ಐಪಿಎಸ್ ಅಧಿಕಾರಿ ಆರ್.ದಿಲೀಪ್ ನಿಧನ

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ಆರ್. ದಿಲೀಪ್ ಅವರು ಬಹು ಅಂಗಾಂಗ ವೈಫಲ್ಯದಿಂದ ಇಂದು, ಶುಕ್ರವಾರ ನಿಧನ ಹೊಂದಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಪಿಯಾಗಿದ್ದ ದಿಲೀಪ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಯಕೃತ್ತು ಕಸಿ ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ನಂತರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಅಪೋಲೊ … Continued

ಕಳಸಾ-ಬಂಡೂರಿ ಯೋಜನೆ ಡಿಪಿಆರ್ ಕುರಿತ ಆದೇಶದಲ್ಲಿ ದಿನಾಂಕ ಇಲ್ಲ, ಇದನ್ನು ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ : ಎಚ್ ಕೆ ಪಾಟೀಲ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ ಇಲ್ಲ. ದಿನಾಂಕ ಇಲ್ಲದಿದ್ದರೆ ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ. ಇದು ನಿರ್ಗತಿಕ ಕೂಸಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಎಚ್‌.ಕೆ.ಪಾಟೀಲ … Continued

ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆಯವರು ತಾಳಿ ಕಟ್ಟಬಾರದು : ದೇವರ ಹುಂಡಿಯಲ್ಲಿ ಸಿಕ್ಕಿತು ಈ ಪತ್ರ

ಚಾಮರಾಜನಗರ: ತನ್ನ ಪ್ರೀತಿಯ ಬಗ್ಗೆ ದೇವರಲ್ಲಿ ನಿವೇದನೆ ಮಾಡಿಕೊಂಡು ಪ್ರೀತಿಸಿದವನನ್ನೇ ತಾನು ಮದುವೆ ಆಗಬೇಕು ಎಂದು ಬಯಸಿದ ಪ್ರೇಯಸಿಯೊಬ್ಬಳು ತಾನು ಪ್ರೀತಿಸಿದವನೇ ತನಗೆ ತಾಳಿ ಕಟ್ಟಬೇಕು ಎಂದು ಪತ್ರ ಬರೆದು ದೇವಿ ದೇಗುಲದ ಹುಂಡಿಗೆ ಹಾಕಿದ್ದಾಳೆ. ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು ಎಂದು ಪ್ರೇಮಿ ದೇವರಿಕೆ ಹರಕೆ … Continued

ಧಾರವಾಡ: ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ ಹಾವಿನ ತಲೆಯಲ್ಲಿದ್ದ ಕ್ಯಾನ್ಸರ್‌ ತರಹದ ಗಡ್ಡೆ ಹೊರತೆಗೆದ ವೈದ್ಯರು..!

ಧಾರವಾಡ : ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಅದರಲ್ಲಿದ್ದ ಕ್ಯಾನ್ಸರ್ ಕಾರಕ ಗಡ್ಡೆಯನ್ನು ಹೊರತೆಗೆದ ಅಪರೂಪದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಾಣಿ ವೈದ್ಯ ಡಾ. ಅನಿಲಕುಮಾರ ಪಾಟೀಲ ಅವರು ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮನೆಯೊಂದರಲ್ಲಿ ಹಾವು ಸೇರಿಕೊಂಡಿರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ ಉರಗ ರಕ್ಷಕ ಸೋಮಶೇಖರ ಅವರು ಆ ಮನೆಗೆ ಹೋಗಿ ನೋಡಿದಾಗ ಅದು ಟ್ರಿಂಕೆಟ್ … Continued

ಲಿಂಗಾಯತ, ಒಕ್ಕಲಿಗರಿಗೆ 2C, 2D ಪ್ರವರ್ಗ ಮೀಸಲಾತಿ: ಇಡಬ್ಲ್ಯುಎಸ್‌ನಿಂದ ಮೀಸಲು ಮರುಹಂಚಿಕೆ ಮಾಡಲಿದೆ ಸರ್ಕಾರ

ಬೆಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂಬ ಲಿಂಗಾಯತ ಪಂಚಮಸಾಲಿ ಸಮುದಾಯ ಹಾಗೂ ಒಕ್ಕಲಿಗರ ಬೇಡಿಕೆಗೆ ಮನ್ನಣೆ ನೀಡಿರುವ ಸರ್ಕಾರ, ಈ ಎರಡೂ ಸಮುದಾಯಗಳಿಗೆ ಈಗ ಹೊಸ ಪ್ರವರ್ಗವನ್ನೇ ಸೃಷ್ಟಿಸಿದೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳ (EWS) ಮೀಸಲಾತಿ ಪ್ರಮಾಣದಲ್ಲಿನ ಶೇ6 ಅಥವಾ 7ರಷ್ಟು ಮೀಸಲಾತಿಯನ್ನು ಪಂಚಮಸಾಲಿ ಸೇರಿ ವೀರಶೈವ ಲಿಂಗಾಯತ ಸುಮದಾಯ, ಒಕ್ಕಲಿಗರಿಗೆ ನೀಡಲು ರಾಜ್ಯ … Continued

ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿದ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್‌ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ವಿದ್ಯುತ್‌ ನಿಗಮಗಳಾದ ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲಕುಮಾರ ಅವರು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ … Continued

ಲಿಂಗಾಯತ ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ: ಇದಕ್ಕಾಗಿ ಪ್ರತ್ಯೇಕ ಪ್ರವರ್ಗ 2C, 2D ರಚನೆಗೆ ರಾಜ್ಯ ಸಂಪುಟ ಸಭೆ ತೀರ್ಮಾನ

ಬೆಳಗಾವಿ : ಕರ್ನಾಟಕದ ಎರಡು ಪ್ರಬಲ ಸಮುದಾಯದವಾಗಿರುವ ಲಿಂಗಾಯತ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಕೆಟಗರಿ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. … Continued

ಶಿರಸಿ: ಬಸ್‌ನಲ್ಲಿ ಬಿಟ್ಟುಹೋಗಿದ್ದ 8 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಇದ್ದ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮರೆದ ಚಾಲಕ, ನಿರ್ವಾಹಕ

ಶಿರಸಿ: ಸಾರಿಗೆ ಸಂಸ್ಥೆ ಬಸ್‌ನಲ್ಲಿ ಬಿಟ್ಟು ಹೋಗಿದ್ದ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಮರಳಿ ಪ್ರಯಾಣಿಕರಿಗೆ ನೀಡಿ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಹಾನಗಲ್ ಶಿರಸಿ ಮಾರ್ಗವಾಗಿ ಸಂಚರಿಸುವ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ಇಸಳೂರಿನಿಂದ ಕವಿತಾ ಹಾಗೂ ಅವರ ಪುತ್ರ ಬಸ್ ಹತ್ತಿ ಶಿರಸಿಗೆ ಬಂದಿದ್ದರು. ಆದರೆ, ಅವರು ಬಸ್ ಇಳಿಯುವ ಗಡಿಬಿಡಿಯಲ್ಲಿ … Continued

ಕರ್ನಾಟಕದ ಅತ್ಯಂತ ಅಗತ್ಯದ ಕಳಸಾ-ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರದಿಂದ ಅನುಮತಿ : ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಇಂದು, ಗುರುವಾರ ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ -ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟರಿನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವ ಅಮಿತ್ … Continued

ಗಡಿ ವಿವಾದದ ನಂತರ ಈಗ ಆಲಮಟ್ಟಿ ಜಲಾಶಯದ ಎತ್ತರಕ್ಕೆ ಮಹಾರಾಷ್ಟ್ರ ತಕರಾರು

ನಾಗ್ಪುರ : ಕರ್ನಾಟಕದ ಜೊತೆಗೆ ಗಡಿ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸರ್ಕಾರ, ಈಗ ಕೃಷ್ಣಾ ನದಿಗೆ ಕಟ್ಟಲಾಗಿರುವ ಆಲಮಟ್ಟಿ ಆಣೆಕಟ್ಟ ವಿಷಯವನ್ನೂ ಸುಪ್ರೀಂಕೋರ್ಟ್‌ಗೆ ಕೊಂಡೊಯ್ಯುವ ಬೆದರಿಕೆ ಹಾಕಿದೆ. ಈ ಕುರಿತು ಬುಧವಾರ ವಿಧಾನಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಮಹಾರಾಷ್ಟ್ರವು ಪ್ರವಾಹದ ಪರಿಣಾಮದ ಕುರಿತು ನಡೆಸಲಾಗುತ್ತಿರುವ ಅಧ್ಯಯನವನ್ನು ಪೂರ್ಣಗೊಳಿಸುವ ವರೆಗೆ ಆಲಮಟ್ಟಿ ಜಲಾಶಯ ಎತ್ತರಿಸುವ … Continued