ಉಡುಪಿ: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ, ಮತ್ತೋರ್ವ ಆರೋಪಿ ಬಂಧನ

ಉಡುಪಿ: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ ನೌಕರರು ಭಾರತದ ನೌಕಾಪಡೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅಕ್ರಮವಾಗಿ ಶೇರ್ ಮಾಡಿ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ಆನಂದ ತಾಲೂಕಿನ ಕೈಲಾಸ ​ನಗರದ ಹೀರೇಂದ್ರಕುಮಾರ (34) ಬಂಧಿತ ಆರೋಪಿಯಾಗಿದ್ದಾನೆ.  ಈ ಪ್ರಕರಣದಲ್ಲಿ ಈಗ  ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ. … Continued

ಕರ್ನಾಟಕದಲ್ಲಿ ತಾಪಮಾನ ತೀವ್ರ ಕುಸಿತ ; ಇಂದು ಸಹ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವ್ಯಾಪಕ ಚಳಿ ಬೀಳುತ್ತಿದ್ದು, ಸೋಮವಾರವೂ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ (Karnataka Districts) ಕನಿಷ್ಠ ತಾಪಮಾನ ಒಂದಂಕಿಗೆ ಇಳಿದಿದ್ದು, ಬೀದರಿನಲ್ಲಿ ದಾಖಲೆಯ ಮಟ್ಟದ ಚಳಿ ದಾಖಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗಿನ ಸಮಯದಲ್ಲಿ ಮಂಜು ಮತ್ತು ಶೀತಗಾಳಿ ಸಾಮಾನ್ಯವಾಗಿದೆ. ಡಿಸೆಂಬರ್ … Continued

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಮಠಕ್ಕೆ ಬಂದಿದ್ದ ಅಪ್ರಾಪ್ತ ಭಕ್ತೆಯನ್ನು ತನ್ನ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿ ಸ್ವಾಮೀಜಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಆದೇಶ ನೀಡಿದೆ. ರಾಯಬಾಗ (Raybag) ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ … Continued

ಧರ್ಮಸ್ಥಳ ಪ್ರಕರಣ ; ಪೊಲೀಸ್‌ ರಕ್ಷಣೆ ಕೋರಿದ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ, ತನಗೆ ಜೀವ ಬೆದರಿಕೆ ಹಾಕಬಹುದು, ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕಾಗಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಹೇಶ ಶೆಟ್ಟಿ ತಿಮರೋಡಿ, ಗಿರೀಶ … Continued

ಸರ್ಕಾರಿ ನೌಕರರು ಸಭ್ಯ ಉಡುಪು ಧರಿಸಬೇಕು ; ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ನೌಕರರು (Govt Employees) ಸಭ್ಯ ಉಡುಪು ಧರಿಸುವಂತೆ ಸರ್ಕಾರ ಆದೇಶ ಮಾಡಿದೆ. ಸಭ್ಯ ಉಡುಪು ಧರಿಸದ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಸರ್ಕಾರ ಖಡನ್ ಸೂಚನೆ ಮಾಡಿದೆ. ಕಚೇರಿ ಸಮಯದಲ್ಲಿ ಅನಧಿಕೃತವಾಗಿ ಹೊರ ಹೋಗುವವರನ್ನು ಮೇಲಾಧಿಕಾರಿಗಳು ನಿಯಂತ್ರಿಸಲು ಸೂಚಿಸಲಾಗಿದೆ. ಅನಿವಾರ್ಯ ಸಂದರ್ಭದಲ್ಲಿ ಕಡ್ಡಾಯವಾಗಿ ಸಕಾರಣ ನೀಡಿ ಹೊರಗೆ ಹೋಗುವಂತೆ ತಿಳಿಸಿದೆ. ಸಿಬ್ಬಂದಿ … Continued

ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ : ಅಧಿಕಾರ ಹಂಚಿಕೆ ಬಗ್ಗೆ ಮಾರ್ಮಿಕವಾಗಿ ಹೇಳಿದ ಡಿ.ಕೆ ಶಿವಕುಮಾರ

ಕಾರವಾರ: ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ಮುಂದೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ  ಹೇಳಿದ್ದಾರೆ. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು,  ನಾನು ಅವರು ಐದು ವರ್ಷ ಇರಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ … Continued

ಹೊನ್ನಾವರ : ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ಸಾವು

ಹೊನ್ನಾವರ : ಅರಬ್ಬೀ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿದ್ಯಾರ್ಥಿಗಳಾದ ಮದನ್ ನಾರಾಯಣ ಖಾರ್ವಿ (17) ಮತ್ತು ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಜೆ 6:30ರ ಸುಮಾರಿಗೆ ತಮ್ಮ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ … Continued

ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ, ಹಲವು ಜಿಲ್ಲೆಗಳಲ್ಲಿ ತೀವ್ರ ಚಳಿ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಶುಕ್ರವಾರ (ಡಿಸೆಂಬರ್ 19) ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತಗಾಳಿಯ ಜೋರಾಗಿ ಬೀಸಲಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಭಾಗದ ನಾಲ್ಕು ಜಿಲ್ಲೆಗಳಲ್ಲಿ ತೀವ್ರವಾದ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ  ಕನಿಷ್ಠ ತಾಪಮಾನ 12 ರಿಂದ 14 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. … Continued

ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿ : ಡಾ. ಪರಮೇಶ್ವರ

ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 3,600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಜಗದೇವ ಗುತ್ತೇದಾರ ಪ್ರಶ್ನೆಗೆ ಉತ್ತರ ನೀಡಿದ ಅವರು, ಒಳಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ … Continued

ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಮತ್ತೆ ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ಸಹಾಯಕ ಆಯುಕ್ತರು ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ … Continued