ಗಡಿ ವಿವಾದದ ನಂತರ ಈಗ ಆಲಮಟ್ಟಿ ಜಲಾಶಯದ ಎತ್ತರಕ್ಕೆ ಮಹಾರಾಷ್ಟ್ರ ತಕರಾರು

ನಾಗ್ಪುರ : ಕರ್ನಾಟಕದ ಜೊತೆಗೆ ಗಡಿ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸರ್ಕಾರ, ಈಗ ಕೃಷ್ಣಾ ನದಿಗೆ ಕಟ್ಟಲಾಗಿರುವ ಆಲಮಟ್ಟಿ ಆಣೆಕಟ್ಟ ವಿಷಯವನ್ನೂ ಸುಪ್ರೀಂಕೋರ್ಟ್‌ಗೆ ಕೊಂಡೊಯ್ಯುವ ಬೆದರಿಕೆ ಹಾಕಿದೆ. ಈ ಕುರಿತು ಬುಧವಾರ ವಿಧಾನಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಮಹಾರಾಷ್ಟ್ರವು ಪ್ರವಾಹದ ಪರಿಣಾಮದ ಕುರಿತು ನಡೆಸಲಾಗುತ್ತಿರುವ ಅಧ್ಯಯನವನ್ನು ಪೂರ್ಣಗೊಳಿಸುವ ವರೆಗೆ ಆಲಮಟ್ಟಿ ಜಲಾಶಯ ಎತ್ತರಿಸುವ … Continued

ಶಿವಮೊಗ್ಗ: ಪ್ರಚೋದನಾಕಾರಿ ಭಾಷಣ, ಬಿಜೆಪಿಯ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್ ವಿರುದ್ಧ ದೂರು ದಾಖಲು

ಶಿವಮೊಗ್ಗ: ಇತ್ತೀಚೆಗೆ ಹಿಂದೂಪರ ಸಂಘಟನೆಯೊಂದು ಆಯೋಜಿಸಿದ್ದ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಸುಂದರೇಶ ಅವರು ನೀಡಿದ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ … Continued

ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಕುಡಿದು ಕುಡಿದು ಟೈಟ್‌ ಆದವರಿಗೆ ಪೊಲೀಸರಿಂದ ಆಂಬುಲೆನ್ಸ್ ವ್ಯವಸ್ಥೆ…!

ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮುಳುಗಿ ತೇಲಾಡುವ ಮಂದಿ ಸುರಕ್ಷತೆಗೆ ಬೆಂಗಳೂರು ಪೊಲೀಸ್ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಯಾರೇ ಕುಡಿದು ಟೈಟಾದರೂ ಅವರಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಡಿಸೆಂಬರ್‌ 31ರ ರಾತ್ರಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ. ಬಾಬಾ ಅವರು ಈ ಮೂಲಕ … Continued

ಪಿರಿಯಾಪಟ್ಟಣ : ಕಿಡಿಗೇಡಿಗಳಿಂದ ಚರ್ಚಿನ ಬಾಲ ಏಸುವಿನ ಪ್ರತಿಮೆ ಭಗ್ನ ; ಹಣ, ಕಾಣಿಕೆ ಡಬ್ಬಿ ಕಳ್ಳತನ

ಮೈಸೂರು: ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯ ಸೇಂಟ್‌ ಮೇರಿಸ್‌ ಚರ್ಚ್‌ನಲ್ಲಿ ಕಿಡಿಗೇಡಿಗಳು ಹಲವು ವಸ್ತುಗಳಿಗೆ ಹಾನಿಯುಂಟು ಮಾಡಿದ್ದು, ಹಣವನ್ನು ದೋಚಿದ್ದಾರೆ. ಪೊಲೀಸರ ಪ್ರಕಾರ, ಮಂಗಳವಾರ ಅಪರಿಚಿತ ವ್ಯಕ್ತಿಗಳು ಚರ್ಚಿಗೆ ಹಾನಿ ಮಾಡಿದ್ದಾರೆ. ಚರ್ಚ್‌ನ ಬಾಲ ಏಸುವಿನ ಪ್ರತಿಮೆಗೆ ಹಾನಿ ಮಾಡಿ ದೇಣಿಗೆ ಪೆಟ್ಟಿಗೆಯಲ್ಲಿದ್ದ ಹಣವನ್ನು ದೋಚಿದ್ದಾರೆ. ಸೇಂಟ್‌ ಮೇರಿಸ್‌ ಚರ್ಚ್ ಅನ್ನು ಕ್ರಿಸ್‌ಮಸ್‌ ಅಂಗವಾಗಿ ಲೈಟಿಂಗ್‌ನಿಂದ ಸಿಂಗರಿಸಿ … Continued

ರಾಜ್ಯಕ್ಕೆ ಅಮಿತ್ ಶಾ 3 ದಿನಗಳ ಪ್ರವಾಸ: ಚುನಾವಣಾ ಸಿದ್ಧತೆಗಳ ಬಗ್ಗೆಯೂ ಚರ್ಚೆ

ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಆರಂಭಿಕ ತಯಾರಿ ಶುರು ಮಾಡಿದ್ದು, ತಯಾರಿ ನಡೆಯುತ್ತಿರುವ ವೇಳೆಯೇ ವೇಳೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಲಿದ್ದಾರೆ. ಅವರು ಡಿಸೆಂಬರ್ 30 ರಂದು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ … Continued

ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ಖಂಡನೆ

ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಪುನರ್ ರಚನಾ ಕಾಯ್ದೆ 1956 ರಲ್ಲಿ ರೂಪಿಸಿ ಇಷ್ಟು ವರ್ಷಗಳಾಗಿವೆ. ಎರಡೂ ಕಡೆಯ ಜನ ನೆಮ್ಮದಿಯಿಂದಿದ್ದಾರೆ. ಮಹಾರಾಷ್ಟ್ರದ ನಾಯಕರು ರಾಜಕಾರಣಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ … Continued

ಜನವರಿ 2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಳಗಾವಿ: ರಾಜ್ಯ ಬಿಜೆಪಿ ವತಿಯಿಂದ ಜನವರಿ 2ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ ಆಯೋಜಿಸಲಾಗಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಇಂದು, ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 58,156 … Continued

ಅತ್ತ ಮಹಾರಾಷ್ಟ್ರದಿಂದ ಗಡಿ ಠರಾವು ; ಇತ್ತ ಸಿಎಂ ಬೊಮ್ಮಾಯಿ ಭೇಟಿಗೆ ಬೆಳಗಾವಿಗೆ ಬಂದ ಮಹಾರಾಷ್ಟ್ರದ ಗಡಿ ಭಾಗದ ಕನ್ನಡಿಗರು

ಬೆಳಗಾವಿ: ನಾಗ್ಪುರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿಧಾನ ಮಂಡಲದ ಅಧಿವೇಶನಲ್ಲಿ ಮಂಗಳವಾರ ಕರ್ನಾಟಕದ ಮಹಾರಾಷ್ಟ್ರ ಸರ್ಕಾರ ವಿರುದ್ಧ ಗಡಿ ಠರಾವು ಅಂಗೀಕರಿಸಿದೆ. ಕರ್ನಾಟಕದ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಠರಾವು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಇತ್ತ ಮಹಾರಾಷ್ಟ್ರಕ್ಕೆ ಸೇರಿರುವ ಜತ್ತ ತಾಲೂಕಿನ ಕನ್ನಡಿಗರು ಬೆಳಗಾವಿಗೆ ಆಗಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಲಕ ನೆರವಿಗೆ ಒತ್ತಾಯಿಸಿದ್ದಾರೆ. ಕರ್ನಾಟಕ … Continued

ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಳಗಾವಿ: ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕವು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರವಾಯಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದ್ದ ವಿಧೇಯಕವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದ ಪರ್ಯಾಲೋಚನೆಗೆ ಹಾಕಿದರು. ನಂತರ ವಿಧೇಯಕವು ಧ್ವನಿಮತದ ಮೂಲಕ ಅಂಗೀಕಾರಗೊಂಡಿತು. ಬೆಂಗಳೂರು ಮಹಾನಗರದ ಭೂಸಾರಿಗೆ ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಒಂದೇ ಸಂಸ್ಥೆ … Continued

ಯಲ್ಲಾಪುರ: ಪಿಕ್ನಿಕ್‌ಗೆ ಹೋಗಿದ್ದ ವಿದ್ಯಾರ್ಥಿ ಗಂಗಾವಳಿ ನದಿಯಲ್ಲಿ ಮುಳುಗಿ ಸಾವು

ಯಲ್ಲಾಪುರ: ಶಾಲೆಯ ವತಿಯಿಂದ ಪಿಕ್ನಿಕ್‌ಗೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಗಂಗಾವಳಿ ನದಿಯಲ್ಲಿ ಮುಳುಗಿ ಹೋಗಿ ಸಾವು ಕಂಡ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯ ಪ್ರಕಾಶ ವಿಠ್ಠು ಪಟಕಾರೆ (೧೬) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು … Continued