿಜಯಪುರ: ಜಿಲ್ಲೆಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನ ಜ್ಯೋತಿ (Sadhvi Niranjan Jyoti) ಅವರು ಪ್ರಯಾಣಿಸುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಸಚಿವೆಗೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ವಿಜಯಪುರ‌-ಹುಬ್ಬಳ್ಳಿ … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರವೂ ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ. ಅಲ್ಲದೆ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ, … Continued

ಚುನಾವಣಾ ಕಾರ್ಯದಲ್ಲಿರುವ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ರಾಜ್ಯ ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕು: ಮುಖ್ಯ ಕಾರ್ಯದರ್ಶಿಗೆ ಸಿಇಒ ಪತ್ರ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ (ಎಸ್‌ಇಸಿ) ಸಮಾಲೋಚನೆಯಿಲ್ಲದೆ ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆ ಮಾಡಿರುವುದನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ ಆಕ್ಷೇಪಿಸಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿರುವ ಅವರು, 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ ಮತ್ತು ಭಾರತ ಚುನಾವಣಾ ಆಯೋಗವು ಮಾದರಿ ನೀತಿ … Continued

ಹುಬ್ಬಳ್ಳಿ – ಬನಾರಸ್ ನಡುವೆ ಬೇಸಿಗೆಯ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ : ಬೇಸಿಗೆ ರಜೆಯ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆಗೊಳಿಸಲು ಒಂದು ಟ್ರಿಪ್‌ ಬೇಡಿಕೆಯ ಮೇರೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಮತ್ತು ಬನಾರಸ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲ್‌ (07347 ಮತ್ತು 07348) ಅನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ ಎಂದು ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಈ ವಿಶೇಷ ಬೇಸಿಗೆ ರೈಲು ಸಂಖ್ಯೆ … Continued

ಚುನಾವಣೆ ಸನಿಹದಲ್ಲೇ ಯಡಿಯೂರಪ್ಪ ಆಪ್ತ, ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಹುಬ್ಬಳ್ಳಿಯ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ಅವರು ಬೆಳಗಾವಿಯಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳಿವೆ. ಗುರುವಾರ ಬಿಜೆಪಿ … Continued

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ: ಮೂವರ ಬಂಧನ

ಬೆಂಗಳೂರು: ರೈಲ್ವೆ ನಿಲ್ದಾಣದ ಮುಂದೆ ಡ್ರಮ್‌ನಲ್ಲಿ ಪತ್ತೆಯಾದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿರುವ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯನ್ನು ಬಿಹಾರ ರಾಜ್ಯದ ಅರಾರಿಯಾ ಜಿಲ್ಲೆ ನಿವಾಸಿ ತಮನ್ನಾ(27) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಿಹಾರ ಮೂಲದ ರಾಜ್ಯದ ಕಮಾಲ್(21), ತನ್ವೀರ್(28), ಶಾಕೀಬ್(25) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಉಳಿದ … Continued

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳ-ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ನೌಕರರು ಹಾಗೂ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಈ ಬಗ್ಗೆ ಆದೇಶ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವೇತನವನ್ನು ಶೇ.15 ರಷ್ಟು ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ಹಾಗೂ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ನೌಕರರ ವೇತನವನ್ನು ಶೇ.20 ರಷ್ಟು ಹೆಚ್ಚಳ … Continued