ಒಳಾಂಗಣ, ಹವಾನಿಯಂತ್ರಿತ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸೂಚನೆ, ಐಎಲ್‌ಐ, ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್‌ ಪರೀಕ್ಷೆ: ಡಾ.ಕೆ.ಸುಧಾಕರ

ಬೆಳಗಾವಿ: ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ (ILI & SARI) ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, … Continued

ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (Karnataka School Examination and Evaluation Board) 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸಿದೆ. 2022-23ನೇ … Continued

ಪಂಚಮಸಾಲಿ ಮೀಸಲಾತಿ ಹೋರಾಟ: ಹಿಂದುಳಿದ ವರ್ಗಗಳ ಆಯೋಗದಿಂದ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ಬೆಳಗಾವಿ : 2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಗುರುವಾರ ಪಂಚಮಸಾಲಿ ಬೃಹತ್‌ ಸಮಾವೇಶ ನಡೆಯಲಿದ್ದು, ಇದರ ನಡುವೆಯೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರು ಪಂಚಮಸಾಲಿ ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಇದು ಮಹತ್ವ ಪಡೆದಿದೆ. ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ … Continued

ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಶಿಕ್ಷಕರಿಗೆ 17 ಸೇವಾ ಸೌಲಭ್ಯ ಮಂಜೂರು ಮಾಡಿ : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಕರಿಗೆ 17 ಸೇವಾ ಸೌಲಭ್ಯಗಳನ್ನು ಮಂಜೂರು ಮಾಡುವಾಗ ಕಡ್ಡಾಯವಾಗಿ ಆನ್ ಲೈನ್ ಮುಖಾಂತರವೇ ಪ್ರಸ್ತಾವನೆಗಳನ್ನು ಸ್ವೀಕರಿಸಿ ಇತ್ಯರ್ಥಪಡಿಸಬೇಕು. ಅದರ ಹೊರತಾಗಿ ಯಾವುದೇ ಕಾರಣಕ್ಕೂ ಭೌತಿಕವಾಗಿ ಪ್ರಸ್ತಾವನೆ ಸ್ವೀಕರಿಸದಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಂಡು, ಶಿಕ್ಷಕರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ … Continued

ಸಿದ್ದಾಪುರ: ʼಕ್ಷೀರಭಾಗ್ಯ’ದ ಹಾಲು ಕುಡಿದು ಶಾಲಾ ಮಕ್ಕಳು ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕ್ಯಾದಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕ್ಷೀರಭಾಗ್ಯ ಯೋಜನೆಯ ಹಾಲು ಕುಡಿದ ಕೆಲ ಮಕ್ಕಳು ಅಸ್ವಸ್ಥಗೊಂಡ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವಿದ್ಯಮಾನ ವರದಿಯಾಗಿದೆ. ಸಿದ್ದಾಪುರ ತಾಲೂಕಿನ ಕ್ಯಾದಗಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಬೆಳಿಗ್ಗೆ 10:30ಕ್ಕೆ ಎಂದಿನಂತೆ ಕ್ಷೀರಭಾಗ್ಯ ಯೋಜನೆ ಅಡಿ ಮಕ್ಕಳು ಹಾಲನ್ನು ಸೇವಿಸಿದ್ದಾರೆ. … Continued

ಗುರುವಾರ ಲಿಂಗಾಯತ ಪಂಚಮಸಾಲಿ ಸಮಾವೇಶ: ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48ರಲ್ಲಿ ಮಾರ್ಗ ಬದಲಾವಣೆ

ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮಾಜದವರು ಗುರುವಾರ (ಡಿಸೆಂಬರ್‌ 22) ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಮಾರ್ಗದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಸುವರ್ಣ ವಿಧಾನ ಸೌಧದಲ್ಲಿ ವಿಧಾನ ಮಂಡಲದ ಚಳಗಾಲದ ಅಧಿವೇಶನ ನಡೆಯುತ್ತಿದ್ದು, ಡಿಸೆಂಬರ್‌ 22ರಂದು ಪಂಚಮಸಾಲಿ ಸಮಾಜದವರು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ. ಆ ಕಾಲಕ್ಕೆ ಲಕ್ಷಾಂತರ ಜನರು ಹಿರೇಬಾಗೇವಾಡಿಯಿಂದ … Continued

ಗಡಿ ವಿವಾದ: ಕರ್ನಾಟಕಕ್ಕೆ ನೀರು ಹರಿಸುವುದನ್ನು ಮರುಪರಿಶೀಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಮಹಾರಾಷ್ಟ್ರ ಸಚಿವ

ನಾಗ್ಪುರ : ಗಡಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಸಚಿವ ಶಂಭುರಾಜ್‌ ದೇಸಾಯಿ, ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಕರ್ನಾಟಕಕ್ಕೆ ನದಿ ನೀರು ಪೂರೈಕೆ ಮಾಡುವ ಬಗ್ಗೆ ಮ=ಹಾರಾಷ್ಟ್ರ ಮರುಪರಿಶೀಲನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ … Continued

ಪದ್ಮಶ್ರೀ ಪುರಸ್ಕೃತ ಖ್ಯಾತ ಗಮಕ ಕಲಾವಿದ ಕೇಶವಮೂರ್ತಿ ವಿಧಿವಶ

ಶಿವಮೊಗ್ಗ: ಪದ್ಮಶ್ರೀ ಪುರಸ್ಕೃತ ಖ್ಯಾತ ಗಮಕ ಗಾಯನ ಕಲಾವಿದ ಹೊಸಹಳ್ಳಿ ಆರ್. ಕೇಶವಮೂರ್ತಿ (88) ಅವರು ವಿಧಿವಶರಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಹೊಸಹಳ್ಳಿ ಗ್ರಾಮದ ಆರ್ ಕೇಶವಮೂರ್ತಿ ಅವರು ಮೂರ್ನಾಲ್ಕು ದಿನಗಳ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು, ಇಂದು, ಬುಧವಾರ ಅವರು ಅವರು ಸ್ವಃಗೃಹದಲ್ಲಿ ನಿಧನರಾಗಿದ್ದಾರೆ. ಅವರು 82 ವರ್ಷದ ಪತ್ನಿ ರಾಜೇಶ್ವರಿ ಹಾಗೂ ಪುತ್ರಿ ಉಷಾ ಅವರನ್ನು … Continued

ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ‌

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಬೇರೆ ಯಾರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ‌ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಂಗಾಮಿ ಸಭಾಪತಿಯಾಗಿದ್ದ ರಘುನಾಥ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. … Continued

ಚೀನಾ ನುಗ್ಗಿದಂತೆ ನಾವು ಕರ್ನಾಟಕಕ್ಕೆ ನುಗ್ಗುತ್ತೇವೆ…: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಧ್ಯೆ ಕಿಡಿ ಹೊತ್ತಿಸಿದ ಸಂಜಯ ರಾವತ್‌

ಮುಂಬೈ: ಗಡಿ ವಿಚಾರವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಹಗ್ಗಜಗ್ಗಾಟ ನಡೆಯುತ್ತಿರುವ ನಡುವೆಯೇ, ‘ಚೀನಾವು ನುಗ್ಗಿದಂತೆ ನಾವೂ ಕರ್ನಾಟಕವನ್ನೂ ಪ್ರವೇಶಿಸುತ್ತೇವೆ’ ಎಂದು ಹೇಳುವ ಮೂಲಕ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವತ್ ಅವರು ಬುಧವಾರ ಹೊಸ ವಿವಾದ ಸೃಷ್ಟಿಸಿದ್ದಾರೆ. ಈ ವಿಚಾರದಲ್ಲಿ ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಚೀನಾ … Continued